Connect with us

LATEST NEWS

Udupi: ಹಿಂದೂ ಮುಖಂಡರ ಮೇಲೆ ಸುಮೋಟೋ ಕೇಸ್ ದಾಖಲೆ – ಯಶ್ ಪಾಲ್ ಆಕ್ರೋಶ..!

Published

on

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್,ವೀಣಾ ಶೆಟ್ಟಿ ವಿರುದ್ಧ  ಸುಮೋಟೋ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಕ್ರಮಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ವಿರುದ್ಧ ಹಾಗೂ ಬಿಜೆಪಿ ಪಕ್ಷದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಶೆಟ್ಟಿ ಸುಮೋಟೋ ಕೇಸ್ ದಾಖಲಿಸಿರುವ ಪೊಲೀಸ್ ಇಲಾಖೆಯ ಕ್ರಮಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಕೈ ಗೊಂಬೆಯಾಗಿ ಪೋಲಿಸ್ ಇಲಾಖೆ ಕೆಲಸ ನಿರ್ವಹಿಸುತ್ತಿದ್ದು, ಪ್ರಕರಣದ ಆರಂಭದ ದಿನದಿಂದಲೂ ಸರಕಾರ ನಿರಂತರವಾಗಿ ಪೋಲಿಸ್ ಇಲಾಖೆಯ ಮೇಲೆ ಒತ್ತಡ ತರುತ್ತಿದ್ದು ಪ್ರಕರಣವನ್ನು ಮುಚ್ಚಿ ಹಾಕುವ ಹುನ್ನಾರ ನಡೆಸುತ್ತಿದೆ.

ಉಡುಪಿಯಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿಯಾಗಿ ಪ್ರಕರಣದ ವಿರುದ್ಧ ಜನಕ್ರೋಶ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಹತಾಶರಾಗಿರುವ ರಾಜ್ಯ ಸರ್ಕಾರ ಪೋಲಿಸ್ ಇಲಾಖೆಯ ಮೂಲಕ ಹಿಂದೂ ಮುಖಂಡರ ಮೇಲೆ ಕೇಸ್ ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ತೊಡಗಿದೆ.

ವಿಡಿಯೋ ಪ್ರಕರಣದ ಬಗ್ಗೆ ಕೇಸು ದಾಖಲಿಸಲು ಮೀನಾ ಮೇಷ ಎಣಿಸಿ ವಿಳಂಬವಾಗಿ 8 ದಿನಗಳ ಬಳಿಕ ಕೇಸ್ ದಾಖಲಿಸಿಕೊಂಡಿದ್ದ ಪೊಲೀಸ್ ಇಲಾಖೆ ಹಿಂದೂ ಮುಖಂಡರ ವಿರುದ್ಧ ತರಾತುರಿಯಲ್ಲಿ ಸುಮೋಟೋ ಕೇಸ್ ದಾಖಲಿಸುವಲ್ಲಿ ವಿಶೇಷ ಆಸಕ್ತಿ ವಹಿಸಿದೆ.

ರಾಜ್ಯ ಸರ್ಕಾರ ಜಿಹಾದಿ ಶಕ್ತಿಗಳ ಓಲೈಕೆಗಾಗಿ ಹಿಂದೂ ಮುಖಂಡರ ವಿರುದ್ಧ ಕೇಸ್ ದಾಖಲಿಸಿದ್ದು, ಇದರಿಂದ ಯಾವೊಬ್ಬ ಹಿಂದೂ ಕಾರ್ಯಕರ್ತ ಧೃತಿಗೆಡದೆ ಸಂತ್ರಸ್ಥ ವಿದ್ಯಾರ್ಥಿನಿಯರ ರಕ್ಷಣೆಗೆ ಸದಾ ಜೊತೆ ನಿಲ್ಲಲಿದ್ದಾರೆ ಎಂದು ತಿಳಿಸಿದ್ದಾರೆ.

1 Comment

1 Comment

  1. ARUN

    05/08/2023 at 10:18 AM

    FIRST YOU TEACH THEM HOW TO SPEAK IN PUBLIC-ALLY, IF U HAVE MIKE IN FRONT OF YOU ITS NOT MEAN YOU CAN SPEAK ANYTHING , TRY TO STOP PROVOCATIVE SPEECHES, ALL HAVE RIGHT TO PROTEST BUT IN LEGAL MEANER, WHY YOU PEOPLE NOT PROTESTED FOR VITLA RAPE CASE , NOW IN MULKY NEW VIDEO CASE … TRY TO CONCERNED ALL RELIGION EQUAL ALL MAKE MISTAKE , IF ANY ONE DO PROTEST TO PUNISH WITH REGARDS ALL RELIGION AND CAST

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಗಣಪತಿ ವಿಗ್ರಹದ ವಿಸರ್ಜನೆ

Published

on

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ 3ದಿನಗಳ ಕಾಲ ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಗುರುವಾರ ರಾತ್ರಿ ಸಂಪನ್ನಗೊಂಡಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಯೋಗದಲ್ಲಿ ನಡೆದ ಈ ಉತ್ಸವದ ಕೊನೆಗೆ ಶ್ರೀ ಸಿದ್ದಿವಿನಾಯಕ ದೇವರಿಗೆ ಮಹಾಪೂಜೆ ನೆರವೇರಿಸಲಾಯಿತು.

ಬಳಿಕ ಕಡೆಂಜ ಅಶೋಕ್ ಕುಮಾರ್ ಚೌಟ ಶೋಭಾಯಾತ್ರೆಯನ್ನು ಉದ್ಘಾಟಿಸಿದರು. ಚೆಂಡೆ ವಾದ್ಯ ಮೇಳ ಮತ್ತು ಭಜನಾ ಸೇವೆಗಳ ಜೊತೆಗೆ ಸಾಗಿ ಬಂದ ಶೋಭಾಯಾತ್ರೆಯು ಬಂಟ್ಸ್ ಹಾಸ್ಟೆಲ್ ನ ಹಿಂಭಾಗವಾಗಿ ಹೊರಟು ಪಿವಿಸ್ ಸರ್ಕಲ್, ನವಭಾರತ ಸರ್ಕಲ್, ಡೊಂಗರಕೇರಿ, ನ್ಯೂ ಚಿತ್ರ ಆಗಿ ಕಾರ್ ಸ್ಟ್ರೀಟ್ ಗೆ ಸಾಗಿ ಕುಡ್ತೇರಿ ಮಹಮ್ಮಾಯಿ ದೇವಸ್ಥಾನದ ಕೆರೆಗೆ ಬಂದು ಗಣಪತಿ ಮೂರ್ತಿಯ ವಿಗ್ರಹದ ವಿಸರ್ಜನೆ ಮಾಡಲಾಯಿತು.

3ಜಿಲ್ಲೆಗಳಿಂದ ಆಗಮಿಸಿದ ಬಂಟರ ಮತ್ತು ಊರ – ಪರವೂರ ಭಕ್ತರು ವೈಭವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು .

Continue Reading

LATEST NEWS

ಸಿರಿಮನೆ ಫಾಲ್ಸ್ ಗೆ ತೆರಳುತ್ತಿದ್ದ ವಿಭಿನ್ನ ಕೋಮಿನ ಜೋಡಿಗಳನ್ನು ತಡೆದ ಹಿಂದೂ ಕಾರ್ಯಕರ್ತರು – FIR ದಾಖಲು..!

Published

on

ಉಡುಪಿ: ವಿಭಿನ್ನ ಕೋಮಿನ ಜೋಡಿಗಳಿಬ್ಬರು ಜಾಲಿ ರೈಡ್ ಗೆ ತೆರಳಿದ್ದಾಗ ಜೋಡಿಗಳನ್ನು ತಡೆದು ನಿಲ್ಲಿಸಿದ ಸಂಘ ಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿರುವ ವಿಡಿಯೊವೊಂದು ವೈರಲ್ ಆಗಿದೆ.

ಕಳೆದ ಎರಡು ತಿಂಗಳ ಹಿಂದೆ ಜೋಡಿಗಳಿಬ್ಬರು ಅಗುಂಬೆಯ ಸಿರಿಮನೆ ಫಾಲ್ಸ್ ಗೆ ತೆರಳಿದ್ದರು.

ಇವರಿಬ್ಬರು ವಿಭಿನ್ನ ಕೋಮಿನವರೆಂದು ತಿಳಿದ ಸಂಘ ಪರಿವಾರದ ಕಾರ್ಯಕರ್ತರು ಶೃಂಗೇರಿ ಬಳಿ ಅಡ್ಡ ಹಾಕಿ ಅನೈತಿಕ ಪೊಲೀಸ್ ಗಿರಿ ನಡೆಸಿದ್ದರು.

ಬಳಿಕ ಇಬ್ಬರ ವಿಡಿಯೋ ಚಿತ್ರೀಕರಣ ಮಾಡಿದ್ದರು.

ಈ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ  ಬಗ್ಗೆ  ಯುವತಿಯ ಸಹೋದರ ಅನೈತಿಕ ಪೊಲೀಸ್ ಹಾಗೂ ವಿಡಿಯೋ ಆಗಿರುವುದರ ಕುರಿತಾಗಿ  ಕಾಪು ಪೊಲೀಸ್  ಠಾಣೆಯಲ್ಲಿ ದೂರು ದಾಖಲಿಸಿದ್ದು, ತನಿಖೆ ಮುಂದುವರೆದಿದೆ.

 

 

Continue Reading

DAKSHINA KANNADA

ಹಿಂದೂ ನಾಯಕರ ಫೇಸ್ಬುಕ್‌ ಅಕೌಂಟ್‌ ಹ್ಯಾಕ್‌- ಶ್ರೀಕಾಂತ್‌ ಶೆಟ್ಟಿ ಆರೋಪ..!

Published

on

ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಿದಕ್ಕೆ ಹಿಂದೂ ಜಾಗರಣ  ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ. 

ಉಡುಪಿ: ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಲಾಗಿದೆ.

ಆದರೆ ಇದನ್ನು ಸ್ವತಃ ಫೇಸ್ಬುಕ್‌ ಸಂಸ್ಥೆಯೇ ನಿಷ್ಕ್ರೀಯಗೊಳಿಸಿದೆಯೋ ಅಥವಾ ಯಾರದ್ದೋ ದೂರಿನ ಆಧಾರದಲ್ಲಿ ನಿಷ್ಕ್ರೀಯಗೊಳಿಸಲಾಗಿದೆಯೋ ಎನ್ನುವುದು ತಿಳಿದು ಬಂದಿಲ್ಲ.

ಆದರೆ ಇದು ಹಿಂದೂ ವಿಚಾರಧಾರೆಯ ಪ್ರಚಾರ ಮತ್ತು ಹೋರಾಟ ನಡೆಸುತ್ತಿರುವವರ ಮೇಲೆ ನಡೆದ ವ್ಯವಸ್ಥಿತ ಸೈಬರ್  ದಾಳಿಯಾಗಿದೆ ಎಂದು ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ.

ಸ್ವತಃ ಶ್ರೀಕಾಂತ್‌ ಶೆಟ್ಟಿ ಸಂಘಟನೆಯ ಇತರ ಪ್ರಚಾರಕರಾದ ಪ್ರವೀಣ್‌ ಯಕ್ಷಮಠ, ಕೆ ಟಿ ಉಲ್ಲಾಸ್‌, ಸುಕೃತ್‌ ಭಾರದ್ವಾಜ್‌, ಅರವಿಂದ ಕೋಟೇಶ್ವರ ಮೊದಲಾದ 20ಕ್ಕೂ ಹೆಚ್ಚು ಮಂದಿಯ ಫೇಸ್ಬುಕ್‌ ಪೇಜ್‌ಗಳನ್ನು ಡಿಲಿಟ್ ಮಾಡಲಾಗಿದೆ.

ನಾವು ಯಾರೂ ಸಾಮಾಜಿಕ ಸಾಮರಸ್ಯವನ್ನು ಕೆಡಿಸಿಲ್ಲ. ಗಲಭೆ ಸೃಷ್ಟಿಸಿಲ್ಲ. ಕೇವಲ ಹಿಂದೂಪರ ಹೋರಾಟ ಮಾಡುತ್ತಿರುವವರು.

ಆದ್ದರಿಂದ ಹಿಂದೂ ಚಳುವಳಿಯಲ್ಲಿ ಭಾಗವಹಿಸುತ್ತಿರುವವರನ್ನು ಹತ್ತಿಕ್ಕುವ ಹುನ್ನಾರ ಇದು ಎನ್ನುವುದು ಸಾಬೀತಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿರುವ ಕೆಲಸ ಇದು.

2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂವಾದಿ ಸಂಗಟನೆಳು ಮೋದಿ ಪರವಾಗಿ ಯಶಸ್ವಿ ಕೆಲಸ ಮಾಡಿದ್ದೆವು.

2024ರ ಚುನಾವಣೆಯಲ್ಲಿ ಮತ್ತೇ ಅದಾಗಬಾರದು ಎನ್ನುವ ಪೂರ್ವ ತಯಾರಿ ಇದಾಗಿದೆ ಎಂದವರು ಹೇಳಿದ್ದಾರೆ.

ಆದರೆ ಆರ್‌ಎಸ್‌ಎಸ್‌ನ ಭಾಗವಾಗಿರುವ ಹಿಂದು ಜಾಗರಣ ವೇದಿಕೆ ಸಾಮಾಜಿಕ ಜಾಲತಾಣಗಳನ್ನು ನಂಬಿಕೊಂಡಿರುವ ಫೇಸ್ಬುಕ್‌ ಉಳಿಯಲ್ಲ.

ಆನ್ ಗ್ರೌಂಡ್‌ ಜನರ ಮಧ್ಯೆ ಕೆಲಸ ಮಾಡವ ವೇದಿಕೆ.

ಈ ಫೇಸ್ಬುಕ್‌ ಖಾತೆಗಳ ನಿಷ್ಕ್ರೀಯ ಕೃತ್ಯವನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

Continue Reading

LATEST NEWS

Trending