Connect with us

LATEST NEWS

ಗೊಂದಲಕಾರಿ ಸುದ್ದಿ ಪ್ರಸಾರ ಮಾಡಿದಲ್ಲಿ ಕಠಿಣ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್

Published

on

ಉಡುಪಿ ಸೆಪ್ಟೆಂಬರ್ 8 : ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲಾ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಇತ್ತೀಚೆಗೆ ಕೆಲವು ಸಾಮಾಜಿಕ ಜಾಲತಾಣಗಳು ಪ್ರಸಾರ ಮಾಡಿದ ಅಪಪ್ರಚಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೆ ಸಾರ್ವಜನಿಕರು ಅಸಹಕಾರ ತೋರುತ್ತಿದ್ದು, ಇದರಿಂದ ರೋಗದ ಗಂಭೀರ ಪರಿಣಾಮ ಎದುರಿಸುವ ರೋಗಿಗಳ ಸಂಖ್ಯೆ ಅಧಿಕವಾಗಿದ್ದು, ಐಸಿಯು ಬೆಡ್ ಗಳ ಕೊರತೆಯಾಗಿದೆ, ಇಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಸಂಬಂದಪಟ್ಟ ವೈದ್ಯರನ್ನು ಸಂಪರ್ಕಿಸಿ ಅವರ ಅಭಿಪ್ರಾಯವನ್ನೂ ಸಹ ಪ್ರಸಾರ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಡಿಸಿ ವಿಷಾದ ವ್ಯಕ್ತಪಡಿಸಿದರು.


ಜಿಲ್ಲೆಯಲ್ಲಿ ಅನಧಿಕೃತ ನ್ಯೂಸ್ ವೆಬ್‌ಸೈಟ್‌ಗಳು ಆರಂಭಗೊಂಡಿದ್ದು, ಸಾಮಾಜಿಕ ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶೆ ಮಾಡದೇ ಹರಿ ಬಿಡಲಾಗುತ್ತಿದ್ದು, ಇದರಿಂದ ಸರಕಾರದ, ಗಣ್ಯರ, ಜನಪ್ರತಿನಿಧಿಗಳ, ಸಂಘ ಸಂಸ್ಥೆಗಳ, ನಾಗರೀಕರ ತೇಜೋವಧೆಯ ಜೊತೆಗೆ ಧಾರ್ಮಿಕ, ಸಾಮಾಜಿಕ ಭಾವನೆಗಳಿಗೆ ಧಕ್ಕೆ ಮೂಡಿಸುವಂತಹ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಇಂತಹ ಅನಧಿಕೃತ ನ್ಯೂಸ್ ವೆಬ್‌ಸೈಟ್ ಗಳನ್ನು ನಿಷೇಧಿಸುವಂತೆ ಮನವಿ ಬಂದಿದೆ , ಈ ರೀತಿ ನ್ಯೂಸ್ ವೆಬ್‌ಸೈಟ್ ಮಾಡಿಕೊಂಡು ಸಾರ್ವಜನಿಕ ಸುದ್ದಿ ಪ್ರಕಟಿಸಲು ಅನುಮತಿ ಪಡೆದಿರುವ ಬಗ್ಗೆ ಸಂಬಂದಪಟ್ಟ ವೆಬ್‌ಸೈಟ್ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿನ ಸ್ಥಳೀಯ ಕೇಬಲ್ ಟಿವಿ ಗಳು ಸಹ ಮನರಂಜನೆ ಹೊರತುಪಡಿಸಿ, ನ್ಯೂಸ್ ಪ್ರಸಾರ ಮಾಡಲು ಅನುಮತಿ ಪಡೆದಿರುವ ಬಗ್ಗೆ ಸಂಬAದಪಟ್ಟ ಚಾನೆಲ್ ಗಳ ಮುಖ್ಯಸ್ಥರು ದಾಖಲೆಗಳನ್ನು ನೀಡುವಂತೆ ನೋಟೀಸ್ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಕಾಯ್ದೆ ಉಲ್ಲಂಘಿಸಿದ್ದಲ್ಲಿ ಕೇಬಲ್ ಆಪರೇಟರ್ ಗಳ ಉಪಕರಣಗಳನ್ನು ವಶಪಡಿಸಿಕೊಳ್ಳುವ ಹಾಗೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದರು.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending