Connect with us

LATEST NEWS

ಉಡುಪಿ: ಶಾಲಾ ಕಾಲೇಜುಗಳಲ್ಲಿ ಕಳವು ಪ್ರಕರಣ-ಇಬ್ಬರ ಬಂಧನ, ಬೈಕು & 2 ಮೊಬೈಲ್ ಹಾಗೂ 10 ಸಾವಿರ ನಗದು ವಶ

Published

on

ಉಡುಪಿ: ರಾಜ್ಯದ ವಿವಿಧ ಜಿಲ್ಲೆಗಳ ಶಾಲಾ ಕಾಲೇಜುಗಳಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಡುಪಿಯ ಕುಂದಾಪುರ ಕೋಟ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ರಾಜ್ಯದ ಸೇಲಂ ನಿವಾಸಿ ಕುಮಾರಸ್ವಾಮಿ (29) ಹಾಗೂ ಪಡುಬಿದ್ರಿ ಹೆಜಮಾಡಿ ಎಸ್‌ಎಸ್ ರಸ್ತೆಯ ಜಾಹೀದ ಸಿನಾನ್ (32) ಬಂಧಿತ ಆರೋಪಿಗಳಾಗಿದ್ದಾರೆ.


ಬಂಧಿತರಿಂದ ಒಂದು ಬೈಕು, ಎರಡು ಮೊಬೈಲ್ ಹಾಗೂ 10,000ರೂ. ನಗದು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿಸಲಾಗಿದೆ.

ನವೆಂಬರ್ 21ರಂದು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಆವರ್ಸೆ ಗ್ರಾಮದ ಬಳಿ ಬೈಕ್‌ನಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ಇವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇವರು 4 ಜಿಲ್ಲೆಗಳ 37 ಕಡೆ ಕಳ್ಳತನ ನಡೆಸಿದ್ದು ಉಡುಪಿ ಜಿಲ್ಲೆಯ ಬೈಂದೂರು, ಕೊಲ್ಲೂರು, ಶಂಕರನಾರಾಯಣ, ಕುಂದಾಪುರ, ಬ್ರಹ್ಮಾವರ, ಹಿರಿಯಡ್ಕ, ಉಡುಪಿ ನಗರ, ಮಲ್ಪೆ, ಕಾರ್ಕಳ, ಪಡುಬಿದ್ರೆ ಠಾಣಾ ವ್ಯಾಪ್ತಿಯ ಒಟ್ಟು 27 ಕಡೆ ಶಾಲಾ ಕಾಲೇಜುಗಳಿಗೆ ನುಗ್ಗಿ ಕಳ್ಳತನ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಠಾಣೆಯಲ್ಲಿ 2 ಪ್ರಕರಣ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ರಿಪ್ಪನಪೇಟೆ, ನಗರ ಠಾಣೆಗಳಲ್ಲಿ 6 ಪ್ರಕರಣ, ಉತ್ತರ ಕನ್ನಡ ಜಿಲ್ಲೆಯ ಮುಡೇಶ್ವರ ಠಾಣೆಯಲ್ಲಿ 2 ಪ್ರಕರಣಗಳನ್ನು ಪೊಲೀಸರು ಆರೋಪಿಗಳನ್ನು ಬಂಧಿಸಿ ಎಲ್ಲ ಪ್ರಕರಣಗಳನ್ನು ಭೇದಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

 

DAKSHINA KANNADA

ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!

Published

on

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

DAKSHINA KANNADA

Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

Published

on

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.

ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.

ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.

 

 

Continue Reading

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

LATEST NEWS

Trending