LATEST NEWS
15 ನಿಮಿಷದಲ್ಲಿ ನಾಲ್ವರ ಕೊಲೆ: ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ- ಸಾರ್ವಜನಿಕರ ಆಕ್ರೋಶ
ಉಡುಪಿ: ಉಡುಪಿ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರು ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸ್ ಅಧಿಕಾರಿಗಳು ಆರೋಪಿಯ ಸ್ಥಳ ಮಹಜರು ಮಾಡುತ್ತಿದ್ದಾರೆ.
ಇಂದು ಉಡುಪಿಯ ನೇಜಾರು ತೃಪ್ತಿ ನಗರದಲ್ಲಿ ಮಹಜರು ನಡೆಸುವ ಜಾಗಕ್ಕೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಯನ್ನ ಕರೆತಂದಿದ್ದರು. ಈ ಸಂದರ್ಭ ಈತನನ್ನು ನೋಡಲೆಂದು ಸ್ಥಳದಲ್ಲಿ ನೂರಾರು ಸಾರ್ವಜನಿಕರ ಜಮಾವಣೆಗೊಂಡಿದ್ದರು. ಆರೋಪಿಯನ್ನು ನಮ್ಮ ಕೈಗೆ ಒಪ್ಪಿಸಿ ನಾವು ಶಿಕ್ಷೆ ಕೊಡುತ್ತೇವೆ ಎಂದು ಉಡುಪಿಯ ತೃಪ್ತಿ ನಗರದಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಮಹಜರು ಸ್ಥಳದಲ್ಲಿ ಸಾರ್ವಜನಿಕರಿಂದ ಭಾರಿ ಆಕ್ರೋಶ ಕಂಡು ಬಂತು. ಆರೋಪಿ ಇದ್ದ ಪೊಲೀಸ್ ವಾಹನದ ಮೇಲೆ ನುಗ್ಗಿದ ಜನತೆಯನ್ನು ಕಂಡ ಪೊಲೀಸರು ಕೂಡಲೇ ಎಚ್ಚೆತ್ತು ಲಾಠಿ ಹಿಡಿದು ಸಾರ್ವಜನಿಕರನ್ನು ಚದುರಿಸಿದರು.
ಈ ವೇಳೆ ಸ್ಥಳದಲ್ಲಿ ಕೆಲ ಸಾರ್ವಜನಿಕರಿಗೆ ಲಾಟಿ ಏಟು ಕೂಡಾ ಬಿದ್ದಿದೆ. ಆತ ಇಡೀ ಕುಟುಂಬದ ನಾಲ್ವರನ್ನು ಕೊಲೆ ಮಾಡಲು 15 ನಿಮಿಷ ತೆಗೆದುಕೊಂಡಿದ್ದಾನೆ, ಆತನನ್ನು ನಮಗೆ ಕೇವಲ 30 ಸೆಕೆಂಡಿಗೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ತೃಪ್ತಿ ನಗರದಲ್ಲಿ ಪೊಲೀಸರ ವಿರುದ್ಧ ಸಾರ್ವಜನಿಕರು ಧಿಕ್ಕಾರ ಕೂಗಿದರು. ಈ ವೇಳೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣವೂ ಉಂಟಾಯಿತು. ಜನಾಕ್ರೋಶದ ನಡುವೆ ಮಹಜರು ಮುಗಿಸಿ ಆರೋಪಿಯನ್ನು ಕರೆದುಕೊಂಡು ಪೊಲೀಸರು ಹೊರಟು ಹೋದರು.
DAKSHINA KANNADA
ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ
ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್ ಹಾನಿಗೊಂಡಿದೆ.
ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.
LATEST NEWS
60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!
ಹೆಚ್ಚಾಗಿ ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.
ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.
ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಅನೇಕರು ಆಕೆ ಮಿಸ್ ಯುನಿವರ್ಸ್ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್ಗಳನ್ನು ಹಾಕುತ್ತಿದ್ದಾರೆ.
LATEST NEWS
ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!
ಪುತ್ತೂರು : ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.
ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.
ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!
- FILM6 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM6 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- chikkamagaluru6 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!
- FILM7 days ago
ಶೈನ್ ಶೆಟ್ಟಿ, ಅಂಕಿತಾ ಜಸ್ಟ್ ಮ್ಯಾರೀಡ್..!! ಅಭಿಮಾನಿಗಳಿಗೆ ಖುಷಿ