ಉಡುಪಿ: ಉಡುಪಿ ನಗರಸಭಾ ಸದಸ್ಯೆ, ಕಾಂಗ್ರೆಸ್ ಪಕ್ಷದ ಮುಖಂಡೆ ಸೆಲೀನ್ ಕರ್ಕಡ ಅವರು ಅಲ್ಪಕಾಲದ ಅಸೌಖ್ಯದಿಂದ ತೀವ್ರ ಅನಾರೋಗ್ಯದಿಂದ ನಿಧನರಾದರು.
ನಿನ್ನೆ ರಾತ್ರಿ 11.30 ಗಂಟೆಗೆ ಮಣಿಪಾಲ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದರು.
ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಪ್ರಸ್ತುತ ಪೆರಂಪ್ಪಳ್ಳಿ ವಾರ್ಡ್ ನ ನಗರಸಭಾ ಸದಸ್ಯೆಯಾಗಿದ್ದರು.
ಅವರ ಆತ್ಮಕ್ಕೆ ಸದ್ಗತಿ ಸಿಗಲಿ ಮತ್ತು ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ನಗರಸಭಾ ಸದಸ್ಯ ರಮೇಶ್ ಕಾಂಚನ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಇವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.