LATEST NEWS
Udupi: ಮಣಿಪುರ ಜನತೆ ಶಾಂತಿ ಕಾಪಾಡಲು ಪೇಜಾವರ ಶ್ರೀ ಮನವಿ
Published
1 year agoon
By
Adminದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ ಎಂದು ಶ್ರೀ ಪೇಜಾವರ ಮಠ ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಉಡುಪಿ: ದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ ಎಂದು ಶ್ರೀ ಪೇಜಾವರ ಮಠ ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು.
ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ ಅವಮಾನವಾಗುತ್ತದೆ .
ಪ್ರಪಂಚದ ಸಮಗ್ರ ಇತಿಹಾಸವನ್ನು ಗಮನಿಸಿದರೆ ಹಿಂಸೆ ಆಕ್ರಮಣ ಅತ್ಯಾಚಾರಗಳಿಂದ ಯಾರೂ ಯಾವ ದೇಶವೂ ಏನನ್ನೂ ಸಾಧಿಸಿಲ್ಲ.
ನಮ್ಮ ರಾಮಾಯಣ ಮಹಾಭಾರತಗಳೂ ಅದನ್ನು ಸಾರಿ ಹೇಳಿವೆ .
ಮಣಿಪುರದ ನೆಲದಲ್ಲಿ ಅನಾದಿಕಾಲದಿಂದ ಬದುಕುತ್ತಿರುವ ಎರಡು ಸಮುದಾಯಗಳ ನಡುವೆ ಯಾವುದೋ ಅಭಿಪ್ರಾಯ ಬೇಧಗಳಿಂದ ಹುಟ್ಟಿಕೊಂಡ ಈ ಗಲಭೆ ದಂಗೆಗಳಿಂದ ಏನನ್ನು ಸಾಧಿಸಲು ಹೊರಟಿದ್ದೇವೆ ? ನಮ್ಮ ಮುಂದಿನ ಪೀಳಿಗೆಗೆ ಯಾವ ಸಂದೇಶವನ್ನು ಕೊಡಲು ಹೊರಟಿದ್ದೇವೆ ಎನ್ನುವುದನ್ನು ಯೋಚಿಸಿದ್ದೀರಾ?
ಭಗವದ್ಗೀತೆಯಲ್ಲಿ ಭಗವಾನ್ ಶ್ರೀ ಕೃಷ್ಣ ಹೇಳಿದಂತೆ ಆಕ್ರೋಶದ ಕೈಗೆ ಬುದ್ಧಿಯನ್ನು ಕೊಟ್ಟರೆ ಬುದ್ಧಿನಾಶವಾಗುತ್ತದೆ ಮತ್ತು ಬುದ್ಧಿನಾಶವು ನಮ್ಮೆಲ್ಲರ ನಾಶಕ್ಕೆ ಕಾರಣವಾಗುತ್ತದೆ ಎಂದು ಸಾರಿರುವುದನ್ನು ಗಮನಿಸಬೇಕು .
ಆದ್ದರಿಂದ ಇಂಥ ವಿನಾಶಕಾರಿ ಬೆಳವಣಿಗೆಗಳು ಅವಶ್ಯವೇ ಎನ್ನುವುದನ್ನು ಗಲಭೆಯಲ್ಲಿ ತೊಡಗಿಕೊಂಡ ಸಮುದಾಯಗಳ ಮುಖಂಡರು ಅತ್ಯಂತ ತಾಳ್ಮೆ ಸಹನೆಯಿಂದ ವಿವೇಚಿಸಬೇಕು .
ಮಣಿಪುರದ ಜನತೆ ತಕ್ಷಣ ಹಿಂಸೆಯ ಮಾರ್ಗವನ್ನು ಬಿಟ್ಟು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಪರಸ್ಪರ ಸಮಾಲೋಚಿಸಿ ಮಣಿಪುರದ ಮತ್ತು ಭಾರತದ ಭವ್ಯ ಭವಿಷ್ಯದ ದೃಷ್ಟಿಯಿಂದ ಕೂಡಲೇ ಪರಿಹರಿಸಿಕೊಂಡು ಇಡೀ ದೇಶಕ್ಕೇ ಒಂದು ಒಳ್ಳೆಯ ಸಂದೇಶವನ್ನು ಕೊಡಬೇಕು .
