Home ಉಡುಪಿ ಕೊನೆಗೂ ಕೋರ್ಟಿಗೆ ಶರಣಾದ ಉಡುಪಿ ಡಬ್ಬಲ್ ಮರ್ಡರ್ ಆರೋಪಿ..!!

ಕೊನೆಗೂ ಕೋರ್ಟಿಗೆ ಶರಣಾದ ಉಡುಪಿ ಡಬ್ಬಲ್ ಮರ್ಡರ್ ಆರೋಪಿ..!!

ಕೊನೆಗೂ ಕೋರ್ಟಿಗೆ ಶರಣಾದ ಉಡುಪಿ ಡಬ್ಬಲ್ ಮರ್ಡರ್ ಆರೋಪಿ..!!

ಉಡುಪಿ : ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದ ಆರೋಪಿ, ಜಿಲ್ಲಾ ಪಂಚಾಯತ್ ಸದಸ್ಯ ಬಾರಿಕೆರೆ ರಾಘವೇಂದ್ರ ಕಾಂಚನ್ ಕೊನೆಗೂ ಪೊಲೀಸರಿಗೆ ಶರಣಾಗಿದ್ದಾನೆ.

ಕಳೆದ ವರ್ಷ ಕೋಟ ಸಮೀಪದ ಮಣೂರಿನಲ್ಲಿ ನಡೆದ ಭರತ್ ಮತ್ತು ಆತನ ಸ್ನೇಹಿತ ಯತೀಶ್ ಕೊಲೆ ಪ್ರಕರಣದಲ್ಲಿ ಕೊಲೆಯ ಸಂಚು ರೂಪಿಸಿದ ಆರೋಪ ಈತನ ಮೇಲಿತ್ತು.

ರಾಘವೇಂದ್ರ ಕಾಂಚನ್ ಪಡೆದ ಜಾಮೀನು ಸರ್ವೋಚ್ಚ ನ್ಯಾಯಾಲಯದಲ್ಲಿ ವಜಾಗೊಂಡಿತ್ತು. ಆದೇಶವಾಗಿ ಹದಿನೈದು ದಿನ ಕಳೆದರೂ ಪೊಲೀಸರು ಈತನನ್ನು ಬಂಧಿಸಿರಲಿಲ್ಲ. ಈ ಬಗ್ಗೆ ಮೃತರ ಮನೆಯವರು ಹೋರಾಟದ ಎಚ್ಚರಿಕೆ ನೀಡಿದ್ದರು.

ವಕೀಲರ ಮೂಲಕ ಆಗಮಿಸಿದ ರಾಘವೇಂದ್ರ ಕಾಂಚನ್ ಶರಣಾಗತಿಯಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಹಿರಿಯಡಕ ಕಾರಾಗೃಹಕ್ಕೆ ರವಾನಿಸಲಾಗಿದೆ. ಕಳೆದ ವರ್ಷ ಜನವರಿ ೨೬ರಂದು ರಾತ್ರಿ ಸುಮಾರು ೧೦.೩೦ರ ಸುಮಾರಿಗೆ ಭರತ್ ಮತ್ತು ಆತನ ಸ್ನೇಹಿತ ಯತೀಶನನ್ನು ಕೊಲೆ ಮಾಡಲಾಗಿತ್ತು.

ಇದರಲ್ಲಿ ಭಾಗಿಯಾದ ೧೮ ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಕೆಲವು ಆರೋಪಿಗಳು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದರು. ಅಲ್ಲದೇ ಜಿಲ್ಲಾ ಪಂಚಾಯತ್ ಸದಸ್ಯನಾದ ರಾಘವೇಂದ್ರ ಕಾಂಚನ್ ಉಚ್ಛ ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದು, ಈ ಬಗ್ಗೆ ಭರತ್ ತಾಯಿ ಪಾರ್ವತಿ ಸರ್ವೋಚ್ಛ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಪುರಸ್ಕರಿಸಿದ ಸರ್ವೋಚ್ಚ ನ್ಯಾಯಾಲಯವು ಹೈಕೋರ್ಟ್ ನೀಡಿದ ಜಾಮೀನು ವಜಾಗೊಳಿಸಿ ಆದೇಶಿಸಿತ್ತು. ಅದರಂತೆ ಇಂದು ವಕೀಲ ರವಿಕಿರಣ್ ಮುರ್ಡೇಶ್ವರ ಅವರ ಮೂಲಕ ಕೋರ್ಟಿಗೆ ಹಾಜರಾಗಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾನೆ.

ವಿಡಿಯೋಗಾಗಿ

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...