ಓವರ್ ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಡುಪಿಯ ಕಾಪು ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಶನಿವಾರ ರಾತ್ರಿ ನಡೆದಿದೆ.
ಉಡುಪಿ : ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಾಗಿ ಎಕ್ಸ್‌ಪ್ರೆಸ್ ಬಸ್ ಗಳ ಮೇಲಾಟ- ಹುಚ್ಚಾಟ ಮಿತಿ ಮೀರಿದೆ.
ಓವರ್ ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಡುಪಿಯ ಕಾಪು ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಶನಿವಾರ ರಾತ್ರಿ ನಡೆದಿದೆ.
ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಎಂಬ ಹೆಸರಿನ ಎರಡು ಖಾಸಾಗಿ ಬಸ್ಸುಗಳು ಓವರ್ ಟೇಕ್ ಮಾಡಿಕೊಂಡು ಬಂದು ಕಾಪು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.
ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಇದೇ ವೇಳೆ ರೊಚ್ಚಿಗೆದ್ದ ಪ್ರಯಾಣಿಕರು ಬಸ್ಸಿನ ಕಿಟಕಿ ಗಾಜುಗಳನ್ನು ಪುಡಿಗೈದಿದ್ದಾರೆ.ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.