Thursday, December 2, 2021

ಅಪಘಾತದಲ್ಲಿ ಗಾಯಗೊಂಡಿದ್ದ ಉಡುಪಿ ನಗರಸಭೆ ಮ್ಯಾನೇಜರ್ ಸಾವು

ಉಡುಪಿ: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಡುಪಿ ನಗರಸಭೆ ಮ್ಯಾನೇಜರ್ ವೆಂಕಟರಮಣಯ್ಯ (49) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.


ಇವರು ನ.21ರಂದು ಮದ್ಯಾಹ್ನ 12 ಗಂಟೆಗೆ ಕುಂಜಿಬೆಟ್ಟು ಎದುರು ರಸ್ತೆ ದಾಟಲು ಡಿವೈಡರ್ ಬಳಿ ನಿಂತಿದ್ದರು.

ಈ ವೇಳೆ ಮಣಿಪಾಲ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ವೆಂಕಟರಮಣಯ್ಯರಿಗೆ ಢಿಕ್ಕಿ ಹೊಡೆದಿತ್ತೆನ್ನಲಾಗಿದೆ.
ಇದರಿಂದ ವೆಂಕಟರಮಣಯ್ಯ ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು.

ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...