Monday, July 4, 2022

ಜಡಿ ಮಳೆಯಲ್ಲೂ ಗ್ರಾಮ ಸುತ್ತಿ ಕೊರೊನಾದ ಬಗ್ಗೆ ಗ್ರಾಮಸ್ಥರಿಗೆ ಧೈರ್ಯ ತುಂಬಿದ ಉಡುಪಿ ಡಿಸಿ..!

ಉಡುಪಿ: ಕೊರೊನಾ 2 ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ನಗರ ಪ್ರದೇಶದಲ್ಲೇ ಸುತ್ತಾಡುತ್ತಿದ ಕೊರೊನಾ ಇದೀಗ ಹಳ್ಳಿ ಗ್ರಾಮಗಳಿಗೂ ವ್ಯಾಪಿಸುತ್ತಿದ್ದು ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಕರಾವಳಿ ಜಿಲ್ಲೆ ಉಡುಪಿಯ ಹಳ್ಳಿಗಳಲ್ಲೂ ಕೊವಿಡ್ ಪ್ರಕರಣಗಳು ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಕೊರೊನಾ ಪೀಡಿತ ಹಳ್ಳಿಗಳತ್ತ ಗ್ರಾಮ ನಡಿಗೆ ಆರಂಭಿಸಿದ್ದಾರೆ,

ಗ್ರಾಮದ ಪ್ರತಿ ಮನೆಗೆ ಭೇಟಿ ನೀಡಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ ಹಳ್ಳಿಯ ಜನರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ವ್ಯವಸ್ಥೆಗಳ ಪರಿಶೀಲನೆ ಮಾಡಿದ್ದಾರೆ. ಕಾಪು ತಾಲೂಕಿನ ಕಟಪಾಡಿ, ಪಡುಬಿದ್ರೆಗೆ ತೆರಳಿ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ.

ಜಡಿಮಳೆಯಲ್ಲೂ ಜಿಲ್ಲಾಧಿಕಾರಿ ಹಳ್ಳಿ ಸಂಚಾರ ಮಾಡಿ ಜನಜಾಗೃತಿ ಜೊತೆ ಸೋಂಕಿತರ ಮನೆಗೆ ತೆರಳಿ ಧೈರ್ಯ ತುಂಬುತ್ತಿದ್ದಾರೆ.

ಅಗತ್ಯವಿದ್ದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವರಿಕೆ ಮಾಡುತ್ತಿದ್ದಾರೆ. ಹೆಬ್ರಿ ತಾಲೂಕು ಮುದ್ರಾಡಿಗೆ ತೆರಳಿ ಪರಿಸ್ಥಿತಿ ಅವಲೋಕನ ಮಾಡಿದ್ದು, ಹಳ್ಳಿಗಳಿಂದ ತಾಲೂಕಿಗೆ ಚಿಕಿತ್ಸೆಗೆ ಬರುವವರಿಗೆ ವಾಹನ ವ್ಯವಸ್ಥೆಗೂ ಜಿಲ್ಲಾಡಳಿತ ಚಿಂತನೆ ಮಾಡಿದೆ.

ಶಾಸಕರ ಅನುದಾನ ಬಳಸಿಕೊಂಡು 5 ಸಾವಿರ ಆಕ್ಸಿ ಮೀಟರ್ ಗಳನ್ನು ವಿತರಿಸುವ ಯೋಜನೆ ಹೊಂದಿದ್ದಾರೆ.

ಕೇಂದ್ರ ಸರ್ಕಾರದಿಂದ ಬಂದಿರುವ ಆದೇಶದ ಪ್ರಕಾರ ಹಳ್ಳಿಗಳನ್ನು ಕೊರೊನಾ ಮುಕ್ತ ಮಾಡಬೇಕು. ಗ್ರಾಮಾಂತರ ಪ್ರದೇಶದ ಜನರ ಜೊತೆ ಜಿಲ್ಲಾಡಳಿತ ಸದಾ ಇರುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದ ವಿಶ್ವ ಹಿಂದು ಪರಿಷತ್ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವಹಿಂದುಪರಿಷತ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ಪ್ರಖಂಡದ ವತಿಯಿಂದ ಕೆಎಮ್‌ಸಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ರಕ್ತದಾನ ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ...

ಕಣಿವೆಗೆ ಉರುಳಿದ ಶಾಲಾ ಬಸ್‌: 16 ವಿದ್ಯಾರ್ಥಿಗಳು ಕೊನೆಯುಸಿರು

ಕುಲು: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ ಕಣಿವೆಗೆ ಉರುಳಿ ಬಿದ್ದ ಪರಿಣಾಮ 16 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ...

ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ದ.ಕ ಡಿಸಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದ್ದು ಇಲ್ಲಿನ ಸ್ಥಿತಿಗತಿಗಳನ್ನು ಗಮನಿಸಿ ಕ್ಷೇತ್ರ ಶಿಕ್ಷಣಾಧಿಕಾರಿಯವರಿಂದ ಮಾಹಿತಿಯನ್ನು ಪಡೆದುಕೊಂಡು ಜಿಲ್ಲಾಧಿಕಾರಿಯವರು ತಾಲ್ಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿದ್ದಾರೆ.ಗ್ರಾಮೀಣ...