Thursday, March 23, 2023

ಉಡುಪಿ: ನಾಗಬನದಲ್ಲಿನ ಶ್ರೀಗಂಧ ಮರ ಕಳವು- ಆರೋಪಿ ಬಂಧನ

ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು  ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿ: ಅಂಬಲಪಾಡಿ ಶ್ಯಾಮಲಿ ಸಭಾಭವನದ ಹಿಂಬದಿ ಸಿಪಿಸಿ ಲೇಔಟ್ ಎಂಬಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿ ಯೊಬ್ಬನನ್ನು ಉಡುಪಿ ಅರಣ್ಯ ಇಲಾಖೆಯವರು  ವಶಕ್ಕೆ ಪಡೆದುಕೊಂಡಿದ್ದಾರೆ.

ಮೂಡುಬೆಳ್ಳೆ ನಿವಾಸಿ ಅಶೋಕ ಬಂಧಿತ ಆರೋಪಿ. ನಾಗಬನದಲ್ಲಿನ ಶ್ರೀಗಂಧದ ಮರ ಕಡಿಯುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಉಡುಪಿ ವಲಯದ ಪ್ರಭಾರ ಉಪ ವಲಯ ಅರಣ್ಯ ಅಧಿಕಾರಿ ಕೇಶವ ಪೂಜಾರಿ ಎಂ. ನೇತೃತ್ವದಲ್ಲಿ ಗಸ್ತು ಅರಣ್ಯ ಪಾಲಕರಾದ ಎಚ್.ದೇವರಾಜ ಪಾಣ, ಅಭಿಲಾಷ್ ಎಸ್.ಬಿ. ಮತ್ತು ವಿತೇಶ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯಿಂದ ಸುಮಾರು 43 ಕೆ.ಜಿ. ಹಸಿ ಶ್ರೀಗಂಧವನ್ನು ದಸ್ತಗಿರಿ ಮಾಡಲಾಗಿದೆ. ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಉದಯ ಎಂ. ನಾಯಕ್ ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ಮಾರ್ಗದರ್ಶನದಂತೆ ಉಡುಪಿ ವಲಯದ ವಲಯ ಅರಣ್ಯ ಅಧಿಕಾರಿ ಸುಬ್ರಹ್ಮಣ ಆಚಾರ್ ಪ್ರಕರಣ ದಾಖಲಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಕಾರ್ಯಾಚರಣೆಯಲ್ಲಿ ಉಡುಪಿ ಘಟಕದ ಉಪ ವಲಯ ಅರಣ್ಯಾಧಿ ಕಾರಿ ಸುರೇಶ್ ಗಾಣಿಗ, ಪಡುಬಿದ್ರೆ ಘಟಕದ ಉಪ ವಲಯ ಅರಣ್ಯ ಅಧಿಕಾರಿ ಜೀವನದಾಸ ಶೆಟ್ಟಿ, ಕಾವು ಗಸ್ತು ಅರಣ್ಯ ಪಾಲಕರಾದ ಮಂಜುನಾಥ ಬಿ. ನಾಯ್ಕ, ವಾಹನ ಚಾಲಕ ಜೋಯಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

Hot Topics

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಓಮನ್‌ನಲ್ಲಿ ಹೃದಯಾಘಾತದಿಂದ ಅನಿವಾಸಿ ಭಾರತೀಯ ಮಹಿಳೆ ಮೃತ್ಯು..!

ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ ಮಹಿಳೆ ಸೈಮಾ ಬಾಲಕೃಷ್ಣ ಮೃತ ಮಹಿಳೆಯಾಗಿದ್ದಾಳೆ.ಓಮನ್ : ಓಮನ್‌ ನಲ್ಲಿ ಭಾರತೀಯ ಮೂಲದ ಮಹಿಳೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕೇರಳ ಕೊಟ್ಟಾಯಂನ...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...