Connect with us

    DAKSHINA KANNADA

     ಉಡುಪಿ:  ಜೈಲು ಸೂಪರಿಡೆಂಟ್‍ನ  ವಿರುದ್ಧ  ಸಿಡಿದೆದ್ದ ಕೈದಿಗಳ  ಆಕ್ರೋಶ -ಪ್ರತಿಭಟನೆ 

    Published

    on

    ಉಡುಪಿ:  ಸೈಲೆಂಟಾಗಿದ್ದ ಕೃಷ್ಣ ನಗರಿ ಉಡುಪಿ ಸದ್ಯ ಹೊಸತೊಂದು ಕಾರಣಕ್ಕೆ ಸುದ್ದಿಯಾಗುತ್ತಿದೆ.  ಹೌದು ಉಡುಪಿಯ ಹಿರಿಯಡ್ಕದ ಕಾಜರಗುತ್ತು ಎಂಬ ಎಂಬ ಜೈಲು ಇದೀಗ ಭಾರೀ ಸುದ್ದಿಯಲ್ಲಿರುವಂತಹ ಜೈಲು.

    ಕಾಜರಗುತ್ತು ಜೈಲಿನಲ್ಲಿ ಸರಕಾರದಿಂದ ಕೈದಿಗಳಿಗೆ ಬರುವ ಸವಲತ್ತುಗಳನ್ನು  ಕೈದಿಗಳಿಗೆ ನೀಡುತ್ತಿಲ್ಲ ಎಂದು ಆರೋಪ ವ್ಯಕ್ತವಾಗಿರುವುದರಿಂದ ಖೈದಿಗಳು ಶುಕ್ರವಾರ ಉಪವಾಸ ಸತ್ಯಾಗ್ರಹ ನಡೆಸಿದರು.ಕಾಜರಗುತ್ತು ಜೈಲ್ಲಿನಲ್ಲಿ ಸೂಪರಿಡೆಂಟ್ ಆಗಿರುವ ಶ್ರೀನಿವಾಸ ಗೌಡ ಅವರು ನಮಗೆ ನೀಡಬೇಕಾದ ಸವಲತ್ತುಗಳನ್ನು ನೀಡುತ್ತಿಲ್ಲ ಎಂದು  ಕೈದಿಗಳು  ಆರೋಪಿಸುತ್ತಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕೈದಿಗಳು ಜೈಲಿನಲ್ಲಿ ಅತ್ಯಂತ ಕಳಪೆ ಮಟ್ಟದ ಆಹಾರ ವಿತರಣೆ ನಡೆಯುತ್ತಿದೆ. ಕಾನೂನು ಪ್ರಕಾರ ವಾರಕ್ಕೊಮ್ಮೆ ಮೀನು, ಮಟನ್ ಕೊಡಬೇಕು.

    ಆದರೆ ಇಲ್ಲಿ ಕೋಳಿ ಕಾಲು ಬೇಯಿಸಿ ಸಾರು ಮಾಡಿ ಹಾಕುತ್ತಾರೆ. ಕೈದಿಗಳಿಗೆ ಬರುವ ರೇಷನ್ ಜೈಲು ಸುಪರಿಡೆಂಟ್ ಮನೆ ಸೇರುತ್ತಿದೆ.

    ಪ್ರತಿಯೊಂದು ವಸ್ತುವಿಗೂ ಜೈಲು ಸುಪರಿಡೆಂಟ್ ಶ್ರೀನಿವಾಸಗೌಡ ಲಂಚ ಕೇಳುತ್ತಿದ್ದಾರೆ. ಕೈದಿಗಳಿಗೆ ಬರುವ ಸವಲತ್ತುಗಳಲ್ಲಿ ಭಾರಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವ ಆರೋಪವನ್ನು  ಖೈದಿಗಳು  ಮಾಡಿದ್ದಾರೆ.

     

    Click to comment

    Leave a Reply

    Your email address will not be published. Required fields are marked *

    Ancient Mangaluru

    ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು

    Published

    on

    ಮಂಗಳೂರು : ವೆಣೂರಿನ ಬರ್ಕಜೆ ಸಮೀಪದಲ್ಲಿರುವ ಸ್ನೇಹಿತನ ಮನೆಗೆ ತೆರಳಿದ್ದ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. ಮದ್ಯಾಹ್ನದ ಊಟ ಮುಗಿಸಿ ಸಮೀಪದ ನದಿಗೆ ಈಜಲು ತೆರಳಿದ್ದ ಮೂವರು ನೀರಿನ ಸೆಳೆತಕ್ಕೆ ಸಿಲುಕಿ ಪ್ರಾ*ಣ ಕಳೆದುಕೊಂಡಿದ್ದಾರೆ.


    ಬೆಳ್ತಂಗಡಿ ತಾಲೂಕಿನ ವೇಣೂರಿನ ಮೂಡಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಮೂಡಬಿದ್ರೆಯ ಲಾರೆನ್ಸ್ 20 ವರ್ಷ, ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ 19 ವರ್ಷ, ಹಾಗೂ ಬಂಟ್ವಾಳದ ವಗ್ಗ ಗ್ರಾಮದ ಜೈಸನ್ 19 ವರ್ಷ ಈ ಮೂವರು ಹೋಗಿದ್ದಾರೆ. ಮದ್ಯಾಹ್ನದ ಊಟವನ್ನು ಮುಗಿಸಿದ ಇವರು ಜೊತೆಯಾಗಿ ಬರ್ಕಜೆ ಸಮೀಪದ ಡ್ಯಾಂ ಬಳಿ ನದಿಯಲ್ಲಿ ಈಜಲು ಹೋಗಿದ್ದಾರೆ. ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಮೂವರೂ ನೀರುಪಾಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಿಯರು ರಕ್ಷಣೆಗೆ ನದಿಗೆ ದುಮಿಕಿದ್ದಾರೆ. ಆದ್ರೆ ಮೂವರನ್ನು ನದಿಯಿಂದ ಮೇಲೆತ್ತುವ ಮೊದಲೇ ಇ*ಹಲೋಕ ತ್ಯಜಿಸಿದ್ದಾರೆ. ಮೂವರೂ ಮಂಗಳೂರಿನ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ.

    Continue Reading

    BANTWAL

    ಬಂಟ್ವಾಳ: ಅಟೋ ಮತ್ತು ಬೈಕ್ ನಡುವೆ ಅ*ಪಘಾತ; ಮೂವರು ಗಂ*ಭೀರ

    Published

    on

    ಬಂಟ್ವಾಳ : ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪದ ಕಾಡುಮಠದ ಬಳಿ ಅಟೋ ಹಾಗೂ ಬೈಕ್ ಒಂದರ ನಡುವೆ ಅ*ಪಘಾತ ಸಂಭವಿಸಿ ಮೂವರು ಗಾ*ಯಗೊಂಡಿದ್ದಾರೆ.

    ಸಾಲೆತ್ತೂರಿನ ಅಟೋ ಚಾಲಕ ರಫೀಕ್, ಬೈಕ್ ಸವಾರರಾದ ಕಡಂಬು ನಿವಾಸಿ ಉಮ್ಮರ್ ಮತ್ತು ರಾದುಕಟ್ಟೆ ನಿವಾಸಿ ಅಬೂಬಕ್ಕರ್ ಅವರು ಗಾ*ಯಗೊಂಡಿದ್ದಾರೆ. ಅ*ಪಘಾತದ ತೀವ್ರತೆಗೆ ಮೂವರಿಗೂ ಗಂಭೀರ ಗಾ*ಯಗಳಾಗಿದ್ದು, ರಸ್ತೆಯಲ್ಲಿ ಸಂಚಾರ ಸ್ಥಗಿತವಾಗಿತ್ತು. ಇದೇ ವೇಳೆ ಸ್ಥಳದಲ್ಲಿದ್ದ ಕೆ.ಎಸ್. ಹೆಗ್ಡೆ ವೈದ್ಯಕೀಯ ಕಾಲೇಜಿನ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಗಾ*ಯಾಳುಗಳ ನೆರವಿಗೆ ಧಾವಿಸಿ ಬಂದಿದ್ದಾರೆ.

    ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಮೂವರು ಗಾ*ಯಾಳುಗಳು ಕೂಡಾ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಾಗಿದ್ದು, ಓರ್ವನ ಸ್ಥಿತಿ ಗಂ*ಭೀರವಾಗಿದೆ ಎಂದು ಮಾಹಿತಿ ಲಭಿಸಿದೆ. ಈ ಅ*ಪಘಾತದ ಕುರಿತಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮ; ದಾಳಿಯಲ್ಲಿ ಮ*ಡಿದ ಯೋಧರಿಗೆ ಗೌರವಾರ್ಪಣೆ

    Published

    on

    ಮಂಗಳೂರು: ಮುಂಬೈ ನಗರದ ಮೇಲೆ ಭಯೋತ್ಪಾದಕರು ನಡೆಸಿದ ದಾ*ಳಿಯ ಸಂದರ್ಭದಲ್ಲಿ ಉಗ್ರರ ವಿರುದ್ಧ ಹೋರಾಡಿ ಪ್ರಾ*ಣವನ್ನು ಬ*ಲಿದಾನ ಮಾಡಿದ ಹುತಾತ್ಮರನ್ನು ಸ್ಮರಿಸುವ ರಾಷ್ಟ್ರಜಾಗೃತಿಯ ಅಸುವು ರಾಷ್ಟ್ರ ಸಮರ್ಪಿತ ಕಾರ್ಯಕ್ರಮವು ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ಜರುಗಿತು.

    ಕದ್ರಿ ಯುದ್ಧ ಸ್ಮಾರಕದ ಬಳಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಸಂತ ಅಲೋಶಿಯಸ್ ಕಾಲೇಜಿನ ಉಪಕುಲಪತಿ ವಂದನೀಯ ಡಾ ಪ್ರವೀಣ ಮಾರ್ಟಿಸ್‌ ವಹಿಸಿದ್ದರು. ಡಾ ವಾದಿರಾಜ ಗೋಪಾಡಿ ದಿಕ್ಸೂಚಿ ಭಾಷಣ ಮಾಡಿದರು.

    ಈ ಸಂದರ್ಭದಲ್ಲಿ ಎನ್‌ಎಂ ಪಿಎ ಸಿಐಎಸ್ಎಫ್‌ನ ಡೆಪ್ಯುಟಿ ಕಮಾಂಡೆಂಟ್‌  ರಾಜೇಂದ್ರ ಪ್ರಸಾದ್ ಪಾಠಕ್, ಕಾರ್ಯಕ್ರಮ ಸಂಘಟಕ ಡಾ ಶೇಷಪ್ಪ, ಡಾ ನಿಶ್ಚಿತ್‌ ಡಿ ಸೋಜಾ,  ಹಿರಿಯ ಪೊಲೀಸ್ ಅಧಿಕಾರಿ ಅಜ್ಜತ್ ಆಲಿ, ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ ಬಾಳ, ನ್ಯಾಯವಾದಿ ಬಿ. ನಯನ ಪೈ. ವಿದುಷಿ ಗುರು ಶ್ರೀಮತಿ ಸೌಮ್ಯ ಸುಧೀಂದ್ರ ರಾವ್, ಕಾರ್ಪೋರೇಟರ್‌ ಶಕೀಲಾ ಕಾವ ಮೊದಲಾದವರಿದ್ದರು. ನೃತ್ಯಸುಧಾ ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯರಿಂದ ಹುತಾತ್ಮ ಸೈನಿಕರಿಗೆ ನೃತ್ಯನಮನ ನಡೆಯಿತು.

    Continue Reading

    LATEST NEWS

    Trending