ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ತಾಯಿ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಿನ್ನಿ ಮುಲ್ಕಿ ಎಂಬಲ್ಲಿ ನಡೆದಿದೆ.
ಉಡುಪಿ: ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ತಾಯಿ ಮಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಿನ್ನಿ ಮುಲ್ಕಿ ಎಂಬಲ್ಲಿ ನಡೆದಿದೆ.
ಇಲ್ಲಿನ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತರನ್ನು ತಾಯಿ ಎಡ್ಲಿನ್ ಡೆಲಿಶಾ (83), ಮಗ ಸಬೆಸ್ಟಿನ್ ಅಮಿತ್ (46) ಎಂದು ಗುರುತಿಸಲಾಗಿದೆ.
ಇವರಿಬ್ಬರೂ ಬಾಡಿಗೆ ಮನೆಯಲ್ಲಿ ವಾಸವಿದ್ದರು ಎಂದು ತಿಳಿದು ಬಂದಿದೆ.
ತಾಯಿ ಮಗ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ನಿಖರವಾದ ಕಾರಣ ಏನೆಂದು ತಿಳಿದು ಬಂದಿಲ್ಲ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.