bengaluru
ಉಡುಪಿ ವಿಡಿಯೋ ಪ್ರಕರಣ: ಸಂತ್ರಸ್ತೆಯಿಂದ ಹೇಳಿಕೆ ದಾಖಲಿಸಿಕೊಂಡ ಸಿಐಡಿ ತಂಡ
ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣವನ್ನು ಸಿಐಡಿಗೆ ರಾಜ್ಯ ಸರಕಾರ ನೀಡಿದ ಮೇಲೆ ತನಿಖೆ ಪುನರಾರಂಭಗೊಂಡಿದ್ದು, ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ.
ಉಡುಪಿ: ಉಡುಪಿ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣವನ್ನು ಸಿಐಡಿಗೆ ರಾಜ್ಯ ಸರಕಾರ ನೀಡಿದ ಮೇಲೆ ತನಿಖೆ ಪುನರಾರಂಭಗೊಂಡಿದ್ದು, ಸಂತ್ರಸ್ತೆಯಿಂದ ಹೇಳಿಕೆ ಪಡೆದುಕೊಂಡಿದ್ದಾರೆ.
ಇಂದು ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಆಗಮಿಸಿ ತನಿಖೆಗೆ ಮಾರ್ಗದರ್ಶನ ನೀಡಿದ್ದಾರೆ.
ಉಡುಪಿ ಎಸ್ಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.
ಈ ವೇಳೆ ತನಿಖಾಧಿಕಾರಿಗಳಿಂದ ಅವರು ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಿದ್ದಾರೆ.
ಮರು ತನಿಖೆ ನಡೆಸಲು ಸಿಐಡಿ ಅಧಿಕಾರಿಗಳು ಬೊಂಬೆಯನ್ನು ಸೃಷ್ಟಿಸಿ ತನಿಖೆ ಆರಂಭಿಸಿದ್ದಾರೆ.
ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್ಮೆಂಟ್ ಎಸ್ ಪಿ ರಾಘವೇಂದ್ರ ಹೆಗಡೆ ಪ್ರಕರಣದ ತನಿಖೆ ಶುರು ಮಾಡಿದ್ದಾರೆ.
ಘಟನೆ ನಡೆದ ಕಾಲೇಜಿಗೆ ಭೇಟಿ ಕೊಟ್ಟ ಸಿಐಡಿ ತಂಡ ಮಾಹಿತಿಗಳನ್ನು ಕಲೆ ಹಾಕಿದೆ.
ಸಂತ್ರಸ್ತೆಯ ಹೇಳಿಕೆಯನ್ನು ಪಡೆದುಕೊಳ್ಳಲಾಗಿದೆ.
ಕಾಲೇಜಿನ ಆಡಳಿತ ಮಂಡಳಿ ಸಿಬ್ಬಂದಿಯನ್ನು ವಿಚಾರಣೆ ಮಾಡಿ ದಾಖಲೆಗಳನ್ನು ಸಂಗ್ರಹ ಮಾಡಿದ್ದಾರೆ.
ಜು. 18ರಂದು ನಡೆದ ಘಟನೆಯನ್ನು ಸಿಐಡಿ ಮರು ಸೃಷ್ಟಿ ಮಾಡಿದೆ.
ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಎಡಿಜಿಪಿ ಮನೀಶ್ ಕರ್ಬೀಕರ್, ಉಡುಪಿಯಲ್ಲಿ ನಡೆದ ವಿಡಿಯೋ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದೇನೆ.
ಉಡುಪಿ ಪೊಲೀಸರು ನಡೆಸಿದ ತನಿಖೆ ವರದಿ ಪರಿಶೀಲನೆ ಮಾಡಿದ್ದೇನೆ.
ಪೊಲೀಸ್ ಮತ್ತು ಸಿಐಡಿ ಅಧಿಕಾರಿಗಳ ಜೊತೆ ಈ ಬಗ್ಗೆ ಚರ್ಚೆ ಮಾಡಿದ್ದೇನೆ.
ಮುಂದೇನು ತನಿಖಾ ಪ್ರಕ್ರಿಯೆ ನಡೆಸಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ.
ತನಿಖಾಧಿಕಾರಿಯಾಗಿ ಸಿಐಡಿ ಡಿವೈಎಸ್ಪಿ ಅಂಜುಮಾಲ ಅವರನ್ನು ನೇಮಕ ಮಾಡಲಾಗಿದೆ ಎಂದರು.
ತನಿಖೆಯ ಮೇಲ್ವಿಚಾರಣೆಯನ್ನು ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ ನಡೆಸುತ್ತಾರೆ.
ವಿಧಿವಿಜ್ಞಾನ ