LATEST NEWS
Udupi : “ಕೋಮು ಬಣ್ಣ ಹಚ್ಚಿ ಈಗಲೇ ತೀರ್ಪು ನೀಡಬೇಡಿ “-ಖುಷ್ಬೂ ಸುಂದರ್
ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗೆ ಸ್ವಾತಂತ್ರ್ಯ ನೀಡಬೇಕು ಮತ್ತು ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯ ಬೇಡಿ ಎಂದು ಮನವಿ ಮಾಡಿದರು.
ಉಡುಪಿ : ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿ ಇದುವರೆಗೆ ಪೊಲೀಸರಿಗೆ ಯಾವುದೇ ವಿಡಿಯೋ ಸಾಕ್ಷ್ಯ ಲಭ್ಯವಾಗಿಲ್ಲ.
ಮೊಬೈಲ್ ಫೋನ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ಸಮಗ್ರ ತಪಾಸಣೆಯ ಬಳಿಕ ಬರುವ ವರದಿಯನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ತಿಳಿಸಿದ್ದಾರೆ.
ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯೋರ್ವಳ ವಿಡಿಯೋ ಚಿತ್ರೀಕರಣ ಮಾಡಿದ್ದಾರೆನ್ನಲಾದ ಪ್ರಕರಣದ ವಿಚಾರಣೆಗೆ ಆಗಮಿಸಿದ ಅವರು ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಸುಮಾರು ಒಂದುವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.
ಪೊಲೀಸರು ಮೂವರು ವಿದ್ಯಾರ್ಥಿನಿಯರ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದು ಡಾಟಾ ಸಂಗ್ರಹಿಸಿದ್ದಾರೆ.
40 ಗಂಟೆಗಳ ಕಾಲ ರೆಟ್ರಿವ್ ಮಾಡಿದರೂ ಏನು ಪತ್ತೆಯಾಗಿಲ್ಲ. ಆದ್ದರಿಂದ ಮೊಬೈಲ್ ಫೋನ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸ ಬೇಕಾಗಿದೆ.
ಈ ಘಟನೆಯನ್ನು ಇಟ್ಟುಕೊಂಡು ಅನೇಕ ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಹರಿದಾಡುತ್ತಿರುವ ವಿಡಿಯೋಗಳು ಯಾವುದು ಸತ್ಯವಲ್ಲ.
ಈ ತನಕ ಯಾವುದೇ ವಿಡಿಯೋ ಸಾಕ್ಷ್ಯ ಲಭ್ಯವಾಗಿಲ್ಲ. ವಿದ್ಯಾರ್ಥಿನಿಯರ ಮೊಬೈಲ್ ನಲ್ಲಿ ಯಾವುದೇ ವಿಡಿಯೋ ಕಂಡು ಬಂದಿಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸಾಕ್ಷ ಲಭ್ಯವಾದರೆ ವಿಡಿಯೋ ಬಗ್ಗೆ ಸ್ಷಷ್ಟತೆ ಸಿಗ ಬಹುದು.
ಸೂಕ್ತ ಸಾಕ್ಷ್ಯ ಸಿಗದಿದ್ದರೆ ಚಾರ್ಜ್ ಶೀಟ್ ಮಾಡಲು ಸಾಧ್ಯವಿಲ್ಲ. ಸಾಕ್ಷ್ಯವಿಲ್ಲದಿದ್ದರೆ ಪ್ರಕರಣ ದಾಖಲಿಸಲು ಸಾಧ್ಯವಿಲ್ಲ ಎಂದರು.
ಘಟನೆಯ ಹಿಂದೆ ಬಿಗರ್ ಥಿಯರಿ ಅಥವಾ ಬೀಗ್ಗರ್ ಸ್ಟೋರಿ ಇದೆ ಎಂದು ಸದ್ಯ ಭಾವಿಸುವುದು ಬೇಡ.
ನಾವೇ ನ್ಯಾಯಾಧೀಶರಾಗಿ ತೀರ್ಪು ಕೊಡುವುದು ಸರಿಯಲ್ಲ.
ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ. ಪೊಲೀಸರು ತನಿಖೆ ಆರಂಭಿಸಿದ್ದು, ಅವರಿಗೆ ಸ್ವಾತಂತ್ರ್ಯ ನೀಡಬೇಕು.
ದಯವಿಟ್ಟು ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯ ಬೇಡಿ ಎಂದು ಮನವಿ ಮಾಡಿದರು.
ಇಂದು ಕಾಲೇಜು ಆಡಳಿತ ಮಂಡಳಿ, ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದರು.
BELTHANGADY
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.
ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.
LATEST NEWS
ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?
ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.
ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.
ಮಳೆಯಾಗುವ ಸಾಧ್ಯತೆ :
ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!
ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :
ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