ಮಣಿಪುರ ರಾಜ್ಯದ ಶಾಂತಿ ಸುಭಿಕ್ಷೆ ಪ್ರಗತಿಗೆ ಮಾರಕವಾಗಿರುವ ಇಂಥ ಅಹಿತಕರ ಬೆಳವಣಿಗೆಗಳಿಗೆ ಆಸ್ಪದ ಕೊಡುವುದಿಲ್ಲ ಎಂದು ಎಲ್ಲರೂ ಒಟ್ಟಾಗಿ ಶಪಥಮಾಡಬೇಕು.
ನಮ್ಮ ಒಗ್ಗಟ್ಟು ನಮ್ಮ ಶಕ್ತಿ, ನಮ್ಮ ವಿಘಟನೆ ಮತ್ತೊಬ್ಬನ ಶಕ್ತಿ ಯಾಗುತ್ತದೆ ಎನ್ನುವುದನ್ನು ಅರಿತು ಒಗ್ಗಟ್ಟಿನಿಂದ ಮಣಿಪುರ ರಾಜ್ಯದ ಒಳಿತಿಗಾಗಿ ಎಲ್ಲರೂ ಒಟ್ಟಾಗಿ ಹೆಜ್ಜೆ ಹಾಕುವಂತಾಗಲಿ ಎಂದು ಆಶಿಸುತ್ತೇವೆ .
ಅವಶ್ಯವಿದ್ದರೆ ಮಣಿಪುರದ ಒಳಿತಿಗಾಗಿ ಯಾವುದೇ ಸಂಧಾನ ಮಾತುಕತೆಗಳಿಗೂ ಮಧ್ಯಸ್ಥಿಕೆ ವಹಿಸಲು ಸಿದ್ಧರಿದ್ದೇವೆ ಎನ್ನುವುದನ್ನೂ ತಿಳಿಸಲು ಬಯಸುತ್ತೇವೆ ಎಂದರು.
LATEST NEWS
ಅಮೇರಿಕಾದ ಮಾಜಿ ಅಧ್ಯಕ್ಷರ ನಿ*ಧನಕ್ಕೆ ಭಾರತದ ಗ್ರಾಮದಲ್ಲಿ ರಜೆ..!
Published
5 hours agoon
30/12/2024By
NEWS DESK4ಮಂಗಳೂರು/ಹರಿಯಾಣ : ಡಿಸೆಂಬರ್ 29 ರಂದು ತನ್ನ 100 ನೇ ವಯಸ್ಸಿನಲ್ಲಿ ನಿ*ಧನರಾದ ಯುನೈಟೆಡ್ ಸ್ಟೇಟ್ಸ್‌ನ 39 ನೇ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಗೌರವಾರ್ಥ ಭಾರತದ ಗ್ರಾಮವೊಂದರಲ್ಲಿ ರಜೆ ಘೋಷಣೆ ಮಾಡಲಾಗಿದೆ. ವಿಶೇಷ ಅಂದರೆ ಈ ಗ್ರಾಮಕ್ಕೆ ಜಿಮ್ಮಿ ಕಾರ್ಟರ್ ಅವರ ಹೆಸರಿಡಲಾಗಿದ್ದು, ಕಾರ್ಟರ್ ಪುರಿ ಅಂತ ಗುರುತಿಸಿಕೊಂಡಿದೆ. ಭಾರತಕ್ಕೆ ಭೇಟಿ ನೀಡಿದ ಅಮೆರಿಕಾದ ಮೂರನೇ ಅಧ್ಯಕ್ಷ ಹಾಗೂ ತುರ್ತು ಪರಿಸ್ಥಿಯ ಬಳಿಕ ಭೇಟಿ ನೀಡಿದ ಮೊದಲ ಅಧ್ಯಕ್ಷ ಜಿಮ್ಮಿ ಕಾರ್ಟರ್.
1978 ರ ಜನವರಿ 3 ರಂದು ಜಿಮ್ಮಿ ಕಾರ್ಟರ್ ಅವರು ಪತ್ನಿ ರೋಸಾಲಿನ್ ಅವರ ಜೊತೆ ಅಧಿಕೃತ ಭಾರತ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಹರಿಯಾಣದ ಗುರ್ಗಾಂವ್‌ನ ಸಣ್ಣ ಹಳ್ಳಿಯಾಗಿದ್ದ ಚುಮಾ ಖೇರಗಾಂವ್ ಗೆ ಭೇಟಿ ನೀಡಿದ್ದರು. 1960ರ ಸುಮಾರಿಗೆ ಜಿಮ್ಮಿ ಕಾರ್ಟರ್ ಅವರ ತಾಯಿ ಲಿಲಿಯನ್ ಅವರು ಬಾಂಬೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸಿದ್ದು, ಈ ಗ್ರಾಮದ ಜೊತೆ ನಂಟು ಹೊಂದಿದ್ದರು ಎನ್ನಲಾಗಿದೆ. ಹೀಗಾಗಿ ಈ ಗ್ರಾಮಕ್ಕೆ ಅಮೇರಿಕಾದ ಅಧ್ಯಕ್ಷ ಜಿಮ್ಮಿ ಕಾರ್ಟರ್ ಭೇಟಿ ನೀಡಿದ್ದರು.
ಮೂಲಭೂತ ಸೌಲಭ್ಯ ವಂಚಿತವಾಗಿದ್ದ ಈ ಹಳ್ಳಿಗೆ ಅಮೇರಿಕಾ ಅಧ್ಯಕ್ಷರು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಅಂದಿನ ಮೊರಾರ್ಜಿ ದೇಸಾಯಿ ಸರ್ಕಾರ ಗ್ರಾಮದ ರಸ್ತೆಗಳನ್ನು ಉನ್ನತೀಕರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕೆಲಸ ಮಾಡಿದ್ದರು. ಪ್ರಧಾನಿ ಮೊರಾರ್ಜಿ ದೇಸಾಯಿ ಅವರೇ ಈ ಗ್ರಾಮಕ್ಕೆ ತೆರಳಿ ಅಮೆರಿಕದ ಅಧ್ಯಕ್ಷರನ್ನು ಸ್ವಾಗತಿಸಿದ್ದರು. ಹರಿಯಾನಿ ಪೇಟ ಧರಿಸಿ ಅಮೇರಿಕಾ ಅಧ್ಯಕ್ಷರು ಕಾಣಿಸಿಕೊಂಡರೆ, ಅವರ ಪತ್ನಿ ಸ್ಥಳೀಯ ಉಡುಗೆ ಧರಿಸಿ ಗ್ರಾಮದಲ್ಲಿ ಅಡ್ಡಾಡಿದ್ದರು.
ಅಭಿವೃದ್ದಿ ಕಾಣದೇ ಇದ್ದ ಗ್ರಾಮಕ್ಕೆ ಅಮೇರಿಕಾ ಅಧ್ಯಕ್ಷ ಜಿಮ್ಮಿ ಕಾರ್ಟರ್ ಭೇಟಿಯಿಂದ ಅದೃಷ್ಟ ಖುಲಾಯಿಸಿತ್ತು. ಹೀಗಾಗಿ ಕಾರ್ಟರ್ ಅವರ ಗೌರವಾರ್ಥ ಗ್ರಾಮದ ಹೆಸರನ್ನೇ ‘ಕಾರ್ಟರ್ ಪುರಿ’ ಎಂದು ಮರು ನಾಮಕರಣ ಮಾಡಲಾಗಿತ್ತು.
