ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರದ ಕೋಟ ಸಮೀಪದ ಸಾಸ್ತಾನ ಪಾಂಡೇಶ್ವರ ಗ್ರಾಮದ ಮನೆಯೊಂದರಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಬೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೋಟ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಪು ಎಲ್ಲೂರುರಿನ ಮಂಜರಬೆಟ್ಟು ನಿವಾಸಿ 38 ವರ್ಷದ ರಾಜೇಶ್ ದೇವಾಡಿಗ ಹಾಗೂ ಕಾರ್ಕಳದ ಈದು ಹೊಸ್ಮಾರಿನ ನಿವಾಸಿ 39 ವರ್ಷದ ಮೊಹಮ್ಮದ್ ರಿಯಾಜ್ ಹೊಸ್ಮಾರ್ ಬಂಧಿತ ಆರೋಪಿಗಳಾಗಿದ್ದಾರೆ.
ಬೆಂಗಳೂರಿನಲ್ಲಿ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿಯವರ ಸಾಸ್ತಾನ ಪಾಂಡೇಶ್ವರ ಗ್ರಾಮದ ಮಠದ ತೋಟ ಮನೆಯಲ್ಲಿ 2022 ರ ಸೆಪ್ವೆಂಬರ್ ತಿಂಗಳಲ್ಲಿ ಈ ಕಳ್ಳತನ ಪ್ರಕರಣ ನಡೆದಿತ್ತು.
ಈ ವೇಳೆ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಆರೋಪಿಗಳಿಬ್ಬಗಳು ಪರಾರಿಯಾಗಿದ್ದರು.
ಇನ್ನು ಆರೋಪಿಗಳಿಂದ ಕಳ್ಳತನ ನಡೆಸಿದ ಸುಮಾರು 15 ಲಕ್ಷದ ಚಿನ್ನಾಭರಣ, ಕಳ್ಳತನದ ಹಣದಿಂದ ಖರೀದಿಸಿದ ಸುಮಾರು 2 ಲಕ್ಷ 50 ಸಾವಿರ ಮೌಲ್ಯದ ಪೋರ್ಡ್ ಮಾಂಡಿಯೋ ಕಾರು, ಸುಮಾರು 1 ಲಕ್ಷ ಮೌಲ್ಯದ ಹಿರೋ ಕಂಪೆನಿಯ ಡೆಸ್ಟೀನಿ ಬೈಕ್ ಹಾಗೂ ಕೃತ್ಯಕ್ಕೆ ಬಳಸಿದ ಸುಮಾರು 50 ಸಾವಿರ ಮೌಲ್ಯದ ಹೊಂಡಾ ಆ್ಯಕ್ಟೀವ್ ಸ್ಕೂಟರ್ ಸೇರಿದಂತೆ ಒಟ್ಟು 19 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿಚಾರಣೆ ವೇಳೆ ಇವರು ಜಿಲ್ಲೆ ಹಾಗೂ ಹೊರ ಜಿಲ್ಲೆಯ ಮನೆಕಳವು, ವಾಹನ ಕಳವು ಪ್ರಕರಣದಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. ಕೋಟ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.