Connect with us

    LATEST NEWS

    Udupi: ನೆರೆ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಭೇಟಿ

    Published

    on

    ಉಡುಪಿ ಹಾಗೂ ಪಡುಬಿದ್ರೆಯಲ್ಲಿ ಮಳೆಯಿಂದಾಗಿ ಹಾನಿಗೆ ಒಳಗಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜು.8ರಂದು ಭೇಟಿ ನೀಡಿದರು. 

    ಉಡುಪಿ: ಉಡುಪಿ ಹಾಗೂ ಪಡುಬಿದ್ರೆಯಲ್ಲಿ ಮಳೆಯಿಂದಾಗಿ ಹಾನಿಗೆ ಒಳಗಾದ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜು.8ರಂದು ಭೇಟಿ ನೀಡಿದರು.

    ಬಳಿಕ ಕಡಲ ತೀರಗಳಿಗೆ ಭೇಟಿ ನೀಡಿ ಜಿಲ್ಲೆಯ ಪರಿಸ್ಥಿತಿಯನ್ನು ಅವಲೋಕಿಸಿದರು.

    ಕೃತಕ ನೆರೆಯಿಂದಾಗಿ ಸಂಕಷ್ಟಕ್ಕೆ ಒಳಗಾದ ಸ್ಥಳೀಯ ನಿವಾಸಿಗಳನ್ನು, ಮೀನುಗಾರರನ್ನು ಭೇಟಿ ಮಾಡಿ ಕಷ್ಟಗಳನ್ನು ಆಲಿಸಿದರು.

    ನಂತರ ಈ ಕುರಿತು ಪಡುಬಿದ್ರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಉಡುಪಿಯಲ್ಲಿ ತಡವಾದರೂ ಕೂಡ ಜೋರಾಗಿ ಮಳೆ ಬರುತ್ತಿದೆ.

    ನಿನ್ನೆ ಬಜೆಟ್ ಇದ್ದ ಕಾರಣ ಉಡುಪಿಗೆ ಭೇಟಿ ನೀಡಲು ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳ ಜೊತೆ ಹಾಗೂ ಶಾಸಕರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ.

    ಜಿಲ್ಲೆಯಲ್ಲಿ ಏಳು ಜನ ಮಳೆಗೆ ಸಾವನ್ನಪ್ಪಿದ್ದಾರೆ. ಕಡಲ ಕೊರೆತದಿಂದ ಸಾಕಷ್ಟು ಭೂ ಪ್ರದೇಶ ಹಾನಿಯಾಗಿದೆ.

    ಮೀನುಗಾರರಿಗೂ ತೊಂದರೆ ಆಗಿದೆ. ಅನೇಕ ಮನೆಗಳು ಹಾನಿಯಾಗಿದೆ ಜಿಲ್ಲಾಧಿಕಾರಿಗಳ ಜೊತೆ ರಿವ್ಯೂ ಮೀಟಿಂಗ್ ಮಾಡುತ್ತೇನೆ. ಇದು ಒಂದೇ ವರ್ಷದ ಸಮಸ್ಯೆಯಲ್ಲ.

    ಕಡಲ ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು. ಹಿಂದಿನವರು ಏನು ಮಾಡಿದ್ದಾರೆ ಅಂತ ಕೆದಕಲು ಹೋಗುವುದಿಲ್ಲ, ಆರೋಪ ಮಾಡಲ್ಲ,ನನ್ನ ಅವಧಿಯಲ್ಲಿ ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸುತ್ತೇನೆ.

    ಕೇಂದ್ರ ಹಾಗೂ ರಾಜ್ಯದ ಒಟ್ಟಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇನೆ. ಮುಂಜಾಗ್ರತಾ ಕ್ರಮ ಕೈಗೊಳ್ಳಿ ಅಂತ ಸೂಚನೆ ನೀಡಿದ್ದೇನೆ.

    ಸಾವನ್ನಪ್ಪಿದ ಕುಟುಂಬಕ್ಕೆ 24 ಗಂಟೆ ಒಳಗಾಗಿ ಪರಿಹಾರ ನೀಡಬೇಕು ಅಂತ ಸೂಚಿಸಿದ್ದೇನೆ. ಮನೆಗಳಿಗೆ ಹಾನಿಯಾದರೆ ಎಬಿಸಿ ಅಂತ ವಿಂಗಡಿಸಿ ಪರಿಹಾರ ನೀಡುತ್ತೇವೆ.

    ಸಾವನ್ನಪ್ಪಿದವರ ಕುಟುಂಬಕ್ಕೆ 5ಲಕ್ಷ ಪರಿಹಾರ 24 ಗಂಟೆ ಒಳಗಡೆ ನೀಡುತ್ತೇವೆ, ಜಿಲ್ಲೆಯಲ್ಲಿ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ ಹಣ ಹಾಕಿದ್ದೇವೆ.

    ಕಾಲು ಸಂಕದ ಸಮಸ್ಯೆ ಜಿಲ್ಲೆಯಲ್ಲಿ ಇದೆ.ಕಾಲು ಸಂಕದ ಬಗ್ಗೆ ಮೊದಲು ತಿಳಿದುಕೊಳ್ಳುತ್ತೇನೆ, ಶಾಶ್ವತವಾದ ಕಾಲು ಸಂಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುತ್ತೇವೆ.

    ಗೃಹ ಲಕ್ಷ್ಮಿ ಯೋಜನೆ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ ಎಂದರು.

    LATEST NEWS

    ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

    Published

    on

    ಮಂಗಳೂರು/ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ನಡೆಯುತ್ತಿರುವ ಎನ್ ಕೌಂಟರ್ ನಲ್ಲಿ ಇಂದು(ಸೆ.14) ನಸುಕಿನ ಜಾವ ಮೂವರು ಉಗ್ರರನ್ನು ಭದ್ರತಾ ಪಡೆ ಯೋಧರು ಹೊ*ಡೆದುರುಳಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಸಾಂದರ್ಭಿಕ ಚಿತ್ರ

    ನಿನ್ನೆ ಶುಕ್ರವಾರ ತಡರಾತ್ರಿ ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟಾನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಪ್ರದೇಶಗಳನ್ನು  ಭದ್ರತಾ ಪಡೆ ಯೋಧರು ಸುತ್ತುವರಿದು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.

    ಇದನ್ನೂ ಓದಿ : ಬಾಲಕಿಯೊಂದಿಗೆ ಅಸಭ್ಯ ವರ್ತನೆ; ಪ್ರಯಾಣಿಕರಿಂದಲೇ ರೈಲ್ವೆ ಸಿಬ್ಬಂದಿ ಹ*ತ್ಯೆ

    ನಿನ್ನೆ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂ*ಡು ಹಾರಿಸಿದ ನಂತರ ಕಾರ್ಯಾಚರಣೆಯು ಎನ್‌ಕೌಂಟರ್‌ಗೆ ತಿರುಗಿತು. ಅದರಲ್ಲಿ ಇಬ್ಬರು ಯೋಧರು ಹು*ತಾತ್ಮರಾಗಿ ಮತ್ತಿಬ್ಬರು ಗಾ*ಯಗೊಂಡಿದ್ದರು. ಅದಕ್ಕೆ ಪ್ರತಿದಾ*ಳಿ ನಡೆಸಿದ ಯೋಧರು ಇಂದು ಮೂವರು ಉ*ಗ್ರರನ್ನು ಕೊಂ*ದು ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಉಗ್ರರ ಗುರುತು ಪತ್ತೆ ಹಚ್ಚಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.

    Continue Reading

    LATEST NEWS

    ಸೆ.15: ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

    Published

    on

    ಮಂಗಳೂರು: ಅಂತಾರಾಷ್ಟ್ರೀಯ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಮನಪಾ ವ್ಯಾಪ್ತಿಯಲ್ಲಿ ನಡೆಯುವ ಮಾನವ ಸರಪಳಿಯ ಹಿನ್ನಲೆಯಲ್ಲಿ ಸಂಚಾರ ವ್ಯವಸ್ಥೆಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.

    ರಾ.ಹೆ.66ರಲ್ಲಿ ಉಡುಪಿ-ಹೆಜಮಾಡಿ ಗಡಿಯಿಂದ ನಂತೂರು ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ 73ರ ಅರ್ಕುಳ ಫರಂಗಿಪೇಟೆಯವರೆಗೆ ಬೆಳಗ್ಗೆ 7:30ರಿಂದ ಪೂ.11ರವರೆಗೆ ಮಾನವ ಸರಪಳಿ ನಿರ್ಮಿಸಲು ಉದ್ದೇಶಿಸಲಾಗಿದೆ.