ಇದನ್ನೂ ಓದಿ : ಕೇರಳ ಮೂಲದ ವಿದ್ಯಾರ್ಥಿನಿಯ ಶ*ವ ಸ್ಕಾಟ್ಲೆಂಡ್ ನದಿಯಲ್ಲಿ ಪತ್ತೆ
ಜಿಮ್ಮಿ ಕಾರ್ಟರ್ ಅವರು ಗ್ರಾಮಕ್ಕೆ ಭೇಟಿ ನೀಡಿದ ಜನವರಿ 3 ರಂದು ಇಂದಿಗೂ ಈ ಗ್ರಾಮದಲ್ಲಿ ರಜಾ ದಿನವಾಗಿ ಸ್ವಾತಂತ್ರ್ಯದಂತೆ ಸಂಭ್ರಮದ ದಿನವಾಗಿ ಆಚರಿಸಲಾಗುತ್ತದೆ. 2002 ರಲ್ಲಿ ಕಾರ್ಟರ್ ಅವರಿಗೆ ನೋಬೆಲ್ ಪ್ರಶಸ್ತಿ ಸಿಕ್ಕಾಗಲೂ ಇಲ್ಲಿ ಸಂಭ್ರಮಾಚರಣೆ ಮಾಡಲಾಗಿತ್ತು. ಇದೀಗ ತನ್ನ 100ನೇ ವಯಸ್ಸಿನಲ್ಲಿ ಅಗಲಿದ ನಾಯಕನಿಗೆ ಗ್ರಾಮದಲ್ಲಿ ಶೃದ್ಧಾಂಜಲಿ ಸಲ್ಲಿಸಿ ರಜೆ ಘೋಷಣೆ ಮಾಡಲಾಗಿದೆ.
International news
ಕೇರಳ ಮೂಲದ ವಿದ್ಯಾರ್ಥಿನಿಯ ಶ*ವ ಸ್ಕಾಟ್ಲೆಂಡ್ ನದಿಯಲ್ಲಿ ಪತ್ತೆ
Published
5 hours agoon
30/12/2024By
NEWS DESK3ಮಂಗಳೂರು/ಲಂಡನ್: ಡಿಸೆಂಬರ್ 6 ರಿಂದ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿನಿಯ ಶ*ವ ಸ್ಕಾಟ್ಲೆಂಡಿನ ನದಿಯೊಂದರಲ್ಲಿ ಪತ್ತೆಯಾಗಿದೆ.
ಕೇರಳದ ಕೋಲೆಂಚೇರಿಯ ಮೂಲದ ಸಂತ್ರಾ ಸಾಜು ಅವರು ಸ್ಕಾಟಿಷ್ ನ ಎಡಿನ್ ಬರ್ಗ್ ನಲ್ಲಿರುವ ಹೆರಿಯಟ್-ವ್ಯಾಟ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಡಿಸೆಂಬರ್ 6ರ ಸಂಜೆ ಲಿವಿಂಗ್ ಸ್ಟನ್ ನ ಆಲ್ಮಂಡ್ ವೇಲ್ ನಲ್ಲಿರುವ ಅಸ್ಡಾ ಸೂಪರ್ ಮಾರ್ಕೆಟ್ ನಲ್ಲಿ ಕೊನೆಯದಾಗಿ ಸಂತ್ರಾ ಕಾಣಿಸಿಕೊಂಡಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು.
ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾವು
‘ಡಿಸೆಂಬರ್ 27ರ ಬೆಳಿಗ್ಗೆ 11:55ರ ವೇಳೆ ಎಡಿನ್ ಬರ್ಗ್ ನ ನ್ಯೂಬ್ರಿಡ್ಜ್ ಬಳಿ ನದಿಯಲ್ಲಿ ಯುವತಿಯೊಬ್ಬಳ ಶ*ವ ಪತ್ತೆಯಾಗಿದ್ದು, ನಾಪತ್ತೆಯಾಗಿರುವ ಸಂತ್ರಾ ಅವರ ಮೃ*ತದೇಹವೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಮೃ*ತದೇಹದ ಗುರುತು ಖಚಿತಪಡಿಸಿಕೊಳ್ಳಲು ಸಂತ್ರಾ ಅವರ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ’ ಎಂದು ಸ್ಕಾಟ್ಲೆಂಡ್ ಪೊಲೀಸರು ತಿಳಿಸಿದ್ದಾರೆ.
ಸಂತ್ರಾ ಅವರ ಸಾವಿನ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
LATEST NEWS
ಸಿದ್ಧರಾಮಯ್ಯ ಪರ ಪ್ರತಾಪ್ ಸಿಂಹ ಬ್ಯಾಟಿಂಗ್; ಕಾಂಗ್ರೆಸ್ ಸೇರ್ತಾರಾ ಮಾಜಿ ಸಂಸದ?
