Tuesday, March 28, 2023

ಪೇಜಾವರ ಶ್ರೀ ಗಳಿಗೆ ವೈ ಶ್ರೇಣಿ ಭದ್ರತೆ..! ಕಾರಣ ಗೊತ್ತಾ..?

ಪೇಜಾವರ ಶ್ರೀ ಗಳಿಗೆ ವೈ ಶ್ರೇಣಿ ಭದ್ರತೆ..! ಕಾರಣ ಗೊತ್ತಾ..?

ಉಡುಪಿ : ಅಯೋಧ್ಯೆ ಶ್ರೀ ರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಗೆ ರಾಜ್ಯ ಸರಕಾರ ವೈ ಶ್ರೇಣಿ ಭದ್ರತೆ ಮಂಜೂರು ಮಾಡಿದೆ.

ತಕ್ಷಣದಿಂದಲೇ ಜಾರಿಗೆ ಬರುವಂತೆ ವೈ ಶ್ರೇಣಿ ಭದ್ರತೆಯನ್ನು ಒದಗಿಸಲಾಗಿದ್ದು, ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತರಾದ ಶ್ರೀಗಳು, ದೇಶಾದ್ಯಂತ ಸಂಚಾರ ಕೈಗೊಂಡಿದ್ದಾರೆ.

ಈ ಹಿನ್ನಲೆಯಲ್ಲಿ ಶ್ರೀಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಈ ಮನವಿಗೆ ಸ್ಪಂದನೆ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು, ಶ್ರೀಗಳಿಗೆ ವೈ ಶ್ರೇಣಿ ಭದ್ರತೆಯನ್ನು ಒದಗಿಸಿದೆ.

ಶ್ರೀಗಳಿಗೆ ಭದ್ರತೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಕೆ.ರಘುಪತಿ ಭಟ್ ಹಾಗೂ ರಾಜ್ಯ ಪೋಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠವು ಕೃತಜ್ಞತೆ ಸಲ್ಲಿಸಿದೆ.

LEAVE A REPLY

Please enter your comment!
Please enter your name here

Hot Topics

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ.ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ...

ಸೌದಿ ರಸ್ತೆ ಅಪಘಾತದಲ್ಲಿ ಉಸಿರು ಚೆಲ್ಲಿದ ಮಂಗಳೂರು ಮಲ್ಲೂರಿನ ಸುಲೇಮಾನ್..!

ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಮೃತಪಟ್ಟಿದ್ದಾರೆ.ಮಂಗಳೂರು : ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು...

ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ನಾಶ..!

ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ...