Connect with us

    Ancient Mangaluru

    ಉಡುಪಿ: ಅಂಗಡಿಗಳ ಬೀಗ ಮುರಿದು ನಗದು ದೋಚಿ ಪರಾರಿಯಾದ ಕಳ್ಳ-ಪ್ರಕರಣ ದಾಖಲು

    Published

    on

    ಉಡುಪಿ: ಅಂಗಡಿಗಳ ಬೀಗ ಮುರಿದು ಒಳನುಗ್ಗಿದ ಕಳ್ಳನೊಬ್ಬ ನಗ – ನಗದು ದೋಚಿ ಪರಾರಿಯಾದ ಘಟನೆ ಉಡುಪಿ ಕಾಪುವಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಬಳಿ ನಡೆದಿದ್ದು,ಕಳವು ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸರೆಯಾಗಿದೆ.


    ಉಚ್ಚಿಲದ ಮಹಮ್ಮದ್ ರಫೀಕ್ ರವರ ಸೈಬರ್ ಕೆಫೆ, ಹೋಟೆಲ್ ಸ್ಪೈಸ್, ತವಕ್ಕಲ್ ಬೇಕರಿ, ಶಶಿ ಲಂಚ್ ಹೋಮ್ ನ ಬೀಗ ಮುರಿದು ಒಳ ನುಗ್ಗಿದ ಕಳ್ಳ ಹಣ ದೋಚಿದ್ದಾನೆ.


    ಇಂದು ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಸ್ಕೂಟರಿನಲ್ಲಿ ಬಂದ ಕಳ್ಳ ಶಟರ್ ಮುರಿದು ಒಳಗೆ ಹೊಕ್ಕಿದ್ದಾನೆ, ಕೇವಲ ಹಣ ಮಾತ್ರ ಕಳ್ಳತನ ಮಾಡಿದ್ದಾನೆ.


    ಸೈಬರ್ ನಲ್ಲಿ ಲಕ್ಷಾಂತರ ಮೌಲ್ಯದ ಲ್ಯಾಪ್ಟಾಪ್ಇದ್ದು, ಅದನ್ನು ಮುಟ್ಟಿಲ್ಲ. ಡ್ರಾವರ್ ಬೇಗ ಮುರಿದು ಕಳ್ಳತನ ನಡೆಸಿದ್ದಾನೆ.


    ಹೆಲ್ಮೆಟ್ ಮತ್ತು ಜಾಕೆಟ್ ಧರಿಸಿದ ಯುವಕ ಬರುವ ಮತ್ತು ಹೋಗುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


    ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Ancient Mangaluru

    ಮೇ.10 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನೆ

    Published

    on

    ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನಾ ಸಮಾರಂಭ ಮೇ 10 ರಂದು ಮಧ್ಯಾಹ್ನ 12 ಗಂಟೆಗೆ ಮುಲ್ಕಿಯ ಲಘುವಿ ಕಾಂಪ್ಲೆಕ್ಸ್ ಮುಖ್ಯರಸ್ತೆ ಪಕ್ಷಿಕೆರೆಯಲ್ಲಿ ನಡೆಯಲಿದೆ.

    ಮುಲ್ಕಿ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

    ಪಕ್ಷಿಕೆರೆ ಸಂತ ಜುದರ ಪುಣ್ಯಕ್ಷೇತ್ರ ಧರ್ಮಗುರು ಅತಿ ವಂದನೀಯ ಗುರುಗಳು ಮೆಲ್ವಿನ್ ನೊರೊಹ್ನಾ ದ್ವೀಪ ಪ್ರಜ್ವಲಿಸಲಿದ್ದಾರೆ. ಪಕ್ಷಿಕೆರೆ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀ ಕೆ.ಸೀತಾರಾಮ್ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಪಕ್ಷಿಕೆರೆ, ಎಸ್ ಕೋಡಿ, ಬಿಲ್ಲವ ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

    ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

    ಸಮಾಜಸೇವಕ ಧನಂಜಯ ಶೆಟ್ಟಿಗಾರ್ ಇ-ಮುದ್ರಾಂಕ ಸೇವೆಗೆ, ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಆವರ್ತನ ಠೇವಣಿಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ವರಿಗೂ ಆದರದ ಸ್ವಾಗತ ಕೋರಲಾಗಿದೆ.

    Continue Reading

    Ancient Mangaluru

    ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

    Published

    on

    ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

    ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

    ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


    ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

    ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

    ಎಸ್.ಎಂ.ಎಸ್ ಮೂಲಕ ಮಾಹಿತಿ :

    ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

    Continue Reading

    Ancient Mangaluru

    ನೀರಿನ ಅಭಾವ ತಪ್ಪಿಸಲು ಟ್ಯಾಂಕರ್‌ ಮಾನಿಟರಿಂಗ್‌ ಆಪ್‌ ಅನುಷ್ಠಾನ-ಯು.ಟಿ ಖಾದರ್‌

    Published

    on

    ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್‌ ಮಾನಿಟರಿಂಗ್‌ ಆಪ್‌ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್‌ ಹೇಳಿದ್ದಾರೆ.

    ಅವರು ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಅಧಿಕಾರಿಗಳು , ಅಧ್ಯಕ್ಷರು, ಉಪಾಧ್ಯಕ್ಷರು , ಉಳ್ಳಾಲ ತಾಲೂಕು ತಹಶೀಲ್ದಾರ್‌ಸಮ್ಮುಖದಲ್ಲಿ ಹಮ್ಮಿಕೊಂಡ ಕುಡಿಯುವ ನೀರು ಕುರಿತ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು “ಮಾರ್ಚ್‌, ಎಪ್ರಿಲ್‌, ಮೇ ತಿಂಗಳಲ್ಲಿ ಮಂಗಳೂರು ಕ್ಷೇತ್ರದ ಜನತೆಗೆ ಕುಡಿಯುವ ನೀರಿನ ಯೋಜನೆಗೆ ತೊಂದರೆಯಾಗದಂತೆ ಅಧಿಕಾರಿಗಳು, ಪಿಡಿಓ, ಸೆಕ್ರೆಟರಿಗಳು ಪಂಚಾಯಿತಿ ಅಧ್ಯಕ್ಷರು , ಗ್ರಾಮದ ಹಿರಿಯರನ್ನು ಕ್ರೂಢೀಕರಿಸಿಕೊಂಡು ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ. ಕಳೆದ ವರ್ಷ ಯಾವ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿದೆ ಅನ್ನುವ ಕುರಿತು ವರದಿಯನ್ನು ಅಧಿಕಾರಿಗಳಿಂದ ಪಡೆಯಲಾಗಿದೆ.

    ಆ ಭಾಗಗಳಲ್ಲಿ ಪ್ರಸಕ್ತ ವರ್ಷ ತೊಂದರೆಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆ ಹಾಗೂ ಅಧಿಕಾರಿಗಳು ಪೂರ್ವಭಾವಿಯಾಗಿ ತಯಾರಿರಬೇಕು ಅನ್ನುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಮೊದಲ ಪ್ರಯತ್ನವಾಗಿ ಕುಡಿಯುವ ನೀರಿನ ಟ್ಯಾಂಕರುಗಳಿಗೆ ಮಾನಿಟರಿಂಗ್‌ಆಪ್‌ ಯೋಜನೆಯನ್ನು ರೂಪಿಸಲಾಗಿದೆ. ಅದರ ಸಾಧಕ ಬಾಧಕ ಹಾಗೂ ತಾಂತ್ರಿಕ ವಿಚಾರಗಳ ಕುರಿತು ಅಧಿಕಾರಿ ವರ್ಗದವರಿಗೆ ಅರಿಯಲು ಪ್ರಾತ್ಯಕ್ಷಿಕೆ ಹಾಗೂ ತರಬೇತಿ ನೀಡಲು ಸೂಚಿಸಲಾಗಿದೆ. ಕ್ಷೇತ್ರದಲ್ಲಿ ಸಮಗ್ರವಾಗಿ ಜಾರಿಯಾದಲ್ಲಿ ರಾಜ್ಯದಲ್ಲಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ರಾಜ್ಯದಾದ್ಯಂತ ನೀರಿನ ಅಭಾವ ತಪ್ಪಿಸಲು ಪ್ರಾಮಾಣಿಕ ಪ್ರಯತ್ನವನ್ನು ಕೈಗೊಳ್ಳಲಾಗುವುದು. ಕ್ಷೇತ್ರದಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಗೆ 200 ಕೋಟಿ ರೂ. ಅನುದಾನ ಬಿಡುಗಡೆಯಾಗುವ ಕೊನೆಯ ಹಂತದಲ್ಲಿದೆ.

    ಉಳ್ಳಾಲ ನಗರ ವ್ಯಾಪ್ತಿಯ ಕೆಲಸ ಪೂರ್ಣಗೊಂಡರೂ, ಗ್ರಾಮೀಣ ಮಟ್ಟಕ್ಕೆ ಎರಡು ವರ್ಷಗಳಲ್ಲಿ ಅನುದಾನ ಬಿಡುಗಡೆಯಾಗಲಿದೆ. ಟೆಂಡರ್‌ಪ್ರಕ್ರಿಯೆ ನಡೆದು ಎರಡು ವರ್ಷ ಬೇಕಾಗುತ್ತದೆ. ಆನಂತರ ನೀರಿನ ವ್ಯವಸ್ಥೆ ಆಗಲಿದೆ. ಗ್ರಾಮ ಪಂಚಾಯತ್ ನವರು ವರ್ಷಕ್ಕೆ 12 ಲಕ್ಷ ನೀರಿಗಾಗಿ ಗ್ರಾ.ಪಂ.ನಿಂದ ಕೊಡುವ ಬದಲು ಟ್ಯಾಂಕರ್‌ ಖರೀದಿಗೆ ಕೇಳಿಕೊಂಡಿದ್ದಾರೆ. ಆದರೆ ಸರಕಾರದಿಂದ ಟ್ಯಾಂಕರ್‌ ಬಾಡಿಗೆ ಪಡೆಯಲು ಮಾತ್ರ ಅವಕಾಶವಿದೆ. ಕರಾರು ಪತ್ರದಂತೆ ಟ್ಯಾಂಕರ್‌ಅನ್ನು ಸದ್ಯಕ್ಕೆ ನೀಡಬಹುದು. ಮುಂದೆಯೂ ಸಮಸ್ಯೆ ಮುಂದುವರಿದಲ್ಲಿ ರಾಜ್ಯದ ಸಚಿವರುಗಳನ್ನು ಚರ್ಚಿಸಲಾಗುವುದು ಎಂದರು.ಜಲಯೋಜನೆ, ಕಂದಾಯ , ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್‌ಕುಡಿಯುವ ನೀರಿನ ಯೋಜನೆಯಲ್ಲಿ ಕಾರ್ಯಾಚರಿಸಲಿದೆ. ಇಲಾಖೆಗಳ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭ ತಹಶೀಲ್ದಾರ್‌ಪುಟ್ಟರಾಜು ಡಿ, ಉಪತಹಶೀಲ್ದಾರ್‌ನವನೀತ್‌ಮಾಳವ, ಕಂದಾಯ ನಿರೀಕ್ಷಕ ಪ್ರಮೋದ್‌ಕುಮಾರ್‌, ಕೃಷಿ ಇಲಾಖೆ ಅಧಿಕಾರಿ ವೀಣಾ ರೈ, ಮಂಗಳೂರು ಕ್ಷೇತ್ರ ವ್ಯಾಪ್ತಿಯ ಎಲ್ಲಾ ಗ್ರಾ.ಪಂ ಅಧ್ಯಕ್ಷರು ಭಾಗವಹಿಸಿದ್ದರು.

    Continue Reading

    LATEST NEWS

    Trending