Published
5 hours agoon
30/12/2024By
NEWS DESK4ಮಂಗಳೂರು/ಮೈಸೂರು : ಮೈಸೂರಿನ ರಸ್ತೆಯೊಂದಕ್ಕೆ ಸಿಎಂ ಸಿದ್ಧರಾಮಯ್ಯ ಅವರ ಹೆಸರಿಡುವ ವಿಚಾರಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ಸೂಚಿಸಿದ್ದರು. ಇದರ ಬೆನ್ನಲ್ಲೇ ಪ್ರತಾಪ್ ಸಿಂಹ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಗಾಸಿಪ್ ಹರಿದಾಡಲಾರಂಭಿಸಿದೆ.
ಮೈಸೂರು ಪಾಲಿಕೆಯು ಕೆಆರ್‌ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರಿಡುವ ಬಗ್ಗೆ ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗಿತ್ತು. ಹೆಸರಿಟ್ಟರೇನು ತಪ್ಪು? ಎಂದು ಮಾಜಿ ಸಂಸದ ಸಿಎಂ ಪರ ಮಾತನಾಡಿದ್ದರು. ಈ ವಿಚಾರ ಸ್ವತಃ ಬಿಜೆಪಿ ಪಾಳಯದಲ್ಲಿ ಅಸಮಾಧಾನ ಹುಟ್ಟಿಸಿತ್ತು. ಇದೀಗ ಪ್ರತಾಪ್ ಸಿಂಹ ಕಾಂಗ್ರೆಸ್ ಸೇರ್ತಾರೆ ಎಂಬ ಮಾತು ಕೇಳಿ ಬರುತ್ತಿದೆ.
ಏನಂದ್ರು ಪ್ರತಾಪ್ ಸಿಂಹ?
ರಸ್ತೆಗೆ ಸಿದ್ಧರಾಮಯ್ಯರ ಹೆಸರಿಡಿ ಎಂದ ತಕ್ಷಣ ನಾನು ಸಿದ್ಧರಾಮಯ್ಯ ಪರ ಅಂತಲ್ಲ. ಕೆ.ಆರ್.ಎಸ್ ರಸ್ತೆಗೆ ಹೆಸರಿಲ್ಲ ಎಂದು ಕಾರ್ಪೋರೇಷನ್‌ನವರು ಹೇಳಿದ್ದರು. ಹಾಗಾಗಿ ಸಿದ್ಧರಾಮಯ್ಯ ಹೆಸರಿಡಲಿ ಬಿಡಿ ಎಂದಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಮೈಸೂರಿಗೆ ಹಲವು ಕೊಡುಗೆಗಳನ್ನು ಸಿದ್ಧರಾಮಯ್ಯ ನೀಡಿದ್ದಾರೆ. ಹಾಗಾಗಿ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ ಎಂದಿದೆ. ಹಾಗೆಂದ ತಕ್ಷಣ ನಾನು ಸಿದ್ಧರಾಮಯ್ಯ ಪರ ಅಂತಲ್ಲ ಎಂದಿದ್ದಾರೆ.
ಕಳೆದ 11 ವರ್ಷದಿಂದ ಸಿದ್ಧರಾಮಯ್ಯರನ್ನು ವಿರೋಧಿಸುತ್ತಿರುವವನು ಪ್ರತಾಪ್ ಸಿಂಹ ಒಬ್ಬನೇ. ಅವರ ಸಿದ್ಧಾಂತಗಳ ವಿರೋಧಿ ನಾನು. ಮೈಸೂರು ಏರ್ಪೋರ್ಟ್‌ಗೆ ಟಿಪ್ಪು ಹೆಸರನ್ನು ಇಡಲು ಸಿದ್ಧರಾಮಯ್ಯ ಹೊರಟಿದ್ದರು. ಅದನ್ನು ಬೊಮ್ಮಾಯಿಗೆ ಹೇಳಿ ತಡೆದೆ. ಇದಕ್ಕೆ ಮೈಸೂರು ಮಹಾರಾಣಿ ಕೂಡ ನನ್ನನ್ನು ಹೊಗಳಿದ್ರು. ಮೈಸೂರು ಬೆಂಗಳೂರು ನಡುವೆ ಟಿಪ್ಪು ಎಕ್ಸ್‌ಪ್ರೆಸ್ ಅಂತ ಇತ್ತು. ಅದನ್ನು ಒಡೆಯರ್ ಎಕ್ಸ್‌ಪ್ರೆಸ್ ಅಂತ ಬದಲಾಯಿಸಿದೆ. ಅಂದು ಕೂಡ ಪ್ರಮೋದಾದೇವಿ ನನ್ನ ಕಾರ್ಯಕ್ಕೆ ಶ್ಲಾಘಿಸಿದ್ರು .
ಇದನ್ನೂ ಓದಿ : ಅಯ್ಯಪ್ಪ ಮಾಲಾಧಾರಿಗಳು ಕಪ್ಪು ಬಟ್ಟೆ ಯಾಕೆ ಧರಿಸುತ್ತಾರೆ ಗೊತ್ತಾ?
ಸಿದ್ಧರಾಮಯ್ಯ ಸರ್ಕಾರ ನನ್ನ ಮೇಲೆ ಕಳೆದ 3 ತಿಂಗಳಲ್ಲಿ 5 ಎಫ್‌ಐಆರ್ ಹಾಕಿದೆ. ನನ್ನ ಬದ್ಧತೆ ಪ್ರಶ್ನಿಸುವವರು ನನ್ನ ಟ್ರ್ಯಾಕ್ ರೆಕಾರ್ಡ್ ಒಮ್ಮೆ ನೋಡಿ ಎಂದು ವದಂತಿ ಹಬ್ಬಿಸಿದವರಿಗೆ ಟಾಂಗ್ ನೀಡಿದ್ದಾರೆ. ರಸ್ತೆಗೆ ಹೆಸರಿಡುವ ವಿಚಾರವನ್ನು ದೊಡ್ಡದು ಮಾಡೋದು ಬೇಡ. ವಿವಾದ ಮಾಡೋದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ ಎಂದಿದ್ದಾರೆ.
LATEST NEWS
ಕರಾವಳಿ ಉತ್ಸವ ಪ್ರಯುಕ್ತ ಜ.4, 5 ರಂದು ಕದ್ರಿ ಪಾರ್ಕ್ ನಲ್ಲಿ ಶ್ವಾನ ಪ್ರದರ್ಶನ, ಕಾರ್- ಬೈಕ್ ಎಕ್ಸ್ಪೊ
ಅಯ್ಯಪ್ಪ ಮಾಲಾಧಾರಿಗಳು ಕಪ್ಪು ಬಟ್ಟೆ ಯಾಕೆ ಧರಿಸುತ್ತಾರೆ ಗೊತ್ತಾ?
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಹಗ್ಗ ತುಂಡಾಗಿ ಬಿದ್ದು ಸಾವು
ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ
ದಕ್ಷಿಣ ಕೊರಿಯಾದ ವಿಮಾನ ಪತನಕ್ಕೆ ಕಾರಣ ಬಹಿರಂಗ; ಬದುಕುಳಿದ ಇಬ್ಬರು ಹೇಗಿದ್ದಾರೆ ?
ಮದುವೆಗೆ ಹೋಗುವಾಗ ನದಿಗೆ ಟ್ರಕ್ ಬಿದ್ದು ಘೋರ ದುರಂತ : ಮಕ್ಕಳು ಸೇರಿ 60 ಮಂದಿ ಸಾವು
Trending
- DAKSHINA KANNADA3 days ago
ದಿ।ಮನಮೋಹನ್ ಸಿಂಗ್ ಸಹಿ ಇರುವ ರೂ 1ರ ನೋಟು ರೂ.100 ಕ್ಕೆ ಮಾರಾಟ…!
- FILM6 days ago
ಆ ಒಂದು ದೃಶ್ಯದಿಂದ ಪುಷ್ಪ 2 ಚಿತ್ರಕ್ಕೆ ಮತ್ತೆ ಸಂಕಷ್ಟ!
- FILM5 days ago
ಶಿವರಾಜ್ಕುಮಾರ್ಗೆ ಕ್ಯಾನ್ಸರ್ ತಗುಲಿದ್ದು ದೇಹದ ಈ ಭಾಗಕ್ಕೆ
- bangalore6 days ago
ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಚಿನ್ನ ಖರೀದಿಸಿ ವಂಚನೆ; ನಟ ಧಮೇಂದ್ರ ವಿರುದ್ದ ಎಫ್ ಐ ಆರ್ ದಾಖಲು !