LATEST NEWS
Udupi: ಮಣಿಪುರ ಹಿಂಸಾಚಾರ ಖಂಡಿಸಿ ಬೃಹತ್ ಪ್ರತಿಭಟನೆ..!
ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಘಟನೆ ಖಂಡಿಸಿ ಉಡುಪಿಯಲ್ಲಿ ಆ.3ರಂದು ಬೃಹತ್ ಪ್ರತಿಭಟನೆ ನಡೆಯಿತು.
ಉಡುಪಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ ನಡೆಯುತ್ತಿರುವ ಘಟನೆ ಖಂಡಿಸಿ ಉಡುಪಿಯಲ್ಲಿ ಆ.3ರಂದು ಬೃಹತ್ ಪ್ರತಿಭಟನೆ ನಡೆಯಿತು.
ಸಮಾನ ಮನಸ್ಕ ವೇದಿಕೆಗಳು ಈ ಪ್ರತಿಭಟನೆಗೆ ಕರೆ ನೀಡಿದ್ದು 3,000ಕ್ಕೂ ಹೆಚ್ಚು ಜನ ಭಾಗಿಯಾದರು.
ನಗರದ ಮದರ್ ಆಫ್ ಸಾರೋಸ್ ಚರ್ಚ್ ಮುಂಭಾಗದಿಂದ ಆರಂಭವಾದ ಪ್ರತಿಭಟನಾ ಮರವಣಿಗೆ ಕ್ರಿಶ್ಚಿಯನ್ ಹೈಸ್ಕೂಲ್ ವರೆಗೆ ಸಾಗಿ ಬಂತು.
ಬಳಿಕ ಕಾಲೇಜ್ ನ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಿತು.
ಮಣಿಪುರದಲ್ಲಿ ಹಿಂಸಾಚಾರ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿದೇಶ ಸುತ್ತುವುದರಲ್ಲಿ ಬಿಜಿಯಾಗಿದ್ದಾರೆ.
ಈ ವಿಚಾರದಲ್ಲಿ ಮೋದಿ ಮೌನ ಮುರಿಯಬೇಕು.
ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಪಾಲ್ಗೊಂಡ ಎಲ್ಲರೂ ಕಪ್ಪು ಬಟ್ಟೆಯನ್ನು ಧರಿಸಿ ಘಟನೆಯನ್ನ ಖಂಡಿಸಿದರು.
ಮೈಥೇಯಿ ಮತ್ತು ಕುಕಿ ಸಮುದಾಯದ ನಡುವೆ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ.
ಬುಡಕಟ್ಟು ಸಮುದಾಯದ ಮಹಿಳೆಯನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ.
ಇಷ್ಟೆಲ್ಲ ಆದರೂ ಡಬಲ್ ಇಂಜಿನ್ ಸರಕಾರ ಏನು ಮಾಡುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲಾಯಿತು.
DAKSHINA KANNADA
Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!
ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.
ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.
ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.
ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.
ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.
ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.
ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.
DAKSHINA KANNADA
ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ
ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.
ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.
LATEST NEWS
Baindoor: ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ..!
ಬೈಂದೂರು: ಬೈಂದೂರು- ಶಿರೂರು ನೆರೆಗುದ್ದೆ ರೈಲ್ವೆ ಸುರಂಗ ಮಾರ್ಗದಲ್ಲಿ ಕೋಮಾ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಯುವಕನೊಬ್ಬನನ್ನು ಆರೋಗ್ಯ ಕವಚ 108 ಆ್ಯಂಬುಲೆನ್ಸ್ ಸಿಬಂದಿ ರಕ್ಷಿಸಿ ಪ್ರಾಣ ಉಳಿಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು ರಾಜೇಶ್ (25)ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 10 ಗಂಟೆಗೆ ರೈಲ್ವೆ ಇಲಾಖೆ ನೀಡಿದ ಮಾಹಿತಿಯ ಮೇರೆಗೆ ಆರೋಗ್ಯ ಕವಚ 108 ಸಿಬಂದಿ ಕಾರ್ಯಚರಣೆ ನಡೆಸಿದರು.
ರೈಲ್ವೇ ಸುರಂಗ ಮಾರ್ಗದೊಳಗೆ ಸುಮಾರು 3 ಕಿ.ಮೀ ನಡೆದು ಕೊಂಡು ಹೋಗಿ ಹಳಿಯ ಪಕ್ಕದಲ್ಲಿ ಮುಗುಚಿ ಬಿದ್ದಿದ್ದ ವ್ಯಕ್ತಿಯನ್ನು ಸ್ಟ್ರೆಚರ್ ನಲ್ಲಿ ಹಾಕಿ ಹೊತ್ತು ಹೊರತಂದು ಬೈಂದೂರು ಆಸ್ಪತ್ರೆಗೆ ದಾಖಲಿಸಿದರು.
ಅಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಅಲ್ಲಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆ್ಯಂಬುಲೆನ್ಸ್‌ನ ಪೈಲೆಟ್ ಶರಣ ಬಸವ ಮತ್ತು ಇ ಎಂ ಟಿ ಪ್ರತಿಭಾ ಅವರು ಅಸ್ವಸ್ಥ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲು ಮಾಡಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
- DAKSHINA KANNADA7 days ago
Ullala: 25 ಕೋಟಿ ರೂ. ಲಾಟರಿ ಒಲಿದಿದೆ ಎಂಬ ಲಿಂಕ್ ಕಳುಹಿಸಿ ಮೋಜಿನಾಟ..!
- FILM6 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- DAKSHINA KANNADA6 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
- FILM6 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!