ಉಡುಪಿ: ಒಂಟಿ ಮಹಿಳೆ ಇದ್ದ ಸಮಯದಲ್ಲಿ ದರೋಡೆಕೋರರು ಹಗಲು ಸಮಯದಲ್ಲೇ ಒಳಪ್ರವೇಶಿಸಿ ಆಭರಣವನ್ನು ದೋಚಿಕೊಂಡು ಹೋಗಿದ್ದ ಬಗ್ಗೆ ದೂರು ದಾಖಲಾಗಿದ್ದು ಆರೋಪಿಗಳನ್ನು ಪೊಲೀಸರು 24 ಗಂಟೆಯೊಳಗೆ ಪತ್ತೆ ಹಚ್ಚಿದ ಘಟನೆ ಘಟನೆ ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಕನ್ನಾರು ಎಂಬಲ್ಲಿ ನಡೆದಿದೆ.
ಎಪ್ರಿಲ್ 1 ರಂದು ಮಧ್ಯಾಹ್ನ ಸುಮಾರು 1 ಗಂಟೆಗೆ ವಾಸು ಪೂಜಾರಿ ಮನೆಯಲ್ಲಿ ಅವರ ಹೆಂಡತಿ ಪ್ರೇಮ ಮನೆಯಲ್ಲಿ ಒಂಟಿಯಾಗಿದ್ದು ಮನೆಯ ಹೊರಗಡೆ ಪಾತ್ರೆ ತೊಳೆಯುವಾಗ ಮನೆ ಮನೆಯನ್ನು ಜಾಲಾಡಿ ಸುಮಾರು 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಅನ್ನು ಕಳವು ಮಾಡಿಕೊಂಡು ಹೋಗಿದ್ದಾರೆ.
ಇದನ್ನು ಪ್ರೇಮ ತನ್ನ ಗಂಡನಿಗೆ ತಿಳಿಸಿ ಅದರಂತೆ ಬ್ರಹ್ಮಾವರ ಠಾಣೆಯಲ್ಲಿ ಹಗಲು ಕನ್ನ ಕಳವು ಪ್ರಕರಣ ದಾಖಲಾಗಿತ್ತು.
ಪ್ರಕರಣದ ಬೆನ್ನು ಬಿದ್ದ ಪೊಲೀಸರು ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರಾದ ಅನಂತ ಪದ್ಮನಾಭ ರವರ ಮಾರ್ಗದರ್ಶನದಂತೆ ಪಿ.ಎಸ್.ಐ. ಶ್ರೀ ಗುರುನಾಥ ಬಿ ಹಾದಿಮನಿ ಹಾಗೂ ಪಿ.ಎಸ್.ಐ ಶ್ರೀಮತಿ ಮುಕ್ತಾಬಾಯಿ ರವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು.
ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಯಾವುದೇ ತಾಂತ್ರಿಕ ಸಹಾಯವಿಲ್ಲದೆ ಕೇವಲ ಪೊಲೀಸ್ ಸಂಪ್ರದಾಯಿಕ ವಿಧಾನದಲ್ಲಿ ಸಾರ್ವಜನಿಕರಿಂದ ತಳಮಟ್ಟದ ಮಾಹಿತಿ ಸಂಗ್ರಹಿಸಿ ಆರೋಪಿಯು ಕಳವು ಮಾಡಿದ ದಿವಸ ಧರಿಸಿದ ಬಟ್ಟೆಯ ಜಾಡನ್ನು ಹಿಡಿದು ಕೊನೆಗೂ ಆರೋಪಿಯನ್ನು ಪತ್ತೆ ಮಾಡಿ 50,000/- ರೂ ಬೆಲೆಬಾಳುವ ಚಿನ್ನದ ನೆಕ್ಲೇಸ್ ನ್ನು ವಶಪಡಿಸಿಕೊಂಡಿದ್ದಾರೆ .
ಈ ಮೂಲಕ ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಪ್ರಕರಣ ಭೇಧಿಸಿದಂತಾಗಿದೆ.
ಸುರೇಶ್ (31) ಅಲಿಯಾಸ್ ಸೂರ್ಯ ಅಲಿಯಾಸ್ ಕಪಿ ಬಂಧಿತ ಆರೋಪಿ.
ಈತ ಮೂಲತಃ ಪೆಜಮಂಗೂರು ಗ್ರಾಮ ಪ್ರಗತಿ ನಗರ ಬ್ರಹ್ಮಾವರ ತಾಲೂಕುನವನಾಗಿದ್ದು, ಈ ಮೊದಲೇ ಈತ ತಾಮ್ರ , ಚಿನ್ನದ ಕಿವಿಯೋಲೆ , ಉಂಗುರ ಕಳವು ಮಾಡಿದ್ದು ಈತನ ಮೇಲೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಳ್ಳತನದ ಪ್ರಕರಣದ ದಾಖಲಾಗಿತ್ತು.
ಆರೋಪಿಯು ಕಾನೂನು ಸಂಘರ್ಷಗೊಳಗಾದ ಬಾಲಕನಾಗಿ 07 ವರ್ಷ ರಿಮ್ಯಾಂಡ್ ಹೋಮ್ ನಲ್ಲಿ ಶಿಕ್ಷೆ ಅನುಭವಿಸಿರುವುದು ತನಿಖೆಯಲ್ಲಿ ಕಂಡುಬಂದಿರುತ್ತದೆ. ಪ್ರಸ್ತುತ ಆರೋಪಿ ಬೆಂಗಳೂರಿನ ಬಿ.ಬಿಎಂ.ಪಿ.ಯಲ್ಲಿ ಕಸ ಗುಡಿಸುವ ಕೆಲಸ ಮಾಡಿಕೊಂಡಿದ್ದಾನೆ.
ಬ್ರಹ್ಮಾವರ ಪೊಲೀಸ್ ಠಾಣಾ ಮೇಲಿನ ಪ್ರಕರಣದಲ್ಲಿ ಉಡುಪಿ ಜಿಲ್ಲಾ ಮಾನ್ಯ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ ಐಪಿಎಸ್, ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಸಿದ್ದಲಿಂಗಪ್ಪ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಂತೆ ಶ್ರೀ ಸುಧಾಕರ ನಾಯ್ಕ, ಪೊಲೀಸ್ ಉಪಾಧೀಕ್ಷಕರು,
ಉಡುಪಿ ಉಪವಿಭಾಗ ಹಾಗೂ ಶ್ರೀ ಅನಂತ ಪದ್ಮನಾಭ, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರರವರ ನಿರ್ದೇಶನದಂತೆ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕರಾದ ಗುರುನಾಥ ಬಿ ಹಾದಿಮನಿ
ಹಾಗೂ ತನಿಖೆ ಪಿ.ಎಸ್.ಐ ಶ್ರೀಮತಿ ಮುಕ್ತಾಬಾಯಿ ಹಾಗೂ ಪ್ರೊಬೆಷನರಿ ಪಿ.ಎಸ್.ಐ. ಸುಬ್ರಹ್ಮಣ್ಯ ದೇವಾಡಿಗ ಹಾಗೂ ಸಿಬ್ಬಂದಿಗಳಾದ ವೆಂಕಟರಮಣ ದೇವಾಡಿಗ , ಪ್ರವೀಣ್ ಶೆಟ್ಟಿಗಾರ್ , ರಾಘವೇಂದ್ರ ಕಾರ್ಕಡ , ದಿಲೀಪ್ ಕುಮಾರ್ , ಅಜ್ಮಲ್ ಮತ್ತು ಚಾಲಕ ಅಣ್ಣಪ್ಪ ಇವರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಮಂಗಳೂರು/ಮುಂಬೈ: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರ ಖಾತೆಯೊಂದಿಗೆ ಆರ್ ಅಶ್ವಿನ್ ವಿಚಿತ್ರವಾದ ಸಂವಹನ ನಡೆಸಿದ್ದರು.
ಹಿರಿಯ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಇತ್ತೀಚೆಗೆ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದರು. ಈ ಬಗ್ಗೆ ಹಿರಿಯ ಕ್ರಿಕೆಟಿಗರು ಅಪಸ್ವರಗಳನ್ನು ತೆಗೆದಿದ್ದರು. ಆದರೆ ಅಶ್ವಿನ್ ಅವರು ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೇಹ್ ಅವರ ಖಾತೆಯೊಂದಿಗೆ ವಿಚಿತ್ರವಾದ ಸಂವಹನ ನಡೆಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ನಿನ್ನೆ ಮುಕ್ತಾಯಗೊಂಡ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಈ ಸರಣಿಯನ್ನು 1-3 ರಿಂದ ಸೋತಿದರಿಂದ್ದ, @Nishitha018 ಎಂಬ ಎಕ್ಸ್ ನಲ್ಲಿನ ಬಳಕೆದಾರರು ಮೈಕ್ರೋ ಬ್ಲಾಗಿಂಗ್ ಪ್ಲಾಟ್ ಫಾರ್ಮ್ ಬಳಸಿ ಪ್ರೋಫೈಲ್ ನಲ್ಲಿ ರಿತಿಕಾ ಅವರ ಹೆಸರು ಮತ್ತು ಫೋಟೋ ಎಡಿಟ್ ಮಾಡಿ ಹಾಕಿದ್ದರು. ಇದರಲ್ಲಿ, “ಆಸ್ಟ್ರೇಲಿಯಾದವರು ನಮ್ಮನ್ನು ಸ್ವಚ್ಛಗೊಳಿಸಬಹುದು ಎಂದು ಭಾವಿಸಿದ್ದಾರೆ” ಎಂದು ಕಾಮೆಂಟ್ ಹಾಕಿದ್ದಾರೆ.
ಇದು ರಿತಿಕಾ ಅವರ ಅಧಿಕೃತ ಖಾತೆ ಎಂದು ತಿಳಿದು, “ಹಾಯ್ ರಿತಿಕಾ, ಹೇಗಿದ್ದೀರಿ? ನಿಮ್ಮ ಚಿಕ್ಕ ಮಗುವಿಗೆ ಮತ್ತು ಕುಟುಂಬಕ್ಕೆ ನಮಸ್ಕಾರಗಳು”, ಎಂದು ಅಶ್ವಿನ್ ಪ್ರತಿಕ್ರಿಯಿಸಿದ್ದಾರೆ.
ಇದಕ್ಕೆ ರಿತಿಕಾ ಅವರ ಹೆಸರಿನ ಬಳಕೆದಾರ, “ನಾನು ಚೆನ್ನಾಗಿದ್ದೇನೆ ಆಶ್ವಿನ್ ಅಣ್ಣ” ಎಂದು ಬಳಕೆದಾರರು ಉತ್ತರಿಸಿದರು.
ಇದರಿಂದ ಅನುಮಾನಗೊಂಡ ಅಶ್ವಿನ್ ತನ್ನ ಸಂದೇಶವನ್ನು ತಕ್ಷಣ ಅಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಲಿಲ್ಲ. ಆದರೆ ಅಶ್ವಿನ್ ಅವರು ಮಾಡಿದ ಕಾಮೆಂಟ್ ಈಗ ಸಖತ್ ವೈರಲ್ ಆಗುತ್ತಿದ್ದು, ನೆಟ್ಟಿಗರು ಸಖತ್ ಟಾಂಗ್ ಕೊಡುತ್ತಿದ್ದಾರೆ.
ಇತ್ತೀಚೆಗೆ ರೋಹಿತ್ ಶರ್ಮಾ ದಂಪತಿಗಳು ನವೆಂಬರ್ ನಲ್ಲಿ ‘ಅಹಾನ್’ ಎಂಬ ಗಂಡು ಮಗುವನ್ನು ಬರಮಾಡಿಕೊಂಡರು. ಇದರಿಂದ ಪರ್ತ್ ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ದದ ಟೆಸ್ಟ್ ಸರಣಿಯ ಆರಂಭಿಕ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ಅವರ ಅಲಭ್ಯತೆಯಿಂದಲೂ ಭಾರತ ತಂಡ ಪರ್ತ್ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿತ್ತು.
ಕೊನೆಯ ನಿರ್ಣಾಯಕ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಅವರು ತಮ್ಮ ಕಳಪೆ ಫಾರ್ಮ್ ನಿಂದಾಗಿ ತಂಡದಿಂದ ಹೊರಗುಳಿಯಲು ನಿರ್ಧರಿಸಿದರು. ಆದಾಗ್ಯೂ ಈ ಪಂದ್ಯದಲ್ಲಿ ಭಾರತ 6 ವಿಕೆಟ್ ಗಳಿಂದ ಸೋತಿದ್ದು, ಸರಣಿಯನ್ನು 1-3 ಅಂತರದಿಂದ ಕಳೆದುಕೊಂಡಿತು.
ಮಂಗಳೂರು/ಚಾಮರಾಜನಗರ : ಇತ್ತೀಚೆಗೆ ಹೃದಯಾ*ಘಾತ ಪ್ರಕರಣಗಳು ಹೆಚ್ಚುತ್ತಿವೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರೂ ಹೃದಯಾ*ಘಾತಕ್ಕೆ ಬ*ಲಿಯಾಗುತ್ತಿದ್ದಾರೆ. ಇದೀಗ ಮತ್ತೊಂದು ಪ್ರಕರಣ ನಡೆದಿದೆ.
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿ*ದ್ದು ಮೂರನೇ ತರಗತಿ ವಿದ್ಯಾರ್ಥಿನಿ ಇಹಲೋಕ ತ್ಯಜಿಸಿರುವ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಮೃ*ತ ಬಾಲಕಿ.
ತೇಜಸ್ವಿನಿ ಎಂದಿನಂತೆ ಶಾಲೆಗೆ ಹೋಗಿದ್ದು, ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಿದ್ದಳು. ಈ ವೇಳೆ ಕುಸಿದುಬಿದ್ದಿದ್ದಾಳೆ. ಅಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ. ತಕ್ಷಣ ಆಕೆಯನ್ನು ಶಾಲಾ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟರಲ್ಲಾಗಲೇ ತೇಜಸ್ವಿನಿ ಕೊ*ನೆಯುಸಿರೆಳೆದಿದ್ದಳು ಎಂದು ತಿಳಿದುಬಂದಿದೆ. ಇದ್ದೊಬ್ಬ ಮಗಳನ್ನು ಕಳೆದುಕೊಂಡ ತಂದೆ – ತಾಯಿ ಶೋಕಸಾಗರದಲ್ಲಿ ಮುಳುಗಿದ್ದಾರೆ.
ಮಂಗಳೂರು : ಹಿರಿಯ ವಿದ್ಯಾರ್ಥಿಗಳ ಸಂಘದ ‘ದಶಮ ಸಂಭ್ರಮ’ ಕಾರ್ಯಕ್ರಮವು ಡಾ. ಪಿ. ದಯಾನಂದ ಪೈ -ಪಿ.ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿಯಲ್ಲಿ ಜನವರಿ 3 ರಂದು ನಡೆದಿದೆ.
ಹಿರಿಯ ವಿದ್ಯಾರ್ಥಿಗಳ ಸಂಘದ ದಶಮಾನೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆದಿದ್ದು, ಲೋಗೋ ಅನಾವರಣ ಹಾಗೂ ಸ್ತಾತಕೋತ್ತರ ವಿದ್ಯಾರ್ಥಿಗಳಿಗೆ ನೆಟ್/ಕೆ.ಸೆಟ್ ಪರೀಕ್ಷೆಯ ಪೂರ್ವ ತಯಾರಿಯನ್ನು ಏರ್ಪಡಿಸಲಾಗಿತ್ತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿನ ಸಮಾಜ ಶಾಸ್ತ್ರ ವಿಭಾಗದ ಸಹ ಪ್ರಾದ್ಯಪಕ, ಮಂಗಳೂರು ವಿಶ್ವವಿದ್ಯಾನಿಲದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾಗಿರುವ ಡಾ. ಶೇಷಪ್ಪ ಕೆ. ಲೋಗೋ ಅನವಾರಣಗೊಳಿಸುವ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಗಾಂದಿನಗರ ಮಂಗಳೂರು ಇಲ್ಲಿನ ವಾಣಿಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಕರಾಗಿರುವ ಶ್ರೀ. ಯತೀನ್ ಸಂಪನ್ಮೂಲ ವ್ಯಕ್ತಿಯಾಗಿ ಹಾಜರಿದ್ದರು. ದಯಾನಂದ ಕಾಲೇಜಿನ ಪ್ರಾಂಶುಪಾಲರಾದ ಫ್ರೊ. ಜಯಕರ ಭಂಡಾರಿ ಎಂ. ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಐಕ್ಯೂಎಸಿಯ ಸಂಯೋಜಕ ದೇವಿಪ್ರಸಾದ್, ಸ್ತಾತಕೋತ್ತರ ವಿಭಾಗದ ಸಂಯೋಜಕ ಡಾ. ಲೋಕೇಶನಾಥ್, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕರಾಗಿರುವ ನಾಗರಾಜ್ ಎಂ. , ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ತುಷಾರ್ ಕೆ. ವೇದಿಯಲ್ಲಿ ಉಪಸ್ಥಿತರಿದ್ದರು.