Wednesday, December 1, 2021

ಉಡುಪಿ: ಡಿಕೆಶಿ ಕೈಗೆ ‘ದೈವದ ಕಡ್ಸಲೆ’ ಕೊಟ್ಟು ವಿವಾದ ಸೃಷ್ಟಿಸಿದ ಕಾಂಗ್ರೆಸಿಗರು

ಉಡುಪಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ದೈವದ ಆಯುಧ ‘ಕಡ್ಸಲೆ’ ಉಡುಗೊರೆಯಾಗಿ ನೀಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಕರಾವಳಿಯಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

2 ದಿನಗಳ ಕರಾವಳಿ ಪ್ರವಾಸದಲ್ಲಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿನ್ನೆಯ ದಿನ ಉಡುಪಿಗೆ ಭೇಟಿ ನೀಡಿದ್ದರು. ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಡಿಕೆಶಿ ಅವರನ್ನು ಸ್ವಾಗತಿಸುವ ಸಂದರ್ಭ ‘ಕಡ್ಸಲೆ’ಯನ್ನು ಉಡುಗೊರೆಯಾಗಿ ನೀಡಿದೆ.

ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ನಾಯಕರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕಡ್ಸಲೆ ಉಡುಗೊರೆ, ಪ್ರದರ್ಶನದ ವಸ್ತುವಲ್ಲ, ಕಡ್ಸಲೆಯನ್ನು ಹಿಡಿಯಲು ಅದರದೇ ಆದ ನೀತಿ ನಿಯಮವಿದೆ.

ಡಿಕೆ ಶಿವಕುಮಾರ್ ಗೆ ‘ಕಡ್ಸಲೆ’ಯ ಮಹತ್ವದ ಬಗ್ಗೆ ತಿಳಿದಿಲ್ಲದೇ ಇರಬಹುದು. ಆದರೆ ಇದನ್ನು ಉಡುಗೊರೆಯಾಗಿ ನೀಡುವವರು ಯೋಚಿಸಬಹುದಿತ್ತು’ ಎಂಬುದಾಗಿ ತುಳುವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...