ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್ ಹೋಟೆಲ್ ನಲ್ಲಿ ಇಂದು ಬೆಳಗ್ಗೆ ಸುಮಾರು 7 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತ್ತು. ಜೊತೆಗೆ ಕೆಲವು ಸುತ್ತುಗಳಿಗೆ ಹಾನಿ ಉಂಟಾಗಿತ್ತು.
ಗ್ಯಾಸ್ ಸೋರಿಕೆಯಾಗಿ ಹೊಟೇಲ್ ಸಿಬ್ಬಂದಿಗಳು ಹಾಗು ಗ್ರಾಹಕರು ಕ್ಷಣ ಕಾಲ ಗಾಬರಿಗೊಂಡ ಘಟನೆ ಕೂಡ ನಡೆಯಿತು.ತಕ್ಷಣ ಈ ಬಗ್ಗೆ ಅಗ್ನಿಶಾಮದಳಕ್ಕೆ ಮಾಹಿತಿಯನ್ನು ನೀಡಲಾಯಿತು.
ಈ ವೇಳೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ, ದೊಡ್ಡ ದುರಂತವೊಂದನ್ನು ತಪ್ಪಿಸಿದರು.