Connect with us

LATEST NEWS

Udupi: ಮಣಿಪುರ ಜನತೆ ಶಾಂತಿ ಕಾಪಾಡಲು ಪೇಜಾವರ ಶ್ರೀ ಮನವಿ

Published

on

ದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ‌ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ ಎಂದು  ಶ್ರೀ ಪೇಜಾವರ ಮಠ ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಉಡುಪಿ: ದೇಶದ ಅವಿಭಾಜ್ಯ ಅಂಗವಾಗಿರುವ ಮಣಿಪುರ ರಾಜ್ಯದಲ್ಲಿ ಇತ್ತೀಚಿನ‌ ದಿನಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಬೆಳವಣಿಗೆಗಳಿಂದ ಮನಸ್ಸಿಗೆ ತುಂಬ ವಿಷಾದವಾಗಿದೆ ಎಂದು  ಶ್ರೀ ಪೇಜಾವರ ಮಠ ಉಡುಪಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜಗತ್ತಿಗೇ ಅಹಿಂಸೆ ಶಾಂತಿಯ ಮಂತ್ರವನ್ನು ಅತ್ಯಂತ ಪರಿಣಾಮಕಾರಿಯಾಗಿ ಬೋಧಿಸಿದ ಭಾರತದ ಯಾವುದೇ ಭಾಗದಲ್ಲಿ ಇಂಥ ವಿಲಕ್ಷಣ ಬೆಳವಣಿಗೆಗಳು ನಡೆಯಬಾರದು.

ಅದು ನಮಗೆ ಬದುಕು ಕೊಟ್ಟ ನೆಲಕ್ಕೆ ನಾವು ಮಾಡುವ ಅವಮಾನವಾಗುತ್ತದೆ .

ಪ್ರಪಂಚದ ಸಮಗ್ರ ಇತಿಹಾಸವನ್ನು ಗಮನಿಸಿದರೆ ಹಿಂಸೆ ಆಕ್ರಮಣ ಅತ್ಯಾಚಾರಗಳಿಂದ ಯಾರೂ ಯಾವ ದೇಶವೂ ಏನನ್ನೂ ಸಾಧಿಸಿಲ್ಲ.

ನಮ್ಮ ರಾಮಾಯಣ ಮಹಾಭಾರತಗಳೂ ಅದನ್ನು ಸಾರಿ ಹೇಳಿವೆ .

ಮಣಿಪುರದ ನೆಲದಲ್ಲಿ ಅನಾದಿಕಾಲದಿಂದ ಬದುಕುತ್ತಿರುವ ಎರಡು ಸಮುದಾಯಗಳ ನಡುವೆ ಯಾವುದೋ ಅಭಿಪ್ರಾಯ ಬೇಧಗಳಿಂದ ಹುಟ್ಟಿಕೊಂಡ ಈ ಗಲಭೆ ದಂಗೆಗಳಿಂದ ಏನನ್ನು ಸಾಧಿಸಲು ಹೊರಟಿದ್ದೇವೆ ? ನಮ್ಮ ಮುಂದಿನ ಪೀಳಿಗೆಗೆ ಯಾವ ಸಂದೇಶವನ್ನು ಕೊಡಲು ಹೊರಟಿದ್ದೇವೆ ಎನ್ನುವುದನ್ನು ಯೋಚಿಸಿದ್ದೀರಾ?

ಭಗವದ್ಗೀತೆಯಲ್ಲಿ ಭಗವಾನ್ ಶ್ರೀ ಕೃಷ್ಣ ಹೇಳಿದಂತೆ ಆಕ್ರೋಶದ ಕೈಗೆ ಬುದ್ಧಿಯನ್ನು ಕೊಟ್ಟರೆ ಬುದ್ಧಿನಾಶವಾಗುತ್ತದೆ ಮತ್ತು ಬುದ್ಧಿನಾಶವು ನಮ್ಮೆಲ್ಲರ ನಾಶಕ್ಕೆ ಕಾರಣವಾಗುತ್ತದೆ ಎಂದು ಸಾರಿರುವುದನ್ನು ಗಮನಿಸಬೇಕು .

ಆದ್ದರಿಂದ ಇಂಥ ವಿನಾಶಕಾರಿ ಬೆಳವಣಿಗೆಗಳು ಅವಶ್ಯವೇ ಎನ್ನುವುದನ್ನು ಗಲಭೆಯಲ್ಲಿ ತೊಡಗಿಕೊಂಡ ಸಮುದಾಯಗಳ ಮುಖಂಡರು ಅತ್ಯಂತ ತಾಳ್ಮೆ ಸಹನೆಯಿಂದ ವಿವೇಚಿಸಬೇಕು .

ಮಣಿಪುರದ ಜನತೆ ತಕ್ಷಣ ಹಿಂಸೆಯ ಮಾರ್ಗವನ್ನು ಬಿಟ್ಟು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಪರಸ್ಪರ ಸಮಾಲೋಚಿಸಿ ಮಣಿಪುರದ ಮತ್ತು ಭಾರತದ ಭವ್ಯ ಭವಿಷ್ಯದ ದೃಷ್ಟಿಯಿಂದ ಕೂಡಲೇ ಪರಿಹರಿಸಿಕೊಂಡು ಇಡೀ ದೇಶಕ್ಕೇ ಒಂದು ಒಳ್ಳೆಯ ಸಂದೇಶವನ್ನು ಕೊಡಬೇಕು .

ಮಣಿಪುರ ರಾಜ್ಯದ ಶಾಂತಿ ಸುಭಿಕ್ಷೆ ಪ್ರಗತಿಗೆ ಮಾರಕವಾಗಿರುವ ಇಂಥ ಅಹಿತಕರ ಬೆಳವಣಿಗೆಗಳಿಗೆ ಆಸ್ಪದ ಕೊಡುವುದಿಲ್ಲ ಎಂದು ಎಲ್ಲರೂ ಒಟ್ಟಾಗಿ ಶಪಥಮಾಡಬೇಕು.

ನಮ್ಮ ಒಗ್ಗಟ್ಟು ನಮ್ಮ ಶಕ್ತಿ, ನಮ್ಮ ವಿಘಟನೆ ಮತ್ತೊಬ್ಬನ ಶಕ್ತಿ ಯಾಗುತ್ತದೆ ಎನ್ನುವುದನ್ನು ಅರಿತು ಒಗ್ಗಟ್ಟಿನಿಂದ ಮಣಿಪುರ ರಾಜ್ಯದ ಒಳಿತಿಗಾಗಿ ಎಲ್ಲರೂ ಒಟ್ಟಾಗಿ ಹೆಜ್ಜೆ ಹಾಕುವಂತಾಗಲಿ ಎಂದು ಆಶಿಸುತ್ತೇವೆ .

ಅವಶ್ಯವಿದ್ದರೆ ಮಣಿಪುರದ ಒಳಿತಿಗಾಗಿ ಯಾವುದೇ ಸಂಧಾನ ಮಾತುಕತೆಗಳಿಗೂ ಮಧ್ಯಸ್ಥಿಕೆ ವಹಿಸಲು ಸಿದ್ಧರಿದ್ದೇವೆ ಎನ್ನುವುದನ್ನೂ ತಿಳಿಸಲು ಬಯಸುತ್ತೇವೆ ಎಂದರು.

 

Click to comment

Leave a Reply

Your email address will not be published. Required fields are marked *

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending