LATEST NEWS
Udupi: ಸ್ಕೂಟಿ ಸ್ಪಂಟ್ ವಿಡಿಯೋ ವೈರಲ್ – ಕೇಸ್ ದಾಖಲು..!
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಉಡುಪಿ: ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಯುವಕನನ್ನು ಪರ್ಕಳ ನಿವಾಸಿ ಅಬೂಬಕ್ಕರ್ ಪುತ್ರ ಆಶಿಕ್ ಎಂದು ಗುರುತಿಸಲಾಗಿದೆ.
ಯುವಕನ ಹುಚ್ಚಾಟದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಪರೀತವಾದ ಆಕ್ರೋಶ ವ್ಯಕ್ತವಾಗಿತ್ತು.
ಉಡುಪಿ ರಿಜಿಸ್ಟ್ರೇಶನ್ ನಂಬರ್ ಪ್ಲೇಟ್ ಇರುವ ಯುವಕ ತನ್ನ ಸ್ಕೂಟಿಯನ್ನು ಅಡ್ಡಾದಿಡ್ಡಿಯಾಗಿ ಪ್ರಾಣಕ್ಕೆ ಭೀತಿ ಉಂಟುಮಾಡುವ ರೀತಿಯಲ್ಲಿ ಅಪಾಯಕಾರಿಯಾಗಿ ಚಲಿಸುತ್ತಿದ್ದ.
ಇದನ್ನು ಬಳಿಕ ಆತನೇ ಅಪ್ಲೋಡ್ ಮಾಡಿದ್ದ.
ಈತನ ಸ್ಟಂಟ್ ಅನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಣಿಪಾಲ ಪೊಲೀಸರ ಮೂಲಕ ಯುವಕನ ಗುರುತನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಂಡಿದ್ದಾರೆ.
ಯುವಕನ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್‌ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್‌ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್‌ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್‌ಗಾರ್ಡ್‌ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್‌ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್‌ನ ಎರಡು ಇಂಟರ್‌ಸೆಪ್ಟರ್ ಬೋಟ್‌ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್‌ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್‌ಗಾರ್ಡ್ ತಿಳಿಸಿದೆ.
LATEST NEWS
Lucknow: ಪುತ್ರಿ ಮದುವೆ ಮಾಡಲು ಎಂದು ಲಾಕರ್ ನಲ್ಲಿಟ್ಟ 18 ಲಕ್ಷ ರೂ. ಗೆದ್ದಲು ಪಾಲು..!
ಲಕ್ನೋ: ಮಗಳ ಮದುವೆಗೆಂದು ತಾಯಿಯೊಬ್ಬರು ರೂಪಾಯಿ-ರೂಪಾಯಿ ಹಣವನ್ನು ಜೋಪಾನವಾಗಿ ಬ್ಯಾಂಕ್‌ನ ಲಾಕರ್‌ನಲ್ಲಿ ಕೂಡಿ ಇಟ್ಟ ಸುಮಾರು 18 ಲಕ್ಷ ರೂ. ಹಣವು ಗೆದ್ದಲು ಹಿಡಿದು ನಾಶವಾಗಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ವರದಿಯಾಗಿದೆ.
ಮೊರಾದಾಬಾದ್ ನಿವಾಸಿ ಅಲ್ಕಾ ಪಠಾಕ್ ಅವರು ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅಶಿಯಾನಾದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 18 ಲಕ್ಷ ರೂ.ಗಳನ್ನು ಇಟ್ಟಿದ್ದರು.
ಇತ್ತೀಚಿಗೆ ಬ್ಯಾಂಕ್ ಸಿಬಂದಿ ಲಾಕರ್ ಅಗ್ರಿಮೆಂಟ್ ರಿನೀವಲ್‌ಗೆ ಎಂದು ಅಲ್ಕಾ ಅವರಿಗೆ ಕರೆ ಮಾಡಿ ಬರಲು ಹೇಳಿದ್ದಾರೆ.
ಈ ವೇಳೆ ಲಾಕರ್ ತೆರೆದರೆ ನೋಟುಗಳಿಗೆ ಗೆದ್ದಲು ಹಿಡಿದಿರುವುದು ಕಂಡು ಬಂದಿದೆ.
ಈ ಬಗ್ಗೆ ಬ್ಯಾಂಕ್‌ನ ಮುಖ್ಯ ಕಚೇರಿಗೆ ತಿಳಿಸಿರುವುದಾಗಿ ಸಿಬಂದಿ ಹೇಳಿದ್ದಾರೆ.
ತನಗಾದ ನಷ್ಟಕ್ಕೆ ಬ್ಯಾಂಕ್‌ನವರೇ ಪರಿಹಾರ ನೀಡಬೇಕೆಂದು ಮಹಿಳೆ ಪಟ್ಟು ಹಿಡಿದಿರುವುದು ವರದಿಯಾಗಿದೆ.
FILM
ವಯಸ್ಸಲ್ಲಿ ರಾಘವ್ ಚಡ್ಡಾ ಅವರಿಗಿಂತ ಸೀನಿಯರ್ ಪರಿಣಿತಿ ಚೋಪ್ರಾ…!
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದೆ.
ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಪ್ ಸಂಸದ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರ ಈಗ ರಿವೀಲ್ ಆಗಿದ್ದು, ರಾಘವ್ ಚಡ್ಡಾ ಅವರಿಗಿಂತ ಪರಿಣಿತಿ ಚೋಪ್ರಾ ಸೀನಿಯರ್.
ಸೆಪ್ಟೆಂಬರ್ 24ರಂದು ಈ ಜೋಡಿ ಗ್ರ್ಯಾಂಡ್ ಆಗಿ ರಾಜಸ್ಥಾನದ ಉದಯಪುರದ ಲೀಲಾ ಪ್ಯಾಲೇಸ್‌ನಲ್ಲಿ ಸಪ್ತಪದಿ ತುಳಿದಿದ್ರು.
ರಾಘವ್ ಚಡ್ಡಾ ಅವರು 2022ರಲ್ಲಿ ಪಂಜಾಬ್‌ನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಆಗಿದ್ದಾರೆ.
33ನೇ ವಯಸ್ಸಿಗೆ ರಾಜ್ಯಸಭೆ ಪ್ರವೇಶಿಸಿದ ಅವರು, ಅತ್ಯಂತ ಕಿರಿಯ ರಾಜ್ಯಸಭಾ ಸದಸ್ಯ ಎಂಬ ಖ್ಯಾತಿಗೆ ಪಾತ್ರವಾಗಿದ್ದಾರೆ.
ಇನ್ನು ನಟಿ ಪರಿಣಿತಿ ಚೋಪ್ರಾ ಅವರು 2011ರಿಂದಲೂ ಬಾಲಿವುಡ್‌ನಲ್ಲಿ ಸಕ್ರಿಯರಾಗಿದ್ದಾರೆ.
‘ಶುದ್ಧ್ ದೇಸಿ ರೊಮ್ಯಾನ್ಸ್’, ‘ಹಸೀ ತೊ ಫಸೀ’, ‘ದಾವತ್ ಎ ಇಶ್ಕ್’, ‘ನಮಸ್ತೆ ಇಂಗ್ಲೆಂಡ್’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
ಸದ್ಯ ಅಕ್ಷಯ್ ಕುಮಾರ್ ಜತೆ ಪರಿಣಿತಿ ನಟಿಸಿರುವ ‘ಮಿಷನ್ ರಾಣಿಗಂಜ್’ ಸಿನಿಮಾ ತೆರೆ ಕಾಣಬೇಕಿದೆ.
ಸದ್ಯಕ್ಕೆ ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವರ ವಯಸ್ಸಿನ ಅಂತರದ ಸಾಕಷ್ಟು ಬಗ್ಗೆ ಚರ್ಚೆಯಾಗುತ್ತಿದೆ.
ಇಬ್ಬರಿಗೂ ಈಗ 35 ವರ್ಷ ವಯಸ್ಸಾಗಿದ್ದು, ನಟಿ ಪರಿಣಿತಿ ಚೋಪ್ರಾ ಅವರು 22 ಅಕ್ಟೋಬರ್ 1988ರಲ್ಲಿ ಜನಿಸಿದ್ದಾರೆ. ರಾಘವ್ ಚಡ್ಡಾ ಅವರು 11 ನವೆಂಬರ್ 1988ರಲ್ಲಿ ಜನಿಸಿದ್ದಾರೆ.
ವಿಶೇಷ ಎಂದರೆ ನಟಿ ಪರಿಣಿತಿ ಚೋಪ್ರಾ ಅವರು ರಾಘವ್ ಚಡ್ಡಾ ಅವರಿಗಿಂತ 20 ದಿನ ದೊಡ್ಡವರಾಗಿದ್ದಾರೆ.
ವಯಸ್ಸಿನ ಮಿತಿಯನ್ನು ಲೆಕ್ಕಿಸದೇ ಸ್ಟಾರ್ ನಟ ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಡುವುದು ಮಾಮೂಲು ಆಗಿದೆ.