HomeLATEST NEWSಉಡುಪಿ: ಕೊಲ್ಲೂರು ದೇವಾಲಯದ ಮುಂಭಾಗ 'ದಿ ಕೇರಳ ಸ್ಟೋರಿ' ಬ್ಯಾನರ್ ಅಳವಡಿಕೆ

ಉಡುಪಿ: ಕೊಲ್ಲೂರು ದೇವಾಲಯದ ಮುಂಭಾಗ ‘ದಿ ಕೇರಳ ಸ್ಟೋರಿ’ ಬ್ಯಾನರ್ ಅಳವಡಿಕೆ

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಕೇರಳ ಸ್ಟೋರಿ ಚಿತ್ರದ ಪ್ರಚಾರ ಕಾರ್ಯ ನಡೆದಿದೆ.

ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರದಲ್ಲಿರುವ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಕೇರಳ ಸ್ಟೋರಿ ಚಿತ್ರದ ಪ್ರಚಾರ ಕಾರ್ಯ ನಡೆದಿದೆ.

ರಾಷ್ಟ್ರಾದ್ಯಂತ ಭಾರೀ ಚರ್ಚೆ ಎಬ್ಬಿಸಿರುವ ಈ ಚಲನಚಿತ್ರ ಲವ್ ಜಿಹಾದ್ ನ ಕುರಿತು ಬೆಳಕು ಚೆಲ್ಲಿದೆ.

ಕೊಲ್ಲೂರು ಮೂಕಾಂಬಿಕಾ ದೇಗುಲ ಕ್ಕೆ ಕೇರಳದ ಭಕ್ತರೇ ಹೆಚ್ಚು. ‘ನಿಮ್ಮ ಮುಂದಿನ ಜನಾಂಗ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಬರಬೇಕೆಂದರೆ ಕೇರಳ ಸ್ಟೋರಿ ಚಿತ್ರ ನೋಡಿ’ ಎಂಬ ಬೋರ್ಡ್ ಕೊಲ್ಲೂರಿಗೆ ಬರುವ ಪ್ರವಾಸಿಗರ ಗಮನ ಸೆಳಿತಾ ಇದ್ದು, ಆಂಗ್ಲ ಭಾಷೆಯಲ್ಲಿ ಈ ಬೋರ್ಡ್ ಅನ್ನು ಹಾಕಲಾಗಿದೆ.

ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾದ ವಿನೋದ್ ಕೊಲ್ಲೂರು, ವಿಜಯ ಬಳೆಗಾರ್, ಸಂತೋಷ್ ಭಟ್, ಪ್ರಕಾಶ್ ಹಳ್ಳಿ ಬೇರು, ಹರೀಶ್ ಶೆಟ್ಟಿ ನೇತೃತ್ವದಲ್ಲಿ ದೇವಾಲಯದ ದ್ವಾರ ಹಾಗೂ ಆವರಣದ ಎರಡು ಕಡೆ ಬ್ಯಾನರ್ ಅಳವಡಿಸಿದ್ದಾರೆ.

ಬ್ಯಾನರ್ ಅಳವಡಿಕೆಗೆ ಪಂಚಾಯತ್ ಪರವಾನಿಗೆ ಕೂಡಾ ಮಾಡಿಸಲಾಗಿದೆ ಎಂದು ತಿಳಿದು ಬಂದಿದೆ.

Latest articles

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...