ಉಡುಪಿ : ಉಡುಪಿ ಜಿಲ್ಲೆಯ ಕಾಪು ಸಮೀಪದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭಾನುವಾರ ಬೈಕ್ ಮತ್ತು ಆ್ಯಂಬುಲೆನ್ಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಉಚ್ಚಿಲ ನಿವಾಸಿ 24 ವರ್ಷ ಪ್ರಾಯದ ರಿತೇಶ್ ದೇವಾಡಿಗ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಆಂಬುಲೆನ್ಸ್ ಮತ್ತು ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.
ಬೈಕ್ ಸವಾರ ರಿತೇಶ್ ದೇವಾಡಿಗ ತೀವ್ರ ಸ್ವರೂಪದ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ತಡ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ರಿತೇಶ್ ಕೊನೆಯುಸಿರೆಳೆದಿದ್ದಾನೆ.
ಕಾಪು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.