Friday, March 31, 2023

ಉಡುಪಿ: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಮನೆ – ಅಪಾರ ನಷ್ಟ..!

ಉಡುಪಿ : ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಮನೆಯೋಮದು ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯ ಮಟ್ಟು ದುಗ್ಗುಪಾಡಿಯಲ್ಲಿ ಎಂಬಲ್ಲಿ ನಡೆದಿದೆ.

ವನಜ ಎನ್‌.ಕೆ ಎಂಬರಿಗೆ ಸೇರಿದ ಮನೆ ಇದಾಗಿದ್ದು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಮನೆ ಹಾಗೂ ದನದ ಹಟ್ಟಿಗೆ ಸಂಪೂರ್ಣ ಹೊತ್ತಿ ಉರಿದಿದೆ. ಮನೆ ರಿಪೇರಿ ಮತ್ತು ದೈವದ ಮನೆ ಕಟ್ಟಲು ತಂದು ಇರಿಸಲಾಗಿದ್ದ ಮರದ ದಾರಂದಗಳು, ಕಿಟಕಿಗಳು, ಬೈಹುಲ್ಲು ಹಾಗೂ ವಿದ್ಯುತ್‌ ಸಂಪರ್ಕ, ಸಲಕರಣೆಗಳೂ ಅಗ್ನಿಗೆ ಆಹುತಿಯಾಗಿದೆ.

ಸ್ಥಳೀಯರು ಮತ್ತು ಜಿಲ್ಲಾ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿ ಹೆಚ್ಚಿನ ಅವಘಡವು ತಪ್ಪಿಸಿದ್ದಾರೆ. ಅಗ್ನಿ ಅವಘಡದಿಂದ ಸುಮಾರು 3 ಲಕ್ಷ ರೂ. ಗೂ ಅಧಿಕ ಹಾನಿ ಸಂಭವಿಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here

Hot Topics