Home ಉಡುಪಿ ಉಡುಪಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಉಡುಪಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಉಡುಪಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಉಡುಪಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಉಡುಪಿ ಡಿಸಿಐಬಿ ಪೊಲೀಸರು ಫೆ.16ರಂದು ಸಂಜೆ 5ಗಂಟೆ ಸುಮಾರಿಗೆ ವಕ್ವಾಡಿ ಗ್ರಾಮದ ಜನತಾ ಕಾಲನಿ ಎಂಬಲ್ಲಿ ಬಂಧಿಸಿದ್ದಾರೆ. ವಕ್ವಾಡಿ ಜನತಾ ಕಾಲನಿಯ ಮೊಹಮ್ಮದ್ ಹನೀಫ್ (45) ಹಾಗೂ ಅಶ್ರಫ್(29) ಬಂಧಿತ ಆರೋಪಿಗಳು.

ದಾಳಿ ವೇಳೆ ಮೊಹಮ್ಮದ್ ಆಸೀಫ್ ಹಾಗೂ ಇಲಿಯಾಸ್ ಓಡಿ ಪರಾರಿಯಾಗಿದ್ದಾರೆ. ಬಂಧಿತರಿಂದ 20ಸಾವಿರ ರೂ. ಮೌಲ್ಯದ 610 ಗ್ರಾಂ ತೂಕದ ಗಾಂಜಾ, ಒಂದು ಮೊಬೈಲ್, ಬ್ಯಾಗ್ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೊಹಮ್ಮದ್ ಹನೀಫ್ ತನ್ನ ಮನೆಯ ಬಳಿ ಇರುವ ಶೆಡ್‌ನಲ್ಲಿ ಇತರ ಮೂವರೊಂದಿಗೆ ಸೇರಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿ ರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ದಾಳಿ ನಡೆಸಿದ ಉಡುಪಿ ಡಿಸಿಐಬಿ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್. ನೇತೃತ್ವದ ತಂಡ, ಇಬ್ಬರನ್ನು ಬಂಧಿಸಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...