Connect with us

    LATEST NEWS

    ಉಡುಪಿ : ನಾಳೆ(ಜು.9) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

    Published

    on

    ಉಡುಪಿ : ಉಡುಪಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹವಾಮಾನ ಇಲಾಖೆ ಈಗಾಗಲೇ ರೆಡ್ ಅಲರ್ಟ್ ಘೋಷಿಸಿದೆ. ಮುಂಜಾಗೃತಾ ಕ್ರಮವಾಗಿ ನಾಳೆ(ಜು.9) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.


    ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.

    ಇದನ್ನೂ ಓದಿ : ಮುಟ್ಟಿನ ರಜೆ ಕಡ್ಡಾಯಗೊಳಿಸಲು ಸುಪ್ರೀಂ ನಕಾರ

    DAKSHINA KANNADA

    ಮಮ್ತಾಜ್ ಅಲಿ ಜೀವಂತವಿದ್ದಾರಾ ? ಮುಳುಗುತಜ್ಙ ಈಶ್ವರ ಮಲ್ಪೆ ತಂಡದವರು ದೇಹ ಪತ್ತೆ ಹಚ್ಚಿದ್ರಾ ? ಇಲ್ಲಿದೆ ಸಂಪೂರ್ಣ ಮಾಹಿತಿ… !

    Published

    on

    ಮಂಗಳೂರು: ಮೋಯಿದ್ದೀನ್ ಬಾವ ಅವರ ಸಹೋದರ ಮಮ್ತಾಜ್ ಅಲಿ ನಾಪತ್ತೆಯಾಗಿದ್ದಾರೆ. ಕೂಳೂರು ಸೇತುವೆಯ ಮೇಲೆ ಕಾರು ಪತ್ತೆಯಾಗಿರುವ ಹಿನ್ನಲೆಯಲ್ಲಿ ನದಿಯಲ್ಲಿ ಶೋಧ ಕಾರ್ಯಚರಣೆ ತೀವ್ರವಾಗಿ ಮುಂದುವರಿಯುತ್ತಿವೆ.


    ಮುಳುಗುತಜ್ಙ ಈಶ್ವರ ಮಲ್ಪೆ ತಂಡ ಸಹಿತ ರಕ್ಷಣಾ ತಂಡಗಳು ಶೋಧ ಕಾರ್ಯದಲ್ಲಿ ನಿರತರವಾಗಿವೆ. ಮಾಜಿ ಶಾಸಕ ಮೋಯಿದ್ದೀನ್ ಬಾವ ಕೂಡ ಸ್ಥಳದಲ್ಲಿದ್ದು, ಪರಿಶೀಲಿಸುತ್ತಿದ್ದಾರೆ.
    ಒಂದು ಹಂತದ ಹುಡುಕಾಟ ನಡೆಸಿದ ತಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ, “ನಾವು ಏಳು ಜನ ಆಳಕ್ಕೆ ಮುಳುಗಿ ಕಾರ್ಯಾಚರಣೆ ನಡೆಸಿದ್ದೇವೆ. ಆದರೆ, ಎಲ್ಲೂ ಕೂಡ ದೇಹ ಪತ್ತೆಯಾಗಿಲ್ಲ” ಎಮದರು.
    “ಸದ್ಯಕ್ಕೆ 100 ಮೀ. ಸುತ್ತಾಟ ಹುಡುಕಾಟ ನಡೆಸಲಾಗಿದೆ. ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕೆಳಗೆ ಕಬ್ಬಿಣದ ಸರಳು, ಸಿಮೆಂಟ್ ಚೀಲಗಳಿವೆ. ಆಳದಲ್ಲಿ ಕತ್ತಲಿರುವುದರಿಂದ ಕಾರ್ಯಾಚರಣೆಗೆ ತೊಡಕಾಗಿದೆ” ಎಂದರು.


    ಮುಂದುವರೆದು ಮಾತನಾಡಿ, “ಇಲ್ಲಿ ಬಿದ್ದಿದ್ದರೆ ಇಲ್ಲೇ ಸಿಗಬೇಕು. ಇಷ್ಡು ಬೇಗ ಸಮುದ್ರ ಸೇರುವುದಿಲ್ಲ. ಎಲ್ಲಾ ತಂಡಗಳು ಕಾರ್ಯಾಚರಣೆಯನ್ನು ಮತ್ತೆ ಮುಂದುವರೆಸುತ್ತಿದ್ದೇವೆ. ಅವರು ಜೀವಂತವಾಗಿ ಇರಲಿ ಎಂದು ಆಶಿಸುತ್ತೇವೆ” ಎಂದರು.
    ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜೆಡಿಎಸ್ ರಾಜ್ಯಾಧ್ಯಕ್ಷ ಅಲಿ ಅವರ ಸಹೋದರ ಬಿ.ಎಂ. ಫಾರೂಕ್, ಐವನ್ ಡಿಸೋಜ ಭೇಟಿ ನೀಡಿದ್ದಾರೆ.

    Continue Reading

    LATEST NEWS

    ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದ ರಾಮ; ಮುಂದೇನಾಯ್ತು ಗೊತ್ತಾ???

    Published

    on

    ಮಂಗಳೂರು/ದೆಹಲಿ: ನಗರದ ಶಹದಾರದಲ್ಲಿರುವ ಜೈ ಶ್ರೀರಾಮಲೀಲಾ ವಿಶ್ವಕರ್ಮ ನಗರದಲ್ಲಿ ಶನಿವಾರ (ಅ.5) ನಡೆದ ರಾಮಲೀಲಾ ಕಾರ್ಯಕ್ರಮದ ವೇಳೆ ಭಗವಾನ್ ರಾಮನ ಪಾತ್ರವನ್ನು ಹಾಕಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು, ಮೃತಪಟ್ಟಿರುವ ಘಟನೆ ನಡೆದಿರುವುದು ತಿಳಿದು ಬಂದಿದೆ.


    ಮೃತ ಸುಶೀಲ್ ಕೌಶಿಕ್ (45) ಅವರು ರಿಯಲ್ ಎಸ್ಟೇಟ್ ಡೀಲರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜೊತೆಯಲ್ಲೇ ನಾಟಕಗಳಲ್ಲಿ ನಟಿಸುವ ಹವ್ಯಾಸವನ್ನೂ ಹೊಂದಿದ್ದರು. ಅದರಲ್ಲೂ ರಾಮ ಲೀಲಾ ನಾಟಕದಲ್ಲಿ ಭಗವಾನ್ ಶ್ರೀರಾಮನ ಪಾತ್ರಧಾರಿಯಾಗಿ ಎಲ್ಲರ ಗಮನ ಸೆಳೆದಿದ್ದರು.
    ಕಾರ್ಯಕ್ರಮ ನಡೆಯುತ್ತಿರುವಾಲೇ ಎದೆನೋವು ಕಾಣಿಸಿಕೊಂಡು ವೇದಿಕೆ ಬದಿಗೆ ಹೋಗಿದ್ದಾರೆ. ಬದಿಗೆ ಸರಿಯುತ್ತಿದ್ದಂತೆ ಅಲ್ಲೇ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

    Continue Reading

    LATEST NEWS

    ಮೊಬೈಲ್ ಗೇಮ್ ದುಷ್ಪರಿಣಾಮ; ಸಾಲದಲ್ಲಿ ಮುಳುಗಿ ಮಗನ ಸಮೇತ ಕುಟುಂಬ ಆ*ತ್ಮಹತ್ಯೆಗೆ ಶರಣು

    Published

    on

    ಮಂಗಳೂರು/ತೆಲಂಗಾಣ: ಆನ್‌ಲೈನ್ ಜೂಜಾಟದ ಮೂಲಕ ಮಗ ಮಾಡಿದ 30 ಲಕ್ಷ ರೂಪಾಯಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ದಂಪತಿ ಮತ್ತು ಅವರ ಮಗ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆ*ತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿಜಾಮಾಬಾದ್ ಜಿಲ್ಲೆಯಲ್ಲಿ ನಡೆದಿದೆ.


    ಮೃ*ತರನ್ನು ರಂಗವೇಣಿ ಸುರೇಶ್ (53), ಪತ್ನಿ ಹೇಮಲತಾ (45) ಮತ್ತು ಮಗ ಹರೀಶ್ (22) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಹರೀಶ್ ಆನ್‌ಲೈನ್ ಮೊಬೈಲ್ ಗೇಮ್‌ಗಳಿಗೆ ವ್ಯಸನಿಯಾಗಿದ್ದನು. ಅವನ ಚಟದಿಂದಾಗಿ ಕುಟುಂಬವು ರೂ.30 ಲಕ್ಷ ಸಾಲವನ್ನು ಹೊಂದಿತ್ತು.
    ತಮ್ಮ ಕೃಷಿ ಭೂಮಿಯನ್ನು ಮಾರಾಟ ಮಾಡಿದರೂ ಸಾಲ ತೀರಿಸಲು ಸಾಕಾಗಲಿಲ್ಲ. ಹೆಚ್ಚುತ್ತಿರುವ ಒತ್ತಡವನ್ನು ನಿಭಾಯಿಸಲು ಸಾಧ್ಯವಾಗದೆ ಕಂಗಾಲಾಗಿದ್ದರು. ಘಟನೆಯ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೋಧನ್ ಏರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ.

     

    Continue Reading

    LATEST NEWS

    Trending