Tuesday, January 31, 2023

ಉಡುಪಿ ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ: ಶಾಸಕ ರಘುಪತಿ ಭಟ್‌

ಉಡುಪಿ: ಉಡುಪಿ ನಗರದಲ್ಲಿ ಸಾವರ್ಕರ್ ಪ್ರತಿಮೆ ಮಾಡುವುದು ಅಷ್ಟೊಂದು ಸಮಂಜಸವಲ್ಲ. ಮುಂದಿನ ದಿನಗಳಲ್ಲಿ ಸಾವರ್ಕರ್ ಪ್ರತಿಮೆಗೆ ಅವಮಾನವಾದರೆ ಕಷ್ಟವಾಗುತ್ತದೆ.

ಪುತ್ಥಳಿ ಬದಲಿಗೆ ಸಾವರ್ಕರ್ ವೃತ್ತ ನಿರ್ಮಿಸಲು ನಗರಸಭೆಗೆ ಪತ್ರ ಬರೆದಿದ್ದೇನೆ ಎಂದು ಉಡುಪಿ ಶಾಸಕ ಕೆ ರಘುಪತಿ ಭಟ್ ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಜನನಿಬಿಡ ಪ್ರದೇಶವಾದ ಹಳೆ ತಾಲೂಕು ಆಫೀಸ್ ಬಳಿಯ ಸರ್ಕಲ್‌ಗೆ ಸಾವರ್ಕರ್ ಹೆಸರು ಇಡುವಂತೆ ನಗರ ಸಭೆಯ ಅಧಿವೇಶನದಲ್ಲಿ ಠರಾವು ಇಡುತ್ತೇನೆ.

ಈ ಬಗ್ಗೆ ಈಗಾಗಲೇ ನಗರಸಭೆಗೆ ಪತ್ರ ಬರೆದಿದ್ದೇನೆ. ಮೂರ್ತಿ ನಿರ್ಮಿಸುವ ಬಗ್ಗೆ ಚರ್ಚೆ ಮಾಡಬೇಕು. ಖಂಡಿತವಾಗಿ ಉಡುಪಿಯಲ್ಲಿ ವೀರ ಸಾವರ್ಕರ್ ಸರ್ಕಲ್ ನಿರ್ಮಾಣವಾಗುತ್ತದೆ. ವೀರ ಸಾವರ್ಕರ್ ಜೊತೆಗೆ ಅಂಬೇಡ್ಕರ್ ಸರ್ಕಲ್ ಕೂಡ ಮಾಡುತ್ತೇವೆ ಎಂದರು.

ಹಿಜಾಬ್ ಗದ್ದಲದಿಂದ ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ವಂಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕರು, ಹಿಜಾಬ್ ಹೋರಾಟವನ್ನು ಪ್ರಾರಂಭ ಮಾಡಿರುವುದು ಸಿಎಫ್‌ಐಯೇ ಹೊರತು ನಾವಲ್ಲ.

ನಮ್ಮ ಕಾಲೇಜಿನಲ್ಲಿ ಹಿಂದಿನಿಂದಲೂ ಯೂನಿಫಾರ್ಮ್ ಕೋಡ್ ಪಾಲನೆ ಆಗುತ್ತಿತ್ತು. ಕಳೆದ 20 ವರ್ಷದಿಂದ ಯೂನಿಫಾರ್ಮ್ ಕೋಡ್ ಇದ್ದ ಬಗ್ಗೆ ದಾಖಲೆ ಕೋರ್ಟಿಗೆ ಸಲ್ಲಿಸಿದ್ದೆವು. ಅದೇ ಕಾರಣಕ್ಕೆ ನಮಗೆ ಹೈಕೋರ್ಟಿನಲ್ಲಿ ಜಯ ಸಿಕ್ಕಿದೆ ಎಂದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು ತಲಪಾಡಿ ಟೋಲ್ ಸಿಬ್ಬಂದಿ ಗೂಂಡಾಗಿರಿ :ಸಾಮಾಜಿಕ ಜಾಲತಾಣದಲ್ಲಿ ವೈರಲ್..!

ಉಳ್ಳಾಲ: ಟೋಲ್ ಸಿಬ್ಬಂದಿಗಳ ಗೂಂಡಾ ವರ್ತನೆಯಿಂದ ಕಾರು ಚಾಲಕನ ಮೇಲೆ ಹಲ್ಲೆ ನಡೆದ ಘಟನೆ ತಲಪಾಡಿ ಟೋಲ್ ಪ್ಲಾಜಾದಲ್ಲಿ ಭಾನುವಾರ ನಡೆದಿರುವುದು, ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ವೀಡಿಯೋ ವೈರಲ್ ಆಗಿದೆ.ಕೇರಳ ಗಡಿಭಾಗದ...

ಮುಂಬೈ- ಅಹ್ಮದಾಬಾದ್ ಹೆದ್ದಾರಿಯಲ್ಲಿ ಬಸ್‌ ಗೆ ಕಾರು ಡಿಕ್ಕಿ : ನಾಲ್ವರು ಮೃತ್ಯು..!

ಮುಂಬೈ:ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ಎಂಬಲ್ಲಿ ಮುಂಬೈ-ಅಹ್ಮದಾಬಾದ್ ರಾಷ್ಟ್ರೀಯ ಹೆದ್ದಾರಿಯ ಚರೋಟಿಯಲ್ಲಿ  ಮುಂಜಾನೆ ಐಷಾರಾಮಿ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್...

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...