ಉಡುಪಿ: ಉಡುಪಿಯ ಕಾಪು ತಾಲೂಕಿನ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ಮೃತದೇಹ ಪತ್ತೆಯಾಗಿದೆ. ಮಲ್ಲಾರು ಗ್ರಾಮದ ನಿವಾಸಿ ಉಬೇದುಲ್ಲ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಬೈಕ್, ಮೊಬೈಲ್ ಫೋನ್ ಪತ್ತೆಯಾಗಿದ್ದು, ಸರ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕಾಪು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮಣಿಪಾಲ ಕೆಎಂಸಿಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಶವವನ್ನು ಆಸ್ಪತ್ರೆ ಸಾಗಿಸಲು ನೆರವಾಗಿದ್ದಾರೆ. ಕಳೆದ ರಾತ್ರಿ 9 ಗಂಟೆಗೆ ಬಂದಿದ್ದರು. ಅಮಲಿನಲ್ಲಿ ತೂರಾಡುತ್ತಾ ಹೋಗಿದ್ದು ನೋಡಿದ್ದೇನೆ. ಬೈಕ್ ಇಟ್ಟು ರೈಲ್ವೆ ಟ್ರ್ಯಾಕ್ ಮೇಲೆ ಹೋಗಿದ್ದರು. ಬೆಳಗ್ಗೆ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ಕೊಟ್ಟಿದ್ದೇನೆ ಎಂದಿದ್ದಾರೆ.