Connect with us

    LATEST NEWS

    ಉಡುಪಿ ನೇತ್ರಜ್ಯೋತಿ ಕಾಲೇಜ್ ವಿಡಿಯೋ ಪ್ರಕರಣ- ವಿಹಿಪ, ಬಜರಂಗದಳ ಬೃಹತ್ ಪ್ರತಿಭಟನೆ..!

    Published

    on

    ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ಅನ್ಯಧರ್ಮೀಯ ಮೂವರು ವಿದ್ಯಾರ್ಥಿನಿಯರು ಮಾಡಿರುವ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇಂದು ಕೃಷ್ಣನಗರಿಯಲ್ಲಿ ಬೃಹತ್‌ ಜಾಥಾ ಪ್ರತಿಭಟನೆ ನಡೆಯಿತು.

    ಉಡುಪಿ: ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ಅನ್ಯಧರ್ಮೀಯ ಮೂವರು ವಿದ್ಯಾರ್ಥಿನಿಯರು ಮಾಡಿರುವ ಪ್ರಕರಣದ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇಂದು ಕೃಷ್ಣನಗರಿಯಲ್ಲಿ ಬೃಹತ್‌ ಜಾಥಾ ಪ್ರತಿಭಟನೆ ನಡೆಯಿತು.

    ಭಾರೀ ಸಂಖ್ಯೆಯಲ್ಲಿ ಸೇರಿದ್ದ ಮಹಿಳೆಯರು ರಾಜ್ಯ ಸರಕಾರ ತನಿಖೆ ನಡೆಸುವಲ್ಲಿ ವಿಫಲವಾಗಿದೆ ಎಂದು ಸರಕಾರದ ವಿರುದ್ಧ ಧಿಕ್ಕಾರವನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

    ಭಾರತ್ ಮಾತಾಕಿ ಜೈ ಘೋಷಣೆ ಮುಗಿಲು ಮುಟ್ಟಿತ್ತು. ಎಲ್ಲೆಡೆ ಜೈಕಾರ ಘೋಷಣೆಗಳೇ ಕೇಳಿ ಬರುತ್ತಿತ್ತು.

    ವಿಶ್ವ ಹಿಂದು ಪರಿಷತ್‌ ಮತ್ತು ಬಜರಂಗದಳ ಈ ಪ್ರತಿಭಟನೆಯನ್ನು ಆಯೋಜಿಸಿತ್ತು.

    ಜೋಡುಕಟ್ಟೆಯಿಂದ ಕೃಷ್ಣ ಮಠದ ಪಾರ್ಕಿಂಗ್ ಎರಿಯಾದವರೆಗೆ ಬೃಹತ್ ರ್‍ಯಾಲಿ  ನಡೆಯಿತು.

    ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತ್‌ ಏರ್ಪಡಿಸಿದ್ದರು.

    ವಿಶ್ವಹಿಂದು ಪರಿಷತ್‌ ಮುಖಂಡರಾದ ಶರಣ್ ಪಂಪ್‌ವೆಲ್ ಮಾತನಾಡಿ, ಸನಾತನ ಹಿಂದೂ ಸಂಸ್ಕೃತಿ ನಾಶ ಮಾಡಲು ರಾಕ್ಷಸಿಯರು ಬಂದಿದ್ದರು.

    ಜಿಹಾದಿ ರಾಕ್ಷಸಿಯರ ಮೂಲಕ ಹಿಂದೂ ಹೆಣ್ಮಕ್ಕಳ ಮಾನ ತೆಗೆಯಲು ಬಂದಿದ್ದಾರೆ.

    ಜಿಹಾದಿ ರಾಕ್ಷಸಿಯರಿಗೆ ಹಿಂದು ರಕ್ಷಕರಾಗಿ ನಾವು ಉತ್ತರ ಕೊಡಲು ಸದಾ ಸಿದ್ಧ ಎಂದರು.

    ಇಂತಹ ದಾಳಿ ಇಂದಿಗೇ ಕೊನೆಯಾಗಬೇಕು. ಹಿಂದೂ ತಾಯಂದಿರು ಎಚ್ಚರ ಆಗಬೇಕು.

    ಸೌಟು ಪೊರಕೆ ಹಿಡಿಯುವ ಕೈಯ್ಯಲ್ಲಿ ಶಸ್ತ್ರಾಸ್ತ್ರ ಹಿಡಿಯಿರಿ. ಅನ್ಯಾಯವಾದಾಗ ತಲವಾರು, ಕತ್ತಿ ಹಿಡಿಯಲು ರೆಡಿಯಾಗಿ.

    ನಮ್ಮ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂಬ ಎಚ್ಚರಿಕೆ ಕೊಡಬೇಕಾಗಿದೆ ಎಂದರು.

    ಹಿಂದು ಯುವತಿಯರು, ಶ್ರದ್ಧಾಕೇಂದ್ರಗಳನ್ನು ಮುಸಲ್ಮಾನರು ಟಾರ್ಗೆಟ್‌ ಮಾಡಿದ್ದಾರೆ ಎಂದರು.

    ಪ್ರತಿಭಟನೆಯಲ್ಲಿ ಸುನೀಲ್ ಕೆ ಆರ್, ಸಾಮಾಜಿಕ ಕಾರ್ಯಕರ್ತೆ ರಶ್ಮಿ ಸಾಮಂತ್, ಶಕುಂತಲಾ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಸೇರಿದಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

    ಈ ವೇಳೆ ಪ್ರಕರಣದ ನೈಜ ಸತ್ಯಾಂಶವನ್ನು ಹೊರತೆಗೆಯಲು ಸಂಪೂರ್ಣ ವಿಫಲರಾದ ಪೊಲೀಸ್ ಇಲಾಖೆ, ಸರಕಾರದ ವಿರುದ್ಧ ನಾಯಕರು ವಾಗ್ದಾಳಿ ನಡೆಸಿದರು.

    DAKSHINA KANNADA

    ಕುಕ್ಕೆ ಸುಬ್ರಹ್ಮಣ್ಯಕ್ಕೆ ರೈಲಿನ ಬೇಡಿಕೆ; ನಿಂತ ರೈಲಿನ ಪುನರಾರಂಭಕ್ಕೆ ಸಂಸತ್ ಅಧಿವೇಶನದಲ್ಲಿ ಸಂಸದ ಚೌಟ ಒತ್ತಾಯ

    Published

    on

    ನವ ದೆಹಲಿ: ಸಂಸತ್‌ನ ಮುಂಗಾರು ಅಧಿವೇಶನ ಜು.22 ರಿಂದ ಆರಂಭವಾಗಿದ್ದು, ಇದು ಲೋಕಸಭೆಯ ಎರಡನೇ ಅಧಿವೇಶನವಾಗಿದೆ. ಮೊದಲ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾರ್ಪಣೆ ನಡೆದಿದ್ದರೆ, ಈ ಅಧಿವೇಶನದಲ್ಲಿ ಪ್ರಶ್ನೋತ್ತರದ ಅವಧಿ ನೀಡಲಾಗಿದೆ. ಬಜೆಟ್ ಮೇಲಿನ ಚರ್ಚೆಯೊಂದಿಗೆ ತಮ್ಮ ಕ್ಷೇತ್ರಗಳ ಬೇಡಿಕೆಯನ್ನು ಸಂಸದರು ಸಂಸತ್‌ನಲ್ಲಿ ಮಂಡಿಸಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಸಂಸದ ಬ್ರಿಜೇಶ್ ಚೌಟ ಅವರು ಸಂಸತ್‌ನಲ್ಲಿ ತಮ್ಮ ಮೊದಲ ಪ್ರಶ್ನೆ ಕೇಳಿದ್ದಾರೆ.

    ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ವಿದ್ಯುತ್ ಅವ*ಘಡ..!

    ಮಂಗಳೂರು- ಸುಬ್ರಹ್ಮಣ್ಯ ನಡುವಿನ ರೈಲ್ವೆ ಹಳಿಯು ಮೀಟರ್ ಗೇಜ್‌ನಿಂದ ಬ್ರಾಡ್‌ಗೇಜ್ ಪರಿವರ್ತನೆಯಾದ ಬಳಿಕ ನಿಂತು ಹೋದ ರೈಲು ಪುನರಾರಂಭಿಸಲು ಮನವಿ ಮಾಡಿದ್ದಾರೆ. ಮೀಟರ್ ಗೇಜ್ ಇದ್ದ ಸಮಯದಲ್ಲಿ ಮಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಪ್ಯಾಸೆಂಜರ್ ರೈಲು ಸೌಲಭ್ಯ ಇದ್ದು, ಸಾಕಷ್ಟು ವಿದ್ಯಾರ್ಥಿಗಳು, ನೌಕರರು, ಈ ರೈಲಿನ ಸದುಪಯೋಗ ಪಡೆದಿದ್ದರು. ಆದ್ರೆ ಬ್ರಾಡ್ ಗೇಜ್ ಆದ ಬಳಿಕ ಈ ರೈಲು ಮಂಗಳೂರು- ಪುತ್ತೂರು ನಡುವೆ ಮಾತ್ರ ಸಂಚರಿಸುತ್ತಿದ್ದು,  ಕುಕ್ಕೆ ಸುಬ್ರಹ್ಮಣ್ಯಕ್ಕೆ ರೈಲು ಸಂಚಾರ ಸ್ಥಗಿತಗೊಂಡಿದೆ. ಹೀಗಾಗಿ ಈ ರೈಲನ್ನು ಮತ್ತೆ ಆರಂಭಿಸಿ ಜನರಿಗೆ ರೈಲು ಸೇವೆ ಸಿಗುವಂತೆ ಮಾಡ ಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್‌ ಅವರು ಈ ಬಗ್ಗೆ ಸಂಸದರ ಜತೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.

    Continue Reading

    LATEST NEWS

    ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ವಿದ್ಯುತ್ ಅವ*ಘಡ..!

    Published

    on

    ಮಂಗಳೂರು: ನಗರದ ಉರ್ವದಲ್ಲಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ವಿದ್ಯುತ್ ಅವ*ಘಡ ಸಂಭವಿಸಿದೆ.

    ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದವರು ಅಗ್ನಿ ನಂದಿಸಲು ತೊಡಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

    Continue Reading

    DAKSHINA KANNADA

    ಅಗಲಿದ ಇಬ್ಬರು ಪತ್ರಕರ್ತರಿಗೆ ದ.ಕ. ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

    Published

    on

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದ ಮಂಗಳೂರಿನ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಫ್ರೆಡ್ ಡಿಸೋಜ ಮತ್ತು ಕ್ಯಾಮೆರಾಮ್ಯಾನ್ ಚಿಕ್ಕನರಗುಂದ ನಿವಾಸಿ ವೀರೇಶ್ ಕಡ್ಲಿಕೊಪ್ಪ ಅವರು ಇತ್ತೀಚೆಗೆ ನಿ*ಧನರಾಗಿದ್ದು, ಈ ಬಗ್ಗೆ ಶ್ರದ್ಧಾಂಜಲಿ ಸಭೆ ಇಂದು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಯಿತು.

    ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಮತ್ತಿತರರು ನುಡಿ ನಮನ ಸಲ್ಲಿಸಿದರು. ಪತ್ರಿಕಾ ಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್‌. ಹಾಗೂ ಸಂಘದ ಇತರ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಒಳಗೊಂಡಂತೆ ಉಪಸ್ಥಿತರಿದ್ದ ಎಲ್ಲರೂ ಅಗಲಿದ ಇಬ್ಬರು ಪತ್ರಕರ್ತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

     

    ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ ಅವರು ಮಾತನಾಡಿ, ಇಬ್ಬರು ಪತ್ರಕರ್ತರ ಅಗ*ಲಿಕೆಯಿಂದ ಜಿಲ್ಲೆಯ ಮಾಧ್ಯಮ ಲೋಕಕ್ಕೆ ಅಪಾರ ನಷ್ಟವಾಗಿದೆ. ಕ್ಯಾಮೆರಾಮ್ಯಾನ್ ವೀರೇಶ್ ತನ್ನ ಊರು ಚಿಕ್ಕ ನರಗುಂದಕ್ಕೆ ಹೋಗಿದ್ದ ವೇಳೆ ಅಲ್ಲಿ ನಿಧ*ನರಾಗಿದ್ದಾರೆ. ಅವರ ಸಾವಿನ ಬಗ್ಗೆ ಅನೇಕ ಸಂಶಯಗಳಿವೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಲಾಗುವುದು. ಸ್ಪೀಕರ್ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಈ ಕುರಿತಂತೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

    ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಅವರು ಫೋಟೊ ಜರ್ನಲಿಸ್ಟ್ ಅಲ್ಫ್ರೆಡ್ ಡಿ’ಸೋಜಾ ಆಕಸ್ಮಿಕವಾಗಿ ಹೃದಯಾಘಾ*ತದಿಂದ ನಿಧ*ನರಾಗಿರುವುದನ್ನು ಉಲ್ಲೇಖಿಸಿ, ಎಲ್ಲಾ ಪತ್ರಕರ್ತರು ಆಗಿಂದಾಗ್ಗೆ ಆರೋಗ್ಯ ತಪಾಸಣೆಯನ್ನು ಮಾಡುತ್ತಿರಬೇಕು. ಕೆಲಸದ ಒತ್ತಡದ ನಡುವೆಯೂ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕೆಂದು ಸಲಹೆ ಮಾಡಿದರು.

    Continue Reading

    LATEST NEWS

    Trending