    ಹಾಗಾಗಿ ಸುರಕ್ಷತೆ ದೃಷ್ಟಿಯಿಂದ ಹೆಜಮಾಡಿ-ಕಾರ್ನಾಡು-ಮುಕ್ಕ-ಸುರತ್ಕಲ್-ಪಣಂಬೂರು-ಕೊಟ್ಟಾರ ಚೌಕಿ-ಕುಂಟಿಕಾನ-ಕೆಪಿಟಿ ವೃತ್ತ-ಪದವು ಜಂಕ್ಷನ್ -ನಂತೂರು-ಬಿಕರ್ನಕಟ್ಟೆ-ಪಡೀಲ್-ಸಹ್ಯಾದ್ರಿ-ವಳಚ್ಚಿಲ್-ಅರ್ಕುಳವರೆಗಿನ ರಾ.ಹೆ. 66 ಮತ್ತು 73ರಲ್ಲಿ ಸಂಚರಿಸುವ ಎಲ್ಲ ವಾಹನಗಳ ಮಾಲಕರು, ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಲು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಸೂಚಿಸಿದ್ದಾರೆ.

    Continue Reading

    LATEST NEWS

    ಸಂಬಳ ಪಾವತಿಯಾಗದ್ದಕ್ಕೆ ದಿಢೀರ್‌ ಪ್ರತಿಭಟನೆಗೆ ಇಳಿದ 48 KSRTC ಚಾಲಕರು

    Published

    on

    ಮಡಿಕೇರಿ: ಸರಿಯಾಗಿ ವೇತನ ಪಾವತಿಯಾಗದ್ದಕ್ಕೆ ಕರ್ತವ್ಯ ಸ್ಥಗಿತಗೊಳಿಸಿ ಕೆಎಸ್‌ಆರ್‌ಟಿಸಿಯ 48 ಹೊರಗುತ್ತಿಗೆ ಚಾಲಕರು ದಿಢೀರ್‌ ಪ್ರತಿಭಟನೆ ನಡೆಸಿದ ಘಟನೆ ಮಡಿಕೇರಿಯಲ್ಲಿ ‌ಇಂದು(ಸೆ.14) ಬೆಳಿಗ್ಗೆ ನಡೆದಿದೆ.

    ಸರಿಯಾದ ವೇತನ ಸಿಗದಕ್ಕೆ ಇರುವುದರಿಂದ ಇಂದು ಬೆಳಿಗ್ಗೆಯಿಂದಲೇ ಬಸ್ಸುಗಳನ್ನು ರಸ್ತೆಗೆ ಇಳಿಸದೇ ಪ್ರತಿಭಟನೆ ನಡೆಸುತ್ತಿದ್ದು ಹಲವು ಮಾರ್ಗಗಳಲ್ಲಿ ಬಸ್‌ ಸಂಚಾರ ಬಂದ್‌ ಆಗಿದೆ.

    ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಬಸ್ಸು ಚಾಲಕರು ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಇದ್ದ ಏಜೆನ್ಸಿ ಪ್ರತಿ ತಿಂಗಳು 23 ಸಾವಿರ ರೂ. ಸಂಬಳ ನೀಡುತ್ತಿತ್ತು. ಆದರೆ ಈ ಏಜೆನ್ಸಿ ಬದಲಾಗಿದ್ದು ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ 13, 14 ಸಾವಿರ ರೂ. ಪಾವತಿಸುತ್ತಿದೆ. ಹಲವು ದಿನಗಳ ಬಳಿಕ ಒತ್ತಾಯದ ಬಳಿಕ ಶುಕ್ರವಾರ ಅರ್ಧ ಸಂಬಳ ಪಾವತಿಸಿದ್ದಾರೆ.

    ಸಿಎಲ್ ರಜೆ ಕೊಡದ ಏಜೆನ್ಸಿ ಯಾವುದೇ ಅಪಘಾತವಾದರೂ ಚಾಲಕರನ್ನೇ ಹೊಣೆ ಮಾಡುತ್ತಿದೆ. ಏಜೆನ್ಸಿ ಪೂರ್ಣ ಪ್ರಮಾಣದ ವೇತನ ಹಾಕುವವರೆಗೂ ಬಸ್ಸು ಸಂಚಾರ ಅರಂಭ ಮಾಡುವುದಿಲ್ಲ ಎಂದು 48 ಬಸ್ಸು ಚಾಲಕರು ಪಟ್ಟು ಹಿಡಿದ್ದಾರೆ.

    ದಿಢೀರ್‌ ಪ್ರತಿಭಟನೆಯಿಂದ ಕೊಡಗು ಜಿಲ್ಲೆಯ ಹಲವಾರು ಮಾರ್ಗಗಳಲ್ಲಿ ಸರ್ಕಾರಿ ಬಸ್ಸು ಸಂಚಾರ ಅಗದೇ ವ್ಯತ್ಯಯಗೊಂಡಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಬಸ್ ಇಲ್ಲದೇ ಜನರು ಪರದಾಟ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending