LATEST NEWS
ಉಡುಪಿ : ಬಿಸ್ಕೆಟ್ ಕೊಡಿಸುವ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿ ಸೆರೆ..!
ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಐದು ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉಡುಪಿ : ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಐದು ವರ್ಷದ ಬಾಲಕಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ ಆರೋಪಿಯಾಗಿದ್ದಾನೆ.
ಪಡುಬಿದ್ರೆ : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಸ್ಕೆಟ್ ಕೊಡಿಸುವುದಾಗಿ ಬಾಲಕಿಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ವಿವರ: ಪಡುಬಿದ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾರ್ಮಿಕನಾಗಿದ್ದ ಈತ, ಅಲ್ಲೇ ದುಡಿಯುತ್ತಿದ್ದ ಅದೇ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಮಗಳನ್ನು ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯು ಹೊಟ್ಟೆನೋವು ಎಂದು ತಿಳಿಸಿದ್ದು, ಆಕೆಯನ್ನು ಪಡುಬಿದ್ರಿಯ ಪ್ರಾರ್ಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರಲಾಗಿತ್ತು.
ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಬಳಿಕ ಬಾಲಕಿಯನ್ನು ಪಡುಬಿದ್ರೆ ಠಾಣಾ ಮಹಿಳಾ ಸಿಬಂದಿ, ಆಕೆಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ದೃಢಪಟ್ಟಿದೆ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾನೂನಿನನ್ವಯ ಪ್ರಕರಣ ದಾಖಲಿಸಲಾಗಿದೆ.
ಆರೋಪಿ ಬಾಲಕಿಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ವಿವರ: ಪಡುಬಿದ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾರ್ಮಿಕನಾಗಿದ್ದ ಈತ, ಅಲ್ಲೇ ದುಡಿಯುತ್ತಿದ್ದ ಅದೇ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಮಗಳನ್ನು ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯು ಹೊಟ್ಟೆನೋವು ಎಂದು ತಿಳಿಸಿದ್ದು, ಆಕೆಯನ್ನು ಪಡುಬಿದ್ರಿಯ ಪ್ರಾ. ಆ. ಕೇಂದ್ರಕ್ಕೆ ಕರೆ ತರಲಾಗಿತ್ತು.
ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಬಳಿಕ ಬಾಲಕಿಯನ್ನು ಪಡುಬಿದ್ರೆ ಠಾಣಾ ಮಹಿಳಾ ಸಿಬಂದಿ , ಆಕೆಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ದೃಢಪಟ್ಟಿದೆ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾನೂನಿನನ್ವಯ ಪ್ರಕರಣ ದಾಖಲಿಸಲಾಗಿದೆ.
BANTWAL
ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.
ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
DAKSHINA KANNADA
ಇಂದು ಕರ್ನಾಟಕ ಬಂದ್: ಕರಾವಳಿಗರಿಂದ ನೈತಿಕ ಬೆಂಬಲ-ಬಸ್, ಹೊಟೇಲ್, ಶಾಲೆಗಳು ಎಂದಿನಂತೆ
ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.
ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.
ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.
ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.
ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.
LATEST NEWS
ಭೀಕರ ಬ್ಲಾಸ್ಟ್: ಮೊಬೈಲ್ ಬಳಿಯಲ್ಲಿ ಡಿಯೋಡರೆಂಟ್ ಬಾಟಲಿಗಳನ್ನು ಇಡ್ಡುತ್ತೀರಾ ಹಾಗಾದ್ರೆ ಹುಷಾರ್..!!
ಮಹಾರಾಷ್ಟ್ರ: ಮೂವರು ಮೊಬೈಲ್ ಫೋನ್ ಸ್ಫೋಟದಿಂದ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್‌ನ ಸಿಡ್ಕೋ ಉತ್ತಮ್ ನಗರ ಪ್ರದೇಶದಲ್ಲಿ ಮಂಗಳವಾರದಂದು ನಡೆದಿದೆ.
ಮನೆಯೊಳಗೆ ಚಾರ್ಜ್ ಮಾಡಲು ಇಟ್ಟಿದ್ದ ಮೊಬೈಲ್ ಸ್ಫೋಟಗೊಂಡ ಕಾರಣ ಈ ಘಟನೆ ನಡೆದಿದೆ.
ಫೋನ್ ಪಕ್ಕದಲ್ಲಿ ಡಿಯೋಡರೆಂಟ್ ಕ್ಯಾನ್ ಸ್ಫೋಟದ ತೀವ್ರತೆ ಮತ್ತಷ್ಟು ಹೆಚ್ಚಿಸಿದೆ.
ಸ್ಫೋಟದ ತೀವ್ರತೆಯು ಎಷ್ಟು ದೊಡ್ಡದಾಗಿದೆ ಎಂದರೆ ಅದು ಸುತ್ತಮುತ್ತಲಿನ ಪ್ರತಿಯೊಂದು ಕಿಟಕಿಗಳನ್ನು ಒಡೆದು ಹಾಕಿತು.
ಸ್ಫೋಟದ ತೀವ್ರತೆಯಿಂದಾಗಿ ಹೊರಗೆ ನಿಲ್ಲಿಸಿದ್ದ ಕಾರಿನ ಗಾಜುಗಳು ಕೂಡ ಒಡೆದಿವೆ.
ಅಕ್ಕಪಕ್ಕದ ಮನೆಗಳ ಕಿಟಕಿ ಗಾಜುಗಳೂ ಒಡೆದಿರುವ ಬಗ್ಗೆ ವರದಿಯಾಗಿದೆ.
ಸ್ಫೋಟದ ವೇಳೆ ಮನೆಯಲ್ಲಿದ್ದ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಹಾಗೂ ಪೊಲೀಸರ ತನಿಖೆ ಮುಂದುವರೆದಿದೆ.
- FILM7 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- DAKSHINA KANNADA7 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?