Tuesday, January 31, 2023

ಉಡುಪಿ : ಖ್ಯಾತ ಸುಗಮ ಸಂಗೀತ ಗಾಯಕ ಚಂದ್ರಶೇಖರ ಕೆದ್ಲಾಯ (72) ಹೃದಯಾಘಾತಕ್ಕೆ ಬಲಿ..!

ಉಡುಪಿ : ಖ್ಯಾತ ಸುಗಮ ಸಂಗೀತ ಗಾಯಕ ಚಂದ್ರಶೇಖರ ಕೆದ್ಲಾಯ (72) ಅವರು ಹೃದಯಾಘಾತದಿಂದ ಇಂದು ಮುಂಜಾನೆ ಉಡುಪಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

1950 ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೆಸ್ಕುತ್ತೂರು ಗ್ರಾಮದ ಹಾರ್ಯಾಡಿ ಎಂಬಲ್ಲಿ ಗಣಪಯ್ಯ ಕೆದ್ಲಾಯ ಮತ್ತು ಕಮಲಮ್ಮನವರ ಪುತ್ರರಾಗಿ ಜನಿಸಿದ ಚಂದ್ರಶೇಖರ ಕೆದ್ಲಾಯ ಅವರು ಕಳೆದ ಹಲವು ದಶಕಗಳಿಂದ ಸಂಗೀತ ಕ್ಷೇತ್ರದಲ್ಲಿ ಅನುಸರಣೀಯವಾದಂತಹ ಸಾಧನೆಯನ್ನು ಮಾಡಿದ್ದಾರೆ.

ಶಿಕ್ಷಕನಾಗಿ ವೃತ್ತಿ ಜೀವನ ನಡೆಸಿದ ಇವರು ಪ್ರವೃತ್ತಿಯಲ್ಲಿ ಸಂಗೀತ, ಗಮಕ, ನಾಟಕಗಳ ಸಂಗೀತ ನಿರ್ದೇಶನ, ನೃತ್ಯ ರೂಪಕಗಳ ನಿರ್ದೇಶನದ ಮೂಲಕ ಕನ್ನಡ ನಾಡಿನಾದ್ಯಂತ ಖ್ಯಾತಿಯನ್ನು ಪಡೆದಿದ್ದಾರೆ.

ಹಂಗಾರಕಟ್ಟೆಯ ಚೇತನಾ ಪ್ರೌಢ ಶಾಲೆ, ಮಂಗಳೂರಿನ ಕೆನರಾ ಪ್ರೌಢ ಶಾಲೆ, ನಿರ್ಮಲಾ ಪ್ರೌಢ ಶಾಲೆ ಬ್ರಹ್ಮಾವರದಲ್ಲಿ 35 ವರ್ಷಗಳು ಪರಿಪೂರ್ಣವಾದ ಸಾರ್ಥಕ ಸೇವೆಯನ್ನು ಮಾಡುತ್ತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ (1992-93) ಹಾಗೂ ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿ (2008)ಯನ್ನು ಪಡೆದಿರುತ್ತಾರೆ.

ಚಂದ್ರಶೇಖರ ಕೆದ್ಲಾಯ ಅವರು ಕನ್ನಡ ಶಿಕ್ಷಕರ ಸಂಪನ್ಮೂಲ ವ್ಯಕ್ತಿಗಳಾಗಿದ್ದು, ಶಿಕ್ಷಕರಿಗೆ ಹಲವು ತರಬೇತಿಗಳನ್ನು ನಡೆಸಿದ್ದಾರೆ. ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ, ಕರ್ನಾಟಕ ಶ್ರೀ ಬಿರುದು, ಮತ್ತು ಹಲವಾರು ಸಂಘ ಸಂಸ್ಥೆಗಳು ಮತ್ತು ಸಂಘಗಳಿಂದ ಪುರಸ್ಕೃತರಾಗಿದ್ದಾರೆ.

ಗಡಿನಾಡಿನ ಕನ್ನಡಪರ ಹೋರಾಟಗಾರ, ದಿ.ಕಯ್ಯಾರ ಕಿಂಞ್ಞಣ್ಣ ರೈ ಅವರ ಹೆಸರಿನ ಪ್ರಶಸ್ತಿ, ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಕೆದ್ಲಾಯರಿಗೆ ಕರ್ನಾಟಕ ನಾಟಕ ಅಕಾಡಮಿಯಿಂದ ರಂಗ ಭಾರತಿ ಸನ್ಮಾನ, ಮುಳಿಯ ತಿಮ್ಮಪ್ಪಯ್ಯ ಪ್ರಶಸ್ತಿ, ಆಳ್ವಾಸ್ ಶಿಕ್ಷಣ ಟ್ರಸ್ಟಿನ ‘ಉತ್ತಮ ಶಿಕ್ಷಕ ಪ್ರಶಸ್ತಿ’, ಕನ್ನಡ ಸಾಹಿತ್ಯ ಪರಿಷತ್ತಿನ ಅಖಿಲ ಕರ್ನಾಟಕ ಸಾಹಿತ್ಯ ಸಮ್ಮೇಳನದಲ್ಲಿ ನೀಡಲಾದ ‘ಕರ್ನಾಟಕ ಶ್ರೀ’ ಬಿರುದುಗಳು ಸಹಿತ ಅನೇಕ ಪ್ರಶಸ್ತಿಗಳು ಲಭಿಸಿವೆ.

ಮೃತರು ಪತ್ನಿ, ಇಬ್ಬರು ಪುತ್ರರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...

“ನಾಯಿ ಥರ ಅವರ ಹಿಂದೆ ಹೋಗ್ತಾರಲ್ವಾ..ನಾಚಿಕೆ ಇಲ್ವಾ.!?” ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಕ್ಲಾಸ್..!

ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ.ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು...