Connect with us

bengaluru

ಚೈತ್ರಾ ಕುಂದಾಪುರ ಪ್ರಕರಣ- ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿಕೆ

Published

on

ಚೈತ್ರಾ ಕುಂದಾಪುರ ಮತ್ತು ತಂಡದವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಮಹಜರು, ರಿಕವರಿ ನಡೆಸಿದರು.

ಉಡುಪಿ: ಚೈತ್ರಾ ಕುಂದಾಪುರ ಮತ್ತು ತಂಡದವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಮಹಜರು, ರಿಕವರಿ ನಡೆಸಿದರು.

ದೂರುದಾರ ಗೋವಿಂದ ಬಾಬು ಪೂಜಾರಿ ಅವರಿಂದ ಆರೋಪಿಗಳು ಪಡೆದಿದ್ದರೆನ್ನಲಾದ 5 ಕೋಟಿ ರೂಪಾಯಿಗಳನ್ನು ಯಾವ ರೀತಿ ವಿನಿಯೋಗ ಮಾಡಿದ್ದಾರೆ ಎನ್ನುವುದರ ತನಿಖೆಯನ್ನು ಪೊಲೀಸರು ಆರಂಭಿಸಿದ್ದಾರೆ.

ಆರೋಪಿಗಳು ಈ ಹಣದಿಂದ ಆಸ್ತಿ ಪಾಸ್ತಿ, ಜಮೀನು ಖರೀದಿಸಿರುವ ಶಂಕೆ ಇದ್ದು, ಈ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪುರ, ಉಡುಪಿ ತಾಲೂಕುಗಳಲ್ಲಿ ತಪಾಸಣಾ ಕಾರ್ಯಾಚರಣೆ ನಡೆಸಿದರು.

ಕೆಲವು ಕಡೆ ಮಹಜರು ಮತ್ತು ರಿಕವರಿ ಮಾಡಿದರು.

ಆರೋಪಿಗಳಲ್ಲಿ ಒಬ್ಬನಾಗಿರುವ ಶ್ರೀಕಾಂತ್ ನಾಯಕ್ ನನ್ನು ಜಿಲ್ಲೆಯ ಖಾಸಗಿ ಸೊಸೈಟಿಯೊಂದಕ್ಕೆ ಕರೆದೊಯ್ದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಈ ಸೊಸೈಟಿಯಲ್ಲಿ ಆರೋಪಿಗಳು ಹಣ ಮತ್ತು ಚಿನ್ನ ಅಡವಿರಿಸಿದ ಬಗ್ಗೆ ಆಸ್ತಿ ಪತ್ರ ಸಿಕ್ಕಿದೆ ಎಂದು ಹೇಳಲಾಗಿದೆ.

 

Click to comment

Leave a Reply

Your email address will not be published. Required fields are marked *

bengaluru

ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!

Published

on

ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.

ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.

ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Continue Reading

bengaluru

ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ಡೇಟ್ ಫಿಕ್ಸ್-ಅಶೋಕ್ ಕುಮಾರ್ ರೈ

Published

on

ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು  ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.

ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.

ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ.

ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.

Continue Reading

bengaluru

ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಪ್ರಶಸ್ತಿ

Published

on

ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇದರ 19 ನೇ ವಾರ್ಷಿಕ ಸಾಮಾನ್ಯ ಸಭೆ ಬೆಂಗಳೂರಿನಲ್ಲಿ ಮಹಾಮಂಡಳದ ಅಧ್ಯಕ್ಷೆ ಲಲಿತ ಜಿ. ಟಿ. ದೇವೇಗೌಡ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ಈ ಸಾಮಾನ್ಯ ಸಭೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮುದ್ರಾಂಕ ಶುಲ್ಕ ಪಡೆದು ಹಾಗೂ ಇ-ಸ್ಟಾಂಪಿಂಗ್ ಪ್ರತಿಗಳನ್ನು ಮುದ್ರಿಸಿ ಮಾರಾಟ ಮಾಡಿರುವ ಸಹಕಾರ ಸಂಘಗಳ ಮುಖ್ಯಸ್ಥರನ್ನು ಸನ್ಮಾನಿಸಲಾಗಿದೆ.

2022-23ನೇ ಸಾಲಿನಲ್ಲಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅತಿ ಹೆಚ್ಚು ಮೊತ್ತದ ಇ ಸ್ಟಾಂಪಿಂಗ್ ಮುದ್ರಿಸಿರುವ ಸಂಘ ಎಂಬ ಪ್ರಶಂಸಾ ಫಲಕ ಪಡೆಯಿತು.

ಸಂಘದ ಅಧ್ಯಕ್ಷ ಹಾಗೂ ಮಹಾಮಂಡಳದ ನಿರ್ದೇಶಕ  ಚಿತ್ತರಂಜನ್ ಬೋಳಾರ್ ಅವರಿಗೆ ಲಲಿತ ಜಿ. ಟಿ. ದೇವೇಗೌಡ ಇವರು ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂಘವು ಸತತ 9 ವಗಳಿಂದ ಇ ಸ್ಟಾಂಪಿಂಗ್ ಸೇವೆಗೆ ಪ್ರಶಸ್ತಿಯನ್ನು ಪಡೆದಿರುವುದು ಪ್ರಗತಿಯ ಸಂಖೇತವಾಗಿದೆ

ಮಹಾಮಂಡಳದ ಉಪಾಧ್ಯಕ್ಷ  ಕೆ.ಕೆ ಮಹೇಂದ್ರ ಪ್ರಸಾದ್ ಗೌಡ,  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಶಾಲತಾ.ಪಿ,  ಮಹಾಮಂಡಳದ ನಿರ್ದೇಶಕರು, ಉಪಸ್ಥಿತರಿದ್ದರು.

 

Continue Reading

LATEST NEWS

Trending