Home ಉಡುಪಿ ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್

ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ ಒಂದೇ ದಿನ ಅತೀ ಹೆಚ್ಚು ಪ್ರದೇಶಗಳನ್ನು ಸೀಲ್ ಡೌನ್ ಉಡುಪಿಯಲ್ಲಿ ಆಗಿದೆ. ಸದ್ಯ ಜಿಲ್ಲೆಯಲ್ಲಿ ಈವರೆಗೆ ಒಟ್ಟು 201 ಪ್ರದೇಶಗಳನ್ನು ಸೀಲ್‌ಡೌನ್ ಮಾಡಿ ಕ್ರಮಕೈಗೊಳ್ಳಲಾಗಿದೆ.

ಇಂದು ದಾಖಲಾದ ಪ್ರಕರಣಗಳಲ್ಲಿ ಬೈಂದೂರು ತಾಲೂಕಿನ ಶಿರೂರು ಗ್ರಾಮದ 11, ಬಡಾಕೆರೆ- 1, ಮುದೂರು-1, ಯಡ್ತರೆ- 2, ಬಿಜೂರು-6, ಮರವಂತೆ-4, ಕಂಬದಕೋಣೆ -10, ತೆಗ್ಗರ್ಸೆ- 5, ಕಿರಿಮಂಜೇಶ್ವರ ಗ್ರಾಮದ 5 ಪ್ರದೇಶಗಳು ಸೇರಿದಂತೆ ಒಂದೇ ದಿನ 45 ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಬ್ರಹ್ಮಾವರ ತಾಲೂಕಿನ ವಡ್ಡರ್ಸೆ ಗ್ರಾಮದ ಮಧುವನ ಮತ್ತು ನಡೂರು ಗ್ರಾಮದ ಮೂಡಬೆಟ್ಟು ಎಂಬಲ್ಲಿ ಕಂಟೇನ್‌ಮೆಂಟ್ ವಲಯವನ್ನಾಗಿ ಘೋಷಿಸಿ, ಸೋಂಕಿತರ ಮನೆ ಸಹಿತ ತಲಾ ಎರಡು ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದಲ್ಲಿ ಎರಡು, ಬೊಮ್ಮರಬೆಟ್ಟು ಗ್ರಾಮದಲ್ಲಿ ಮೂರು, ಮೂಡನಿಡಂಬೂರು ಮತ್ತು ಮಲ್ಪೆಯಲ್ಲಿ ತಲಾ ಒಂದು ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ಕಾಪು ತಾಲೂಕಿನ ಶಿರ್ವ ಗ್ರಾಮದ ಮಾಣಿಬೆಟ್ಟು, ಸೊಂಪು, ಹಟ್ಟಿಂಜೆ, ಎಡ್ಮೇರ್, ನಾಯ್ಡಟ್ಟು ಒಟ್ಟು 5 ಕಡೆಗಳಲ್ಲಿ ಹಾಗೂ ಮುದರಂಗಡಿ ಮತ್ತು ಉಚ್ಚಿಲ ಗ್ರಾಮದಲ್ಲಿ ತಲಾ ಒಂದು ಪ್ರದೇಶದಲ್ಲಿ ಕಂಟೇನ್‌ಮೆಂಟ್ ವಲಯ ವನ್ನಾಗಿ ಮಾಡಿ ಸೀಲ್‌ಡೌನ್ ಮಾಡಲಾಗಿದೆ.
ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಎರಡು ಪ್ರತ್ಯೇಕ ಪ್ರದೇಶ ಮತ್ತು ಹೆಬ್ರಿ ಗ್ರಾಮದ ತೇಲಂಜೆ ಎಂಬಲ್ಲಿ ಒಂದು ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಹೆಬ್ರಿ ತಾಲೂಕಿನಲ್ಲಿ ಈವರೆಗೆ ಒಟ್ಟು ನಾಲ್ಕು ಕಡೆಗಳಲ್ಲಿ ಕಂಟೇನ್ ಮೆಂಟ್ ವಲಯ ಎಂಬುದಾಗಿ ಘೋಷಿಸಲಾಗಿದೆ.

ಕಾರ್ಕಳ ತಾಲೂಕಿನ ಎರ್ಲಪಾಡಿ ಮತ್ತು ಮಿಯ್ಯರು ಗ್ರಾಮಗಳಲ್ಲಿ ತಲಾ ಎರಡು, ಹಿರ್ಗಾನ, ಮಾಳ, ಪಳ್ಳಿ, ಬೈಲೂರು, ಕಣಜಾರು, ರೆಂಜಾಳ, ಇರ್ವತ್ತೂರು ಗ್ರಾಮದ ತಲಾ ಒಂದು ಸೇರಿದಂತೆ ಇಂದು ಒಟ್ಟು 11 ಪ್ರದೇಶ ಗಳಲ್ಲಿ ಕಂಟೈನ್‌ಮೆಂಟ್ ವಲಯವನ್ನು ಘೋಷಿಸಿ ಸೀಲ್‌ಡೌನ್ ಮಾಡಲಾಗಿದೆ.

ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದಲ್ಲಿ ಎರಡು, ತ್ರಾಸಿ, ವಂಡ್ಸೆ, ಚಿತ್ತೂರು, ಕೆಂಚನೂರು, ಕಾವ್ರಾಡಿ, ಹೊಸಂಗಡಿ ಗ್ರಾಮಗಳ ತಲಾ ಒಂದರಂತೆ ಒಟ್ಟು ಎಂಟು ಪ್ರದೇಶವನ್ನು ಸೀಲ್‌ಡೌನ್ ಮಾಡಲಾಗಿದೆ. ಕುಂದಾಪುರ ತಾಲೂಕಿನಲ್ಲಿ ಈವರೆಗೆ ಒಟ್ಟು 41 ಪ್ರದೇಶಗಳನ್ನು ಕಂಟೇನ್‌ಮೆಂಟ್ ವಲಯ ವನ್ನಾಗಿ ಘೋಷಿಸಲಾಗಿದೆ ಎಂದು ಆಯಾ ತಾಲೂಕಿನ ತಹಶೀಲ್ದಾರರು ಮಾಹಿತಿ ನೀಡಿದ್ದಾರೆ.

RECENT NEWS

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ…

ದ.ಕ-ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಆರೆಂಜ್ ಅಲರ್ಟ್ ಘೋಷಣೆ… ಮಂಗಳೂರು/ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ, ಪುತ್ತೂರು, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಕಳೆದ ಎರಡು...

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!!

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್..!! ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೂರಜ್ ಜೈಬ್ ಅವರಿಗೂ ಕೋವಿಡ್ 19 ಸೋಂಕು...

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!!

ಉಳ್ಳಾಲ ನಗರಸಭೆಗೂ ವಕ್ಕರಿಸಿದ ವೈರಸ್: ರ್ಯಾಂಡಮ್ ಟೆಸ್ಟ್ ನಲ್ಲಿ 28 ಮಂದಿಗೆ ಪಾಸಿಟಿವ್ ಪತ್ತೆ..!! ಮಂಗಳೂರು: ಉಳ್ಳಾಲದಲ್ಲಿ ಬುಧವಾರ ನಡೆಸಲಾದ ರ್ಯಾಂಡಮ್ ಟೆಸ್ಟ್ ವರದಿ ನಿನ್ನೆ (ಜುಲೈ 3) ಬಂದಿದ್ದು ಮತ್ತೆ 28 ಮಂದಿಯಲ್ಲಿ...

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!!

ಉಡುಪಿಯಲ್ಲಿ ಇಂದು 14 ಮಂದಿಗೆ ಪಾಸಿಟಿವ್ ಪತ್ತೆ: ಪೀಡಿತರ ಸಂಖ್ಯೆ 1242ಕ್ಕೆ ಏರಿಕೆ..!! ಉಡುಪಿ: ಉಡುಪಿಯಲ್ಲಿ ಇಂದು 14 ಕೊರೊನಾ ಪಾಸಿಟಿವ್ ವರದಿಯಾಗಿದೆ. ಮಹಾರಾಷ್ಟ್ರ4, ಕೇರಳ ರಾಜ್ಯದ 1 ಕೇಸ್ ಪತ್ತೆಯಾಗಿದೆ. ಬೆಂಗಳೂರಿಂದ ಬಂದ ನಾಲ್ವರಲ್ಲಿ...
error: Content is protected !!