Connect with us

LATEST NEWS

“ಟೋಲ್ ಸಂಗ್ರಹ ಸುಗಮವಾಗಿ ನಡೆಯಲು ಜಿಲ್ಲಾಡಳಿತದ ಸಹಕಾರ ಬೇಕಿದ್ರೆ 10 ದಿನಗಳೊಳಗೆ ಹೆದ್ದಾರಿ ಸರಿಪಡಿಸಿ”

Published

on

ಉಡುಪಿ: ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಹಾಗೂ ಇತರೆ ಕಾರ್ಯಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ 10 ದಿನಗಳೊಳಗೆ ಸಂಪೂರ್ಣವಾಗಿ ಹೆದ್ದಾರಿ ದುರಸ್ತಿಗೊಳಿಸಿ ವರದಿ ಸಲ್ಲಿಸಬೇಕು. ಜೊತೆಗೆ ಜಿಲ್ಲಾಡಳಿತದ ಎಲ್ಲ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಕಟ್ಟುನಿಟ್ಟಿನ ಸೂಚನೆ ನೀಡಿದರು.


ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಗೈರು ಹಾಜರಾಗುತ್ತಿರುವ ಸರಿಯಲ್ಲ ಎಂದು ಗರಂ ಆದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಹಾಗೂ ಇತರೆ ಕಾರ್ಯಗಳು ಸುಗಮವಾಗಿ ನಡೆಯಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ ಜಿಲ್ಲಾಡಳಿತದ ಎಲ್ಲ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದರು.

ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳನ್ನು 10 ದಿನಗಳೊಳಗೆ ಬಗೆಹರಿಸಿ, ಸಮಸ್ಯೆ ಸರಿಪಡಿಸಿದ ದಿನಾಂಕ, ಸಮಯ ಹಾಗೂ ಛಾಯಾಚಿತ್ರಗಳನ್ನೊಳಗೊಂಡ ವರದಿಯನ್ನು ಸಲ್ಲಿಸಬೇಕು. ಜಿಲ್ಲಾಡಳಿತ ಸೂಚಿಸುವ ಎಲ್ಲ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಡ್ಡಿಯಾಗಿರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು. ತುರ್ತು ಅಗತ್ಯವಿರುವೆಡೆ ಬೀದಿ ದೀಪ ಅಳವಡಿಸಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಸರಾಗವಾಗಿ ಹರಿಯಲು ಹಾಗೂ ಸಂಚಾರಕ್ಕೆ ಅಡ್ಡಿಯಾಗಿರುವ ಗಿಡಗಳನ್ನು ತೆರವುಗೊಳಿಸಬೇಕು.

ಪ್ಲೈ ಓವರ್‌ಗಳ ಮೇಲೆ ನೀರು ನಿಲ್ಲದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಎಎಸ್‌ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು ಐಆರ್‌ಬಿ ಎಂಜಿನಿಯರ್‌ಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

LATEST NEWS

Trending