ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಇಂದು ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕಾರ ಮಾಡಿದ ಬಳಿಕ 75ನೇ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಶುಭ ಸಂದೇಶ ನೀಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಕೈಗೊಂಡ ಹಲವಾರು ಯೋಜನೆಗಳ ಕುರಿತು ಮಾಹಿತಿ ನೀಡಿದರು. ಇದೇ ವೇಳೆ 100 ಮೀಟರ್ ಉದ್ದದ ಧ್ವಜವನ್ನು ಬಿಡಿಸಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಅನೇಕ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮರಾವ್, ಎಸ್‌ಪಿ ವಿಷ್ಣುವರ್ಧನ್ ಸೇರಿ ಹಲವು ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.