ಉಡುಪಿ ಸೆಪ್ಟೆಂಬರ್ 8 : ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲಾ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚೆಗೆ ಕೆಲವು ಸಾಮಾಜಿಕ ಜಾಲತಾಣಗಳು ಪ್ರಸಾರ ಮಾಡಿದ ಅಪಪ್ರಚಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೆ ಸಾರ್ವಜನಿಕರು ಅಸಹಕಾರ ತೋರುತ್ತಿದ್ದು, ಇದರಿಂದ ರೋಗದ ಗಂಭೀರ ಪರಿಣಾಮ ಎದುರಿಸುವ ರೋಗಿಗಳ ಸಂಖ್ಯೆ ಅಧಿಕವಾಗಿದ್ದು, ಐಸಿಯು ಬೆಡ್ ಗಳ ಕೊರತೆಯಾಗಿದೆ, ಇಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಸಂಬಂದಪಟ್ಟ ವೈದ್ಯರನ್ನು ಸಂಪರ್ಕಿಸಿ ಅವರ ಅಭಿಪ್ರಾಯವನ್ನೂ ಸಹ ಪ್ರಸಾರ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಡಿಸಿ ವಿಷಾದ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಅನಧಿಕೃತ ನ್ಯೂಸ್ ವೆಬ್‌ಸೈಟ್‌ಗಳು ಆರಂಭಗೊಂಡಿದ್ದು, ಸಾಮಾಜಿಕ ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶೆ ಮಾಡದೇ ಹರಿ ಬಿಡಲಾಗುತ್ತಿದ್ದು, ಇದರಿಂದ ಸರಕಾರದ, ಗಣ್ಯರ, ಜನಪ್ರತಿನಿಧಿಗಳ, ಸಂಘ ಸಂಸ್ಥೆಗಳ, ನಾಗರೀಕರ ತೇಜೋವಧೆಯ ಜೊತೆಗೆ ಧಾರ್ಮಿಕ, ಸಾಮಾಜಿಕ ಭಾವನೆಗಳಿಗೆ ಧಕ್ಕೆ ಮೂಡಿಸುವಂತಹ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಇಂತಹ ಅನಧಿಕೃತ ನ್ಯೂಸ್ ವೆಬ್‌ಸೈಟ್ ಗಳನ್ನು ನಿಷೇಧಿಸುವಂತೆ ಮನವಿ ಬಂದಿದೆ , ಈ ರೀತಿ ನ್ಯೂಸ್ ವೆಬ್‌ಸೈಟ್ ಮಾಡಿಕೊಂಡು ಸಾರ್ವಜನಿಕ ಸುದ್ದಿ ಪ್ರಕಟಿಸಲು ಅನುಮತಿ ಪಡೆದಿರುವ ಬಗ್ಗೆ ಸಂಬಂದಪಟ್ಟ ವೆಬ್‌ಸೈಟ್ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಜಿಲ್ಲೆಯಲ್ಲಿನ ಸ್ಥಳೀಯ ಕೇಬಲ್ ಟಿವಿ ಗಳು ಸಹ ಮನರಂಜನೆ ಹೊರತುಪಡಿಸಿ, ನ್ಯೂಸ್ ಪ್ರಸಾರ ಮಾಡಲು ಅನುಮತಿ ಪಡೆದಿರುವ ಬಗ್ಗೆ ಸಂಬAದಪಟ್ಟ ಚಾನೆಲ್ ಗಳ ಮುಖ್ಯಸ್ಥರು ದಾಖಲೆಗಳನ್ನು ನೀಡುವಂತೆ ನೋಟೀಸ್ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಕಾಯ್ದೆ ಉಲ್ಲಂಘಿಸಿದ್ದಲ್ಲಿ ಕೇಬಲ್ ಆಪರೇಟರ್ ಗಳ ಉಪಕರಣಗಳನ್ನು ವಶಪಡಿಸಿಕೊಳ್ಳುವ ಹಾಗೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದರು.
ಮಂಗಳೂರು : ವಾಟ್ಸಾಪ್‌ನಲ್ಲಿ ಪರಿಚಯವಾದ ವ್ಯಕ್ತಿಗೆ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬ ಆಮಿಷವೊಡ್ಡಿ 10 ಲಕ್ಷ ರೂಪಾಯಿ ವಂಚಿಸಿದ್ದ ಪ್ರಕರಣವೊಂದರಲ್ಲಿ ಕೇರಳ ಮೂಲದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕೇರಳದ ತ್ರಿಶೂರ್‌ನ ಮಟ್ಟೂರು ನೂಲುವ್ಯಾಲಿಯ ಕೈಪುಝ ಹೌಸ್ ನಿವಾಸಿ ನಿಧಿನ್ ಕುಮಾರ್ ಕೆ.ಎಸ್ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ನಡೆದಿದೆ.
ಈತ ಕಳೆದ ವರ್ಷ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗ ಬಹುದೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10,32,000 ರೂಪಾಯಿಗಳನ್ನು ಹಂತಹಂತವಾಗಿ ಪಡೆದುಕೊಂಡಿದ್ದ. ಈ ಬಗ್ಗೆ ಮಂಗಳೂರಿನ ಸೆನ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ದೂರುದಾರರ ವಿವಿಧ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾದ ಬಗ್ಗೆ ಮತ್ತು ಅದು ಯಾರ ಖಾತೆಗೆ ಪಾವತಿಯಾಗಿದೆ ಎಂಬಿತ್ಯಾದಿ ವಿವರಗಳನ್ನು ಸಂಗ್ರಹಿಸಿ ಪೊಲೀಸರು ತನಿಖೆಯನ್ನು ನಡೆಸಿದ್ದರು. ಆರೋಪಿಯ ಬ್ಯಾಂಕ್ ಖಾತೆಗೆ 1 ಲಕ್ಷ ರೂಪಾಯಿ. ಬಂದಿದ್ದು, ಆತನ ಸ್ನೇಹಿತ ತಿಳಿಸಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಕಮಿಷನ್ ಪಡೆದುಕೊಂಡು ಹಣವನ್ನು ವರ್ಗಾವಣೆ ಮಾಡಿದ್ದಾಗಿ ತಿಳಿದು ಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ರವಿಶಂಕರ್ ನಿರ್ದೇಶನದಂತೆ ಸೆನ್ ಎಸಿಪಿ ರವೀಶ್ ನಾಯಕ್, ಇನ್‌ಸ್ಪೆಕ್ಟರ್ ಸತೀಶ್ ಎಂ.ಪಿ ಹಾಗೂ ಎಸ್‌ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಉಪ್ಪಿನಂಗಡಿ: ಕಳೆದ ಸೋಮವಾರ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಅನ್ನು ಎಗರಿಸಿದ್ದ ಪ್ರಕರಣವನ್ನು ಬೇಧಿಸಿರುವ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿ ಆಕೆಯಿಂದ ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಕಡಬ ತಾಲೂಕು ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ಮನೆ ನಿವಾಸಿ ಮುಸ್ತಾಫ ಎಂಬವರ ಪತ್ನಿ ಅಬೀಬಾ ಎಂಬವರು ಜ.6ರಂದು ಪೆರ್ನೆಯಲ್ಲಿರುವ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಹೊರಡುವ ಸಮಯ ಭದ್ರತೆಯ ದೃಷ್ಠಿಯಿಂದ ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ ನೆಕ್ಲೇಸ್ -1 ಮತ್ತು ಸುಮಾರು 106 ಗ್ರಾಂ ತೂಕದ ಚಿನ್ನಾಭರಣವನ್ನು ಒಂದು ಬಾಕ್ಸ್ ನೊಳಗಡೆ ಹಾಕಿ ವ್ಯಾನಿಟಿ ಬ್ಯಾಗಿನೊಳಗಡೆ ಇಟ್ಟುಕೊಂಡು, ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಾಸು ಮನೆಗೆ ಹೋಗಲು ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ಕಡಬಕ್ಕೆ ಹೋಗಲು ಮಧ್ಯಾಹ್ನ ಗಂಟೆ 1.45 ರ ಸುಮಾರಿಗೆ ಕಡಬಕ್ಕೆ ಹೋಗುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿ, ಬ್ಯಾಗ್‍ನಿಂದ ಐಡಿ ಕಾರ್ಡ್ ತೆಗೆಯಲೆಂದು ನೋಡಿದಾಗ ವ್ಯಾನಿಟಿ ಬ್ಯಾಗಿನ ಜಿಪ್ ತೆರೆದಿರುವುದು ಕಂಡು ಬಂದಿತ್ತು. ಈ ಸಂದರ್ಭ ಪರಿಶೀಲಿಸಿದಾಗ ಅದರೊಳಗಡೆ ಚಿನ್ನ ಇಟ್ಟಿದ್ದ ಬಾಕ್ಸ್ ಕಳವಿಗೀಡಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು.
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಂಕೀರ್ಣವಾಗಿದ್ದ ಪ್ರಕರಣದಲ್ಲಿ ಮಹತ್ವದ ಸುಳಿವನ್ನು ಸಂಪಾದಿಸಿಕೊಂಡು ಬೆನ್ನಟ್ಟಿದಾಗ ಬ್ಯಾಗ್ ಕಳ್ಳತನವನ್ನೇ ಕಸುಬಾಗಿಸಿಕೊಂಡ ನಸೀಮಾ ಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿ ಸಿದಾಗ ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡು ತನ್ನ ಸ್ಕೂಟಿಯಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾ.ಪಂ. ಅಧ್ಯಕ್ಷರಾಗಿ ಸಾಧನೆ ಮಾಡಿದವರು, ಪ್ಯಾರಾಲಿಂಪಿಕ್ಸ್ ಕೂಟದಲ್ಲಿ ಸಾಧನೆ ಮಾಡಿದವರು, ಕೈಮಗ್ಗ ಕುಶಲಕರ್ಮಿಗಳು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣ ಕಾರ್ಯಕರ್ತರು ಸೇರಿದ್ದಂತೆ ಒಟ್ಟು 31 ವಿಭಾಗಗಳ ಸಾಧಕರು ಸೇರಿದ್ದಾರೆ.