Connect with us

DAKSHINA KANNADA

ಉಡುಪಿ :ನಾಲ್ವರ ಹತ್ಯೆ ಪ್ರಕರಣ-ಹಂತಕನಿಗಾಗಿ ಪೊಲೀಸರ ಶೋಧ

Published

on

ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಶೀಘ್ರ ಬಂಧಿಸುವಂತೆ ಮೃತರ ಕುಟುಂಬಸ್ಥರು ಆಗ್ರಹಿಸಿದ್ದಾರೆ.

 

ಉಡುಪಿ : ಉಡುಪಿಯ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಯಿಂದ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಹಾಜಿರಾ ಮಣಿಪಾಲ ಕೆ.ಎಂಸಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಬಿಡುಗಡೆಗೊಂಡಿದ್ದಾರೆ. ಈಕೆ ದೇಹದ ಎರಡು ಕಡೆ ಚಾಕು ಇರಿತಕ್ಕೊಳಗಾಗಿದ್ದು, ವೈದ್ಯರು ಸಣ್ಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಹಾಜಿರಾಗೆ ಸಂಪೂರ್ಣ ವಿಶ್ರಾಂತಿ ಪಡೆಯಲು ವೈದ್ಯರು ಸೂಚನೆ ನೀಡಿದ್ದಾರೆ. ಇನ್ನು ಕೃತ್ಯ ನಡೆದಿರುವ ನೇಜಾರಿನ ಮನೆಗೆ ಎಂಎಲ್ ಸಿ ಮಂಜುನಾಥ ಭಂಡಾರಿ ಭೇಟಿ ನೀಡಿ, ತಂದೆ ಮಗನಿಗೆ ಸಾಂತ್ವಾನದ ನುಡಿಗಳನ್ನಾಡಿದರು.  ಅಲ್ಲದೆ ಪೊಲೀಸರು ಶೀಘ್ರವೇ ಆರೋಪಿಯನ್ನು ಬಂಧಿಸುವ ಭರವಸೆ ನೀಡಿರುವುದಾಗಿ ಹೇಳಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ನೂರ್ ಮಹಮ್ಮದ್‌ , ತನಿಖೆ ಶೀಘ್ರವಾಗಿ ನಡೆದು ಆರೋಪಿಯನ್ನು ಬಂಧಿಸುವಂತೆ ತಾನು ಆಗ್ರಹಿಸುವುದಾಗಿ ನುಡಿದರು. ನಮ್ಮ ಮನೆಮಂದಿಯ ನಾಲ್ಕು ಫೋನ್ ಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ನನ್ನ ಮತ್ತು ಮಗನ ಫೋನನ್ನು ಪೊಲೀಸರು ತಪಾಸಣೆ ಮಾಡಿ ವಾಪಸ್ ಕೊಟ್ಟಿದ್ದಾರೆ. ಫೋನ್ ಗಳಲ್ಲಿ ಕೆಲವು ಮಾಹಿತಿಗಳು ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನನಗೆ ಎಲ್ಲರೂ ಬಂದು ಸಾಂತ್ವನ ಧೈರ್ಯವನ್ನು ತುಂಬಿಸುತ್ತಿದ್ದಾರೆ. ಪೊಲೀಸರು ಕರೆದರೆ ನಾನು 24 ಗಂಟೆ ಮಾಹಿತಿ ಕೊಡಲು ಸಿದ್ದ ಎಂದು ನೂರು ಮೊಹಮ್ಮದ್ ಹೇಳಿಕೆ ನೀಡಿದ್ದಾರೆ. ಕೌಟುಂಬಿಕ ಕಲಹದಿಂದ ಹತ್ಯೆ ಎಂದು ಸುದ್ದಿಗಳು ಪ್ರಸಾರವಾಗುತ್ತಿದೆ. ಕೌಟುಂಬಿಕ ಕಲಹ ಎಂಬುದರಲ್ಲಿ ಸತ್ಯಾಂಶ ಇಲ್ಲ.

ನಮಗೆ ಮದುವೆಯಾಗಿ 30 ವರ್ಷ ಆಯ್ತು 15 ವರ್ಷ ನಾವು ವಿದೇಶದಲ್ಲಿ ಇದ್ದೆವು. ಮುಂದಿನ 15 ದಿನದಲ್ಲಿ ಕುಟುಂಬ ವಿದೇಶಕ್ಕೆ ಬರಬೇಕಿತ್ತು. ಮುಂದಿನ ವರ್ಷ ಮಗನಿಗೆ ಮದುವೆ ಮಾಡುವ ಮಾತುಕತೆ ನಡೆದಿತ್ತು. ಕುಟುಂಬದೊಳಗೆ ಯಾವುದೇ ಮನಸ್ತಾಪಗಳು ಇರಲಿಲ್ಲ ಎಂದು ನೂರ್ ಮೊಹಮ್ಮದ್‌ ಸ್ಪಷ್ಟನೆ ನೀಡಿದರು. ದಯವಿಟ್ಟು ಸುಳ್ಳು ಸುದ್ದಿ, ಊಹಾಪೋಹಗಳನ್ನು ಹಬ್ಬಿಸಬೇಡಿ ಎಂದು ಕುಟುಂಬದ ಯಜಮಾನ ನೂರ್ ಮೊಹಮ್ಮದ್ ಮನವಿ ಮಾಡಿದರು. ತಮ್ಮ ಮಕ್ಕಳು ಮಾಡುತ್ತಿದ್ದ ಉದ್ಯೋಗದ ಬಗ್ಗೆ ಅವರು ವಿವರಣೆ ನೀಡಿದರು. ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವುದಾಗಿ ಗೃಹ ಸಚಿವರು ತಮಗೆ ಭರವಸೆ ನೀಡಿದ್ದಾರೆ ಎಂದರು.

DAKSHINA KANNADA

ಪುತ್ತೂರಿನಲ್ಲಿ ಕಳವುಗೈದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ..!

Published

on

ಪುತ್ತೂರು: ಅಂತರ್‌ ಜಿಲ್ಲಾ ಕಳವು ಪ್ರಕರಣದ ಕುಖ್ಯಾತ ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್ ಚಿಕ್ಕಮಂಗಳೂರು ತಾಲೂಕಿನ ಉಪ್ಪಳ್ಳಿ ಮನೆ ನಿವಾಸಿಯಾಗಿದ್ದು, ಆತನ ಮೇಲೆ ಮಂಗಳೂರು, ಬಂಟ್ವಾಳ, ಪುತ್ತೂರು, ಮೂಡುಬಿದಿರೆ, ಕಾರ್ಕಳ, ಉಡುಪಿ, ಸುರತ್ಕಲ್, ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ 80 ಕ್ಕೂ ಹೆಚ್ಚು ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ 2023 ರಲ್ಲಿಯೇ ಎರಡು ಪ್ರಕರಣಗಳು ದಾಖಲಾಗಿವೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಡಿಸೆಂಬರ್‌ 19 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading

BANTWAL

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

Published

on

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017 ರಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಾಲಮ ಹೆಹರು ತಾಲೂಕಿನ ಚಿನ್ನಪಳ್ಳಿ ಪೆದ್ದ ಗ್ರಾಮದ ನಿವಾಸಿ ಬಿ. ಮೌಲಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಬಿ. ಮೌಲಾ ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ಇದ್ದಾನೆ ಎಂಬುದಾಗಿ ಲಭಿಸಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದರು. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿ, ನ್ಯಾಯಾಲಯವು ಆರೋಪಿಗೆ ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ ಸ್ಟೆಬಲ್‌ ಗಣೇಶ್ ಪ್ರಸಾದ್ ಮತ್ತು ಕಾನ್‌ ಸ್ಟೆಬಲ್‌ ವಿಜಯ ಕುಮಾರ ಅವರು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

 

Continue Reading

DAKSHINA KANNADA

ಮಂಗಳೂರಿನಲ್ಲಿ ಮೂರು ದಿನ ನೀರು ಪೂರೈಕೆ ವ್ಯತ್ಯಯ

Published

on

ಮಂಗಳೂರು: ಮಂಗಳೂರು ಮಹಾ ನಗರಪಾಲಿಕೆಯು ನೀರು ಸರಬರಾಜು ವ್ಯವಸ್ಥೆಯ ಕೊಳವೆಯನ್ನು ಬಲಪಡಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿ. 6 ರ ಬುಧವಾರ ಬೆಳಗ್ಗೆ 6 ಗಂಟೆಯಿಂದ ಡಿ. 8 ರ ಶುಕ್ರವಾರ ಬೆಳಗ್ಗೆ 6 ಗಂಟೆಯ ವರೆಗೆ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ವ್ಯತ್ಯಯಗೊಳ್ಳಲಿದೆ ಎಂದು ಪಾಲಿಕೆಯ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ ತಿಳಿಸಿದ್ದಾರೆ.

ತುಂಬೆ- ಬೆಂದೂರ್‌ವೆಲ್–ಪಣಂಬೂರು ಪ್ರದೇಶಗಳಿಗೆ ನೀರು ಪೂರೈಸುವ 1 ಸಾವಿರ ಮಿಲಿ ಮೀಟರ್ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವುದು, ತುಂಬೆ ರಾಮಲ್‌ಕಟ್ಟೆ ಬಳಿ ಕೆಯುಐಡಿಎಫ್‌ಸಿ ವತಿಯಿಂದ ಬಲ್ಕ್‌ ಫ್ಲೋ ಮೀಟರ್‌ ಅಳವಡಿಕೆ ಹಾಗೂ ಪಾಲಿಕೆ ವತಿಯಿಂದ 900 ಮಿ.ಮೀ ವ್ಯಾಸದ ಕೊಳವೆಯನ್ನು ಕೆಐಒಸಿಎಲ್‌ ಬಳಿ ಬದಲಾಯಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಮಂಗಳೂರಿನ ಬೆಂದೂರ್‌ವೆಲ್‌ಗಿಂತ ತಗ್ಗಿನಲ್ಲಿರುವ ಪ್ರದೇಶಗಳಾದ ಪಿ.ವಿ.ಎಸ್, ಲೇಡಿಹಿಲ್, ಬಂದರು ಹಾಗೂ ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್‌ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯು ಭಾಗಶಃ ಸ್ಥಗಿತಗೊಳ್ಳಲಿದೆ. ಕಾನ, ಬಾಳ, ಕುಳಾಯಿ, ಮುಕ್ಕ, ಪಣಂಬೂರು ಪ್ರದೇಶಗಳಿಗೆ ನೀರು ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

Continue Reading

LATEST NEWS

Trending