Connect with us

BANTWAL

Udupi: ವಿದ್ಯುತ್ ಪ್ರಸರಣ ಮಾರ್ಗ ಸರ್ವೆಗೆ ಆಗಮಿಸಿದ ಅಧಿಕಾರಿಗಳನ್ನು ತಡೆದ ನಾಗರಿಕರು..!

Published

on

ಕೇಪು ಗ್ರಾಮದ ಕೆಲವು ಭಾಗಗಳಿಗೆ ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಸರ್ವೆಗೆ ಅಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತ ಪಡಿಸಿ ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ.

ವಿಟ್ಲ: ಕೇಪು ಗ್ರಾಮದ ಕೆಲವು ಭಾಗಗಳಿಗೆ ಉಡುಪಿ – ಕಾಸರಗೋಡು 400 ಕೆ.ವಿ. ವಿದ್ಯುತ್ ಪ್ರಸರಣ ಮಾರ್ಗದ ಸರ್ವೆಗೆ ಅಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಪಂಚಾಯತ್ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತ ಪಡಿಸಿ ಹಿಂದಕ್ಕೆ ಕಳುಹಿಸಿದ ಘಟನೆ ನಡೆದಿದೆ.

ಬಂಟ್ವಾಳ ಹಾಗೂ ವಿಟ್ಲ ಭಾಗದ ಸುಮಾರು 100ರಷ್ಟು ರೈತರು ಈಗಾಗಲೇ ಜಿಲ್ಲಾಡಳಿತ ಮಾಹಿತಿ ನೀಡದೆ ರೈತರ ಭೂಮಿಯನ್ನು ಖಾಸಗಿ ಕಂಪನಿಗೆ ನೀಡಲು ಮುಂದಾಗಿರುವ ವಿಚಾರವನ್ನು ಪ್ರಶ್ನಿಸಿ ರಾಜ್ಯದ ಉಚ್ಛನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದ್ದು, ತಾತ್ಕಾಲಿಕ ತಡೆಯನ್ನು ನೀಡಿರುತ್ತಾರೆ.

ಪ್ರಕರಣ ಇತ್ಯರ್ಥವಾಗುವ ಮೊದಲು ಕಂಪನಿ ಮಾರ್ಗ ರಚನೆಯನ್ನು ಮಾಡುದಿಲ್ಲಾ ಎಂದು ಹೇಳಿಕೊಂಡರು ಗುಪ್ತವಾಗಿ ಟವರ್ ನಿರ್ಮಾಣಕ್ಕೆ ಮುಂದಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಈ ನಡುವೆ ಅಡ್ಯನಡ್ಕದ ಕೆಲವು ಖಾಸಗಿ ಜಾಗದಲ್ಲಿ ಟವರ್ ನಿರ್ಮಾಣಕ್ಕಾಗಿ ಮರಗಳ ತೆರವಿನ ವಿಚಾರದಲ್ಲಿ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಮೂಲಕ ಸರ್ವೆ ನಡೆಸಲು ಮುಂದಾಗಿದೆ.

ಪಂಚಾಯಿತ್ ನಿಂದ ಈಗಾಗಲೇ ವಿದ್ಯುತ್ ಮಾರ್ಗ ರಚನೆಯ ವಿಚಾರವನ್ನು ವಿರೋಧಿಸಿ ಜಿಲ್ಲಾಡಳಿತಕ್ಕೆ ಪತ್ರವನ್ನು ನೀಡಿದ್ದು, ಪುಣಚ ಗ್ರಾಮ ಪಂಚಾಯತ್ ನ ಸದಸ್ಯರು ಹಾಗೂ ಸ್ಥಳೀಯ ನಿವಾಸಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending