ಕೊರೊನಾ ಬಂದ್ರೂ ಕೋಳಿ ಅಂಕಕ್ಕೇನೂ ಬರವಿಲ್ಲ….
ಕೊರೊನಾ ಬಂದ್ರೂ ಕೋಳಿ ಅಂಕಕ್ಕೇನೂ ಬರವಿಲ್ಲ….
ಉಡುಪಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಲೇ ಇದೆ. ಈ ನಡುವೆ ಜನ ಕೂಡ ಇದನ್ನು ಲೆಕ್ಕಿಸದೇ ಬೇಕಾಬಿಟ್ಟಿ ತಿರುಗಾಡುತ್ತಿದ್ದಾರೆ.
ಆದ್ರೆ ಉಡುಪಿ ಜನತೆಯಂತೂ ಮಿತಿ ಮೀರಿ ವರ್ತಿಸುತ್ತಿದ್ದಾರೆ. ಹೌದು ಈ ಕೊರೊನಾದ ನಡುವೆಯೂ ಕೋಳಿ ಅಂಕ, ಜುಗಾರಿ ಅಂತ ತಮಗಿಷ್ಟ ಬಂದಂತೆ ಗುಂಪು ಕಟ್ಟಿಕೊಂಡು ಮಜಾ ಉಡಾಯಿಸುತ್ತಿದ್ದಾರೆ.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತ ಜನನಾಯಕರು ಬೊಬ್ಬೆ ಹೊಡೆಯುತ್ತಿದ್ದರೂ ಕೂಡ ಕೋಳಿ ಅಂಕ ಮಾಡಿದ್ದಾರೆ.
ಜುಗಾರಿಕೋರರು ತಮ್ಮ ಚಾಳಿ ಮುಂದುವರಿಸಿದ್ದಾರೆ. ಬ್ರಹ್ಮಾವರ ತಾಲೂಕು ಕಾವಡಿ ಗ್ರಾಮದ ಹೌರಾಲಿಯ ಮಹಾಲಿಂಗೇಶ್ವರ ದೇವಸ್ಥಾನ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸಿದ್ದಾರೆ.
ಹಲವು ಜನ ಗುಂಪು ಸೇರಿಕೊಂಡು ಕೋಳಿಗಳ ಕಾಲಿಗೆ ಹರಿತವಾದ ಬ್ಲೇಡ್ ಕಟ್ಟಿ ಆಡುತ್ತಿದ್ದರು. ಹಣವನ್ನು ಪಣವಾಗಿ ಕಟ್ಟಿ ಗೆದ್ದ ಕೋಳಿಯ ಮಾಲಕ ಲಾಭ ಗಳಿಸುತ್ತಿದ್ದರು.
ಇದೀಗ ಕೋಳಿ ಅಂಕ ಹಾಗೂ ಜುಗಾರಿ ಅಡ್ಡೆಗೆ ಧಾಳಿ ಮಾಡಿದ ಪೊಲೀಸರು ಲಕ್ಷಾಂತರ ಮೌಲ್ಯದ ಸೊತ್ತು, ಹಣ ಹಾಗೂ ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.
ಉಪನಿರೀಕ್ಷಕ ನಿತ್ಯಾನಂದ ಗೌಡ ನೇತೃತ್ವದಲ್ಲಿ ಕೋಟ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಜುಗಾರಿ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿದ್ದಾರೆ.
ಕಾವಡಿ ಹೌರಾಲು ನಿವಾಸಿಗಳಾದ ಮಧುಕರ (33), ಜಯರಾಮ ಶೆಟ್ಟಿ(49), ಪ್ರಶಾಂತ (42), ಕಾರ್ಕಡ ನಿವಾಸಿ ರಾಘವೇಂದ್ರ (39), ಬಾರ್ಕೂರು ಹೇರಾಡಿಯ ಲೊಕೇಶ್ ಬಾರ್ಕೂರು (35),
ಸಾಲಿಗ್ರಾಮ ಕಾರ್ಕಡದ ಸುಧಾಕರ(39), ಬಾರ್ಕೂರು ಹೇರಾಡಿ ನಿವಾಸಿ ಸುಕೇತ (29) ಬಂಧಿತ ಆರೋಪಿಗಳಾಗಿದ್ದಾರೆ. ಪೊಲೀಸರು ರೈಡ್ ಮಾಡುತ್ತಿದ್ದಂತೆ ಇಬ್ಬರು ಸ್ಥಳದಲ್ಲೇ ಬೈಕ್ ಬಿಟ್ಟು ಪರಾರಿಯಾಗಿದ್ದಾರೆ.
1 ಲಕ್ಷದ 72 ಸಾವಿರದ 880 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಇದೀಗ ಪೊಲೀಸರ ವಶವಾಗಿದೆ.
ಜುಗಾರಿಗೆ ಬಳಸಿದ ಒಟ್ಟು 6,880 ರೂಪಾಯಿ, ಸಾವಿರ ರೂಪಾಯಿ ಮೌಲ್ಯದ 2 ಕೋಳಿಗಳು ಹಾಗೂ 8 ದ್ವಿಚಕ್ರ ವಾಹನಗಳನ್ನು ಕೋಟ ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
DAKSHINA KANNADA
ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ
ಬೆಂಗಳೂರು/ಮಂಗಳೂರು: ಇನ್ನೇನು ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ಸರಕಾರ ಸಿದ್ಧತೆ ನಡೆಸುತ್ತಿದೆ. ಖ್ಯಾತ ಸಾಹಿತಿ ಹಂಪ ನಾಗರಾಜಯ್ಯನವರು ಈ ಬಾರಿಯ ದಸರಾವನ್ನು ಉದ್ಘಾಟಿಸಿಲಿದ್ದಾರೆಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಘೋಷಣೆ ಮಾಡಿದ್ದಾರೆ.
ಶಾಲಾ ಮಕ್ಕಳಿಗೆ ರಜೆ ಘೋಷಣೆ:
ದಸರಾ ಹಬ್ಬಕ್ಕೆ ಶಾಲಾ ಮಕ್ಕಳಿಗೆ ಸರಕಾರ ರಜೆ ಘೋಷಣೆ ಮಾಡಿದೆ. ಅ.3ರಿಂದ ಅ.20ರವರೆಗೆ ದಸರಾ ರಜೆ ಘೋಷಣೆ ಮಾಡಿದ್ದು, ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯವಾಗಲಿದೆ. ಹೊರತಾಗಿ ಸಿಬಿಎಸ್ಸಿ ಹಾಗೂ ಐಎಸ್ಸಿಎಸ್ ಶಾಲೆಗಳಿಗೆ ದಸರಾ ರಜೆ ಅನ್ವಯವಾಗುವುದಿಲ್ಲ. ಯಾಕಂದ್ರೆ ಇವೆರಡು ಕೇಂದ್ರ ಪಠ್ಯಕ್ರಮದಡಿ ಕಾರ್ಯನಿರ್ವಹಿಸುತ್ತಿರುವುದರಿಂದ ಶಾಲಾ ರಜೆ ದಿನಾಂಕ ಹಾಗೂ ರಜಾ ಅವಧಿ ಬೇರೆಯಾಗಿರುತ್ತದೆ.
LATEST NEWS
ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್ ಪತ್ತೆ
ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಈಗ ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್ನಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು.
FILM
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ಈಗಾಗಲೇ ಜಾನಿ ಮಾಸ್ಟರ್ ನನ್ನು ಡ್ಯಾನ್ಸ್ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್ನ ಚಂಚಲ್ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!
ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.