Thursday, February 2, 2023

ಉಡುಪಿ : ಕುಸಿದು ಬಿದ್ದು ಇಹಲೋಕ ತ್ಯಜಿಸಿದ ರಂಗಭೂಮಿ ಕಲಾವಿದ ಕಾರ್ತಿಕ್ ಬ್ರಹ್ಮಾವರ..!

ಉಡುಪಿ : ಯುವ ರಂಗ ಭೂಮಿ ಕಲಾವಿದ ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಬ್ರಹ್ಮಾವರದ ಕುಮ್ರಗೋಡು ಗ್ರಾಮದ ಜಂಬಾಡಿಯ ಅಕ್ಕನ ಮನೆಯಲ್ಲಿ ದೈವ ದರ್ಶನ ಸಂದರ್ಭ ಈ ಘಟನೆ ನಡೆದಿದೆ.

ಇವರು ಸುಮಾರು 1 ತಿಂಗಳಿನಿಂದ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಏಕಾಎಕಿ ಕುಸಿದು ಬಿದ್ದರೆನ್ನಲಾಗಿದೆ.

ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಮೃತಪಟ್ಟರು.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಂಗಭೂಮಿ ಕಲಾವಿದರಾಗಿದ್ದ ಇವರು, ಮಂದಾರ ಬೈಕಾಡಿ, ಭೂಮಿಕಾ ರಂಗ ತಂಡ ಹಾರಾಡಿ, ದುರ್ಗಾ ಕಲಾ ತಂಡ ಸೇರಿದಂತೆ ವಿವಿಧ ತಂಡಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು, ಹಾಸ್ಯ ಹಾಗೂ ಕಿರುಚಿತ್ರಗಳಲ್ಲಿ ಅಭಿನಯಿಸಿದ್ದರು.

ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರು ಕಂಬಳದಲ್ಲಿ ನಟಿಯೊಂದಿಗೆ ಅಸಭ್ಯ ವರ್ತನೆ ಆರೋಪಕ್ಕೆ ದೇವರ ಮೊರೆ ಹೋದ ಸಮಿತಿ – “ಮಹಾಲಿಂಗೇಶ್ವರನ ಮಣ್ಣಿನಲ್ಲಾದ ಘಟನೆ ದೇವರೇ ನೋಡಿಕೊಳ್ಳಲಿ”..!

ಪುತ್ತೂರು: ಪುತ್ತೂರಿನಲ್ಲಿ ಜ.28ರ ಕಂಬಳದಲ್ಲಿ ನಡೆದಿದೆ ಎನ್ನಲಾದ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದ ಕಂಬಳ ಸಮಿತಿಯವರು ಶ್ರೀ ಮಹಾಲಿಂಗೇಶ್ವರ ದೇವರ ಮೊರೆ ಹೋಗಿದ್ದು, ದೇವರ ನಡೆಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ, ಏಕಾದಶ ರುದ್ರ...

ಪುತ್ತೂರು : ಪೋಳ್ಯದಲ್ಲಿ ಸ್ಕೂಟಿ- ಮಾರುತಿ ಓಮಿನಿ ಅಪಘಾತ – ಸವಾರ ಗಂಭೀರ..!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರವಲಯದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೋಳ್ಯದಲ್ಲಿ ವಾಹ ಅಫಘಾತ ಸಂಭವಿಸಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರವಲಯದ...

ಪ್ರೀತಿ ಕೊಲೆಯಲ್ಲಿ ಅಂತ್ಯ : ಬೆಂಗಳೂರಲ್ಲಿ ಕಿಡ್ನ್ಯಾಪ್, ಮರ್ಡರ್- ಚಾರ್ಮಾಡಿಯಲ್ಲಿ ಹೆಣ ಎಸೆದರು..!

ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು ಯುವಕನನ್ನು ಕೊಲೆ ಮಾಡಿ ಬಳಿಕ ಶವವನ್ನು ಚಾರ್ಮಾಡಿ ಘಾಟ್‌ನಲ್ಲಿ ಎಸೆದು ಹೋಗಿದೆ.ಚಿಕ್ಕಮಗಳೂರು : ಪ್ರೀತಿ ಪ್ರೇಮದ ವಿಚಾರದಲ್ಲಿ ಯುವಕನೊಬ್ಬನನ್ನು ಅಪಹರಣ ಮಾಡಿದ ತಂಡವೊಂದು...