Connect with us

    LATEST NEWS

    ಉಡುಪಿ | ಚಲಿಸುತ್ತಿದ್ದ ರೈಲಿನಲ್ಲಿ ಮಣಿಪಾಲದ ಯುವತಿಗೆ ಲೈಂಗಿಕ ಕಿರುಕುಳ; ಕಾಮುಕ ಅರೆಸ್ಟ್‌ ಆಗಿದ್ದೇ ರೋಚಕ!

    Published

    on

    ಉಡುಪಿ: ಬೆಂಗಳೂರಿನಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಭಾನುವಾರ ಬೆಳಿಗ್ಗೆ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮೂಲತಃ ಉಡುಪಿ ತಾಲೂಕಿನ ಮಣಿಪಾಲದ ಯುವತಿ ಬೆಂಗಳೂರಿನಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಅವರು ಶನಿವಾರ ರಾತ್ರಿ ಬೆಂಗಳೂರಿನಿಂದ ಉಡುಪಿಗೆ ಹೊರಟಿದ್ದರು.

    ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ ಆರೋಪಿ, ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ಇನ್ನೇನು ಉಡುಪಿಗೆ ಅರ್ಧ ಗಂಟೆ ಇರುವಾಗ ಮಂಗಳೂರು ಹೊರವಲಯದ ಮುಲ್ಕಿ ಬಳಿ ಯುವತಿಯ ಮೇಲೆ ಎರಗಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಕೂಡಲೇ ಇದಕ್ಕೆ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗಾಬರಿಗೊಂಡ ಶುರೈಂ ಕ್ಷಮೆಯಾಚಿಸಿದ್ದಾನೆ. ಆದರೆ ಯುವತಿ ಆತನ ಫೋಟೊ ತೆಗೆದುಕೊಂಡಿದ್ದಾಳೆ. ಕೂಡಲೇ ಯುವತಿ ಉಡುಪಿ ರೈಲ್ವೆ ಪೊಲೀಸರಿಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ದಾಳೆ. ರೈಲ್ವೆ ಮದದ್ ಆ್ಯಪ್ ಮೂಲಕವೂ ದೂರು ನೀಡಿದ್ದಾಳೆ. ಯುವತಿ ಮಾಹಿತಿ ಆಧರಿಸಿ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಯುವತಿ ತೆಗೆದ ಆರೋಪಿಯ ಫೋಟೊ ಮಾತ್ರ ಪೊಲೀಸರಿಗಿದ್ದ ಕುರುಹಾಗಿತ್ತು. ಅದರಂತೆ ಪೊಲೀಸರು ಆ ದಿನ ಬೋಗಿಯಲ್ಲಿ ಪ್ರಯಾಣಿಸಿದ್ದ ಪ್ರಯಾಣಿಕರ ಲಿಸ್ಟ್‌ ಪಡೆದುಕೊಂಡರು. ಒಟ್ಟು 1,200 ಮಂದಿ ಲಿಸ್ಟ್‌ನಲ್ಲಿದ್ದರು. ಆದರೆ ಯುವತಿಯ ಫೋಟೊದಲ್ಲಿದ್ದ ವ್ಯಕ್ತಿ ಟೋಪಿ ಹಾಕಿಕೊಂಡಿದ್ದರಿಂದ ಆತ ಮುಸ್ಲಿಂ ವ್ಯಕ್ತಿ ಎಂದುಕೊಂಡು, ಪ್ರಯಾಣಿಕರ ಲಿಸ್ಟ್‌ನಲ್ಲಿದ್ದ ಮುಸ್ಲಿಂ ಹೆಸರುಗಳ ಪಟ್ಟಿ ತಗೆದರು. ಬಳಿಕ ಸಿಎನ್‌ಆರ್‌ ನಂಬರ್‌ಗಳನ್ನು ಪಡೆದಾಗ ಅದರಲ್ಲಿದ್ದ ಎಲ್ಲರ ಮೊಬೈಲ್‌ ಸಂಖ್ಯೆ ಪೊಲೀಸರಿಗೆ ಸಿಕ್ಕಿತು. ಈ ನಡುವೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಯ ಚಲನವಲನ ಕಂಡುಹಿಡಿದರು. ಆರೋಪಿ ಭಟ್ಕಳ ನಿವಾಸಿ ಎಂಬುದು ಪೊಲೀಸರಿಗೆ ದೃಢವಾಯಿತು. ಅದರಂತೆ ಭಟ್ಕಳಕ್ಕೆ ತೆರಳಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಕೇವಲ 20 ಗಂಟೆಯ ಕಾರ್ಯಾಚರಣೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿಯು ಭಟ್ಕಳದಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿದ್ದು, ಮೈಸೂರಿನ ಜಮಾತ್‌ನಲ್ಲಿ 10 ದಿನಗಳ ಕೋರ್ಸ್‌ ಮುಗಿಸಿಕೊಂಡು ಊರಿಗೆ ಹಿಂತಿರುಗುತ್ತಿದ್ದ ಎನ್ನಲಾಗಿದೆ. ಬಂಧಿತ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    LATEST NEWS

    ಕಮ್ಯುನಿಸ್ಟ್‌ ನಾಯಕ ಸಿತಾರಾಮ್‌ ಯೆಚೂರಿ ಇನ್ನಿಲ್ಲ..!

    Published

    on

    ನವದೆಹಲಿ : ಕಮ್ಯುನಿಸ್ಟ್‌ ನಾಯಕ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದ್ದಾರೆ. 72 ವರ್ಷ ವಯಸ್ಸಾಗಿದ್ದ ಯೆಚೂರಿ ಅವರು ಉಸಿರಾಟದ ತೊಂದರೆಗಾಗಿ ಆಗಸ್ಟ್‌ 19 ರಂದು ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಎರಡು ದಿನಗಳಿಂದ ಶ್ವಾಸಕೋಶದ ಸೋಂಕು ಉಲ್ಭಣವಾಗಿದ್ದು ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.


    1952 ರಲ್ಲಿ ಚೆನೈನಲ್ಲಿ ಜನಿಸಿದ್ದ ಇವರು ಶಾಲಾ ಶಿಕ್ಷಣವನ್ನು ಹೈದರಾಬಾದ್‌ನಲ್ಲಿ ಪೂರೈಸಿದ್ದರು. 1969 ರಲ್ಲಿ ತೆಲಂಗಾಣ ಪ್ರತ್ಯೇಕತಾ ಹೋರಾಟ ಆರಂಭವಾದ ಬಳಿಕ ದೆಹಲಿಗೆ ತೆರಳಿದ್ದ ಯೆಚೂರಿ ದೆಹಲಿಯ ಜೆಎನ್‌ಯುನಲ್ಲಿ ಎಂಎ ಪದವಿ ಮುಗಿಸಿದ್ದರು. ಪಿಹೆಚ್‌ಡಿ ಆರಂಭಿಸಿದ್ದರಾದ್ರೂ ತುರ್ತು ಪರಿಸ್ಥಿತಿಯ ಕಾರಣದಿಂದ ಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. 1970 ರಿಂದ ಜೆಎನ್‌ಯುನ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಮೂರು ಭಾರಿ ಆಯ್ಕೆಯಾಗಿದ್ದರು. ಬಳಿಕ 1984 ರಲ್ಲಿ ಸಿಪಿಐಎಂನ ಕೇಂದ್ರ ಸಮಿತಿಗೆ ಆಯ್ಕೆಯಾಗಿ ಪಕ್ಷದಲ್ಲಿ ಇದುವರೆಗೂ ಸೇವೆ ಸಲ್ಲಿಸಿಕೊಂಡು ಬಂದಿದ್ದಾರೆ.

    Continue Reading

    FILM

    ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಬಂದ ಪತ್ನಿ ವಿಜಯಲಕ್ಷ್ಮಿ

    Published

    on

    ಬಳ್ಳಾರಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ರನ್ನು ನೋಡಲು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದಾರೆ. ಅತ್ತಿಗೆ ಜೊತೆ ದರ್ಶನ್ ಸಹೋದರ ದಿನಕರ್ ಕೂಡ ಆಗಮಿಸಿದ್ದಾರೆ.

    ಚಾರ್ಜ್‌ಶೀಟ್ ಪ್ರತಿ ಸಮೇತ ಇಬ್ಬರು ವಕೀಲರೊಂದಿಗೆ ವಿಜಯಲಕ್ಷ್ಮಿ ಮತ್ತು‌ ಸಹೋದರ ದಿನಕರ್ ಜೈಲಿಗೆ ಭೇಟಿ ನೀಡಿ, ದರ್ಶನ್ ಜೊತೆ ಕಾನೂನು ಸಮರದ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ, ಪತಿಗಾಗಿ ಡ್ರೈ ಫ್ರೂಟ್ಸ್‌, ಬಿಸ್ಕೆಟ್ ಹಾಗೂ ದೇವರ ಪ್ರಸಾದೊಂದಿಗೆ ಆಗಮಿಸಿದ್ದಾರೆ.

    ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೂನ್ 11ರಂದು ದರ್ಶನ್‌ರನ್ನು ಬಂಧಿಸಿದ್ದರು.

    Continue Reading

    LATEST NEWS

    ಶಿಕ್ಷಕಿ, ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ ವಿಧಿವಶ

    Published

    on

    ಉಡುಪಿ: ನಿಟ್ಟೂರು ಪ್ರೌಢಶಾಲಾ ಶಿಕ್ಷಕಿ ನಿಟ್ಟೂರು ನಿವಾಸಿ ರೋಸಿ ಫಿಲೋಮಿನಾ ಪಿಂಟೋ(72 ವ) ಸೆ. 12ರಂದು ಮೃತಪಟ್ಟಿದ್ದಾರೆ.

    ಅವರು 33 ವರ್ಷಗಳಿಂದ ನಿಟ್ಟೂರು ಫ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೆವೆ ಸಲ್ಲಿಸಿದ್ದರು. ಶಾಲಾ ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿ ಮತ್ತು ಇಂಟರ್ಯಾಕ್ಟ್ ಕ್ಲಬ್‌ ನ ಸಂಯೋಜಕಿಯಾಗಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಪಾಲನಾ ಪರಿಷತ್‌ನ ಪ್ರಥಮ ಮಹಿಳಾ ಕಾರ್ಯದರ್ಶಿಯಾಗಿ, ಮಹಿಳಾ ಸಂಘಟನೆಯ ಅಧ್ಯಕ್ಷೆಯಾಗಿ, ಚೇತನಾ ಮತ್ತು ಪ್ರಗತಿ ಮಹಿಳಾ ಮಂಡಲಗಳ ಸ್ಥಾಪಕಾಧ್ಯಕ್ಷೆಯಾಗಿದ್ದರು. ಮೃತರು ಇಬ್ಬರು ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

    Continue Reading

    LATEST NEWS

    Trending