Sunday, November 27, 2022

ಉಡುಪಿ: ಒಂಟಿ ಮಹಿಳೆ ಮನೆಯಲ್ಲಿ ಹಾಡ ಹಗಲೇ ಕಳವು ಪ್ರಕರಣ-ಆರೋಪಿ ಸಹಿತ 10ಗ್ರಾಂ ಚಿನ್ನ ವಶ

ಉಡುಪಿ: ಒಂಟಿ ಮಹಿಳೆ ಇದ್ದ ಸಮಯದಲ್ಲಿ ದರೋಡೆಕೋರರು ಹಗಲು ಸಮಯದಲ್ಲೇ ಒಳಪ್ರವೇಶಿಸಿ ಆಭರಣವನ್ನು ದೋಚಿಕೊಂಡು ಹೋಗಿದ್ದ ಬಗ್ಗೆ ದೂರು ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಪತ್ತೆ ಹಚ್ಚಿದ ಘಟನೆ ಘಟನೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಕನ್ನಾರು ಎಂಬಲ್ಲಿ ನಡೆದಿದೆ.

ಎಪ್ರಿಲ್ 1 ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ವಾಸು ಪೂಜಾರಿ ಮನೆಯಲ್ಲಿ ಅವರ ಹೆಂಡತಿ ಪ್ರೇಮ ಮನೆಯಲ್ಲಿ ಒಂಟಿಯಾಗಿದ್ದು ಮನೆಯ ಹೊರಗಡೆ ಪಾತ್ರೆ ತೊಳೆಯುವಾಗ ಮನೆ ಮನೆಯನ್ನು ಜಾಲಾಡಿ ಸುಮಾರು 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಅನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.

ಇದನ್ನು ಪ್ರೇಮ ತನ್ನ ಗಂಡನಿಗೆ ತಿಳಿಸಿ ಅದರಂತೆ ಬ್ರಹ್ಮಾವರ ಠಾಣೆಯಲ್ಲಿ ಹಗಲು ಕನ್ನ ಕಳವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನು ಬಿದ್ದ ಪೊಲೀಸರು ಬ್ರಹ್ಮಾವರ ಪೊಲೀಸ್‌‌ ವೃತ್ತ ನಿರೀಕ್ಷಕರಾದ ಅನಂತ ಪದ್ಮನಾಭ ರವರ ಮಾರ್ಗದರ್ಶನದಂತೆ ಪಿ.ಎಸ್.ಐ. ಶ್ರೀ ಗುರುನಾಥ ಬಿ ಹಾದಿಮನಿ ಹಾಗೂ ಪಿ.ಎಸ್.ಐ ಶ್ರೀಮತಿ ಮುಕ್ತಾಬಾಯಿ ರವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು.

ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಯಾವುದೇ ತಾಂತ್ರಿಕ ಸಹಾಯವಿಲ್ಲದೆ ಕೇವಲ ಪೊಲೀಸ್ ಸಂಪ್ರದಾಯಿಕ ವಿಧಾನದಲ್ಲಿ ಸಾರ್ವಜನಿಕರಿಂದ ತಳಮಟ್ಟದ ಮಾಹಿತಿ ಸಂಗ್ರಹಿಸಿ ಆರೋಪಿಯು ಕಳವು ಮಾಡಿದ ದಿವಸ ಧರಿಸಿದ ಬಟ್ಟೆಯ ಜಾಡನ್ನು ಹಿಡಿದು ಕೊನೆಗೂ ಆರೋಪಿಯನ್ನು ಪತ್ತೆ ಮಾಡಿ 50,000/- ರೂ ಬೆಲೆಬಾಳುವ ಚಿನ್ನದ ನೆಕ್ಲೇಸ್ ನ್ನು ವಶಪಡಿಸಿಕೊಂಡಿದ್ದಾರೆ .

ಈ ಮೂಲಕ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಪ್ರಕರಣ ಭೇಧಿಸಿದಂತಾಗಿದೆ.

ಸುರೇಶ್ (31) ಅಲಿಯಾಸ್ ಸೂರ್ಯ ಅಲಿಯಾಸ್ ಕಪಿ ಬಂಧಿತ ಆರೋಪಿ.

ಈತ ಮೂಲತಃ ಪೆಜಮಂಗೂರು ಗ್ರಾಮ ಪ್ರಗತಿ ನಗರ ಬ್ರಹ್ಮಾವರ ತಾಲೂಕುನವನಾಗಿದ್ದು, ಈ ಮೊದಲೇ ಈತ ತಾಮ್ರ , ಚಿನ್ನದ ಕಿವಿಯೋಲೆ , ಉಂಗುರ ಕಳವು ಮಾಡಿದ್ದು ಈತನ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಳ್ಳತನದ ಪ್ರಕರಣದ ದಾಖಲಾಗಿತ್ತು.

ಆರೋಪಿಯು ಕಾನೂನು ಸಂಘರ್ಷಗೊಳಗಾದ ಬಾಲಕನಾಗಿ 07 ವರ್ಷ ರಿಮ್ಯಾಂಡ್ ಹೋಮ್ ನಲ್ಲಿ ಶಿಕ್ಷೆ ಅನುಭವಿಸಿರುವುದು ತನಿಖೆಯಲ್ಲಿ ಕಂಡುಬಂದಿರುತ್ತದೆ. ಪ್ರಸ್ತುತ ಆರೋಪಿ ಬೆಂಗಳೂರಿನ ಬಿ.ಬಿಎಂ.ಪಿ.ಯಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿದ್ದಾನೆ.

ಬ್ರಹ್ಮಾವರ ಪೊಲೀಸ್ ಠಾಣಾ ಮೇಲಿನ ಪ್ರಕರಣದಲ್ಲಿ ಉಡುಪಿ ಜಿಲ್ಲಾ ಮಾನ್ಯ ಪೊಲೀಸ್‌ ಅಧೀಕ್ಷಕರಾದ ವಿಷ್ಣುವರ್ಧನ ಐಪಿಎಸ್‌‌, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಶ್ರೀ ಸಿದ್ದಲಿಂಗಪ್ಪ ಕೆ.ಎಸ್‌.ಪಿ.ಎಸ್‌‌‌ ರವರ ಮಾರ್ಗದರ್ಶನದಂತೆ ಶ್ರೀ ಸುಧಾಕರ‌ ನಾಯ್ಕ, ಪೊಲೀಸ್‌ ಉಪಾಧೀಕ್ಷಕರು,

ಉಡುಪಿ ಉಪವಿಭಾಗ ಹಾಗೂ ಶ್ರೀ ಅನಂತ ಪದ್ಮನಾಭ, ಬ್ರಹ್ಮಾವರ ಪೊಲೀಸ್‌‌ ವೃತ್ತ ನಿರೀಕ್ಷಕರರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬ್ರಹ್ಮಾವರ ಪೊಲೀಸ್‌‌ ಉಪನಿರೀಕ್ಷಕರಾದ ಗುರುನಾಥ ಬಿ ಹಾದಿಮನಿ

ಹಾಗೂ ತನಿಖೆ ಪಿ.ಎಸ್.ಐ ಶ್ರೀಮತಿ ಮುಕ್ತಾಬಾಯಿ ಹಾಗೂ ಪ್ರೊಬೆಷನರಿ ಪಿ.ಎಸ್.ಐ. ಸುಬ್ರಹ್ಮಣ್ಯ ದೇವಾಡಿಗ ಹಾಗೂ ಸಿಬ್ಬಂದಿಗಳಾದ ವೆಂಕಟರಮಣ ದೇವಾಡಿಗ , ಪ್ರವೀಣ್‌ ಶೆಟ್ಟಿಗಾರ್‌ , ರಾಘವೇಂದ್ರ ಕಾರ್ಕಡ , ದಿಲೀಪ್‌ ಕುಮಾರ್‌ , ಅಜ್ಮಲ್‌ ಮತ್ತು ಚಾಲಕ ಅಣ್ಣಪ್ಪ ಇವರ ಕಾರ್ಯವನ್ನು ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಪಿಕಪ್ ವಾಹನಕ್ಕೆ ಗುದ್ದಿದ ಕಾರು..

ಬಂಟ್ವಾಳ: ವಿರುದ್ಧ ದಿಕ್ಕಿನಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿ ಬಳಿಕ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿ ಗೋಡೆ ಜರಿದು ಬಿದ್ದಂತಹ ಘಟನೆ ದಕ್ಷಿಣ ಕನ್ನಡ...

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...