Monday, May 17, 2021

ಉಡುಪಿ ಕೊರೊನಾ ಹೆಚ್ಚಳ ನಡುವೆ ನಡೆದ ಸಂತೆ :ನಗರಸಭೆಯಿಂದ13 ಮಂದಿಗೆ  ದಂಡ..!

ಉಡುಪಿ:ಸರಕಾರದ ಆದೇಶದ ಮಧ್ಯೆಯೂ ಇಂದು ಬೆಳಗ್ಗೆ ಸಂತೆಕಟ್ಟೆ ಸಂತೆ ಮಾರುಕಟ್ಟೆಯ ಹೊರಗಡೆ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಗಳಿಗೆ ಉಡುಪಿ ನಗರಸಭೆ ಅಧಿಕಾರಿಗಳು ದಂಡ ವಿಧಿಸುವ ಮೂಲಕ ತೆರವುಗೊಳಿಸಿದ್ದಾರೆ. ಮೇ 1ರಂದು ಹೊರಡಿಸಲಾದ ಪರಿಷ್ಕೃತ ಕೋವಿಡ್ ಮಾರ್ಗಸೂಚಿಯಂತೆ ವಾರದ ಸಂತೆಗಳಿಗೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ನಗರಸಭೆ ಯವರು ಲಾಕ್‌ಡೌನ್ ಹಿನ್ನೆಲೆಯಲ್ಲಿ ಈ ಹಿಂದೆಯೇ ಸಂತೆಕಟ್ಟೆ ಸಂತೆ ಮಾರುಕಟ್ಟೆಯನ್ನು ಬಂದ್ ಮಾಡಿದ್ದರು. ಆದರೂ ಕಳೆದ ವಾರದಂತೆ ಇಂದು ಕೂಡ ಬೆಳಗಿನ ಜಾವ 6ಗಂಟೆಯಿಂದ ತರಕಾರಿ ಸೇರಿದಂತೆ ವಿವಿಧ ವ್ಯಾಪಾರಸ್ಥರು ಮಾರುಕಟ್ಟೆಯ ರಸ್ತೆ ಬದಿಯಲ್ಲಿ ನಿಂತು ವ್ಯಾಪಾರ ನಡೆಸುತ್ತಿದ್ದರು.

ಕೆಲವರು ರಸ್ತೆ ಬದಿ ರಾಶಿ ಹಾಕಿ ವ್ಯಾಪಾರ ನಡೆಸಿದರೆ ಇನ್ನು ಕೆಲವರು ವಾಹನಗಳಲ್ಲಿಯೇ ತರಕಾರಿಗಳನ್ನು ಮಾರಾಟ ಮಾಡುತ್ತಿದ್ದರು. ಇದರಿಂದ ಜನ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ತರಕಾರಿ ಸೇರಿದಂತೆ ವಿವಿಧ ಅಗತ್ಯ ವಸ್ತು ಗಳನ್ನು ಖರೀದಿಸಲು ನೆರೆದಿದ್ದರು.ಈ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ನಗರಸಭೆ ಪೌರಾಯುಕ್ತ ಡಾ. ಉದಯ ಶೆಟ್ಟಿ ನೇತೃತ್ವದ ತಂಡ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಜನರಿಗೆ ಎಚ್ಚರಿಕೆಯನ್ನು ನೀಡಲಾಯಿತು.

ವ್ಯಾಪಾರಸ್ಥರಿಗೆ ಕೂಡಲೇ ತೆರವುಗೊಳಿಸು ವಂತೆ ಸೂಚನೆ ನೀಡಲಾಯಿತು. ಆದರೂ ವ್ಯಾಪಾರ ಮುಂದುವರೆಸಿದ ಸುಮಾರು 13 ಮಂದಿ ವ್ಯಾಪಾರಸ್ಥರಿಗೆ ನಗರಸಭೆಯವರು ತಲಾ 200ರೂ. ನಂತೆ ದಂಡ ವಿಧಿಸಿದರು. ಬೆಳಗ್ಗೆ 10ಗಂಟೆ ಸುಮಾರಿಗೆ ಎಲ್ಲ ವ್ಯಾಪಾರಸ್ಥರನ್ನು ಸ್ಥಳದಿಂದ ತೆರವುಗೊಳಿಸಲಾಯಿತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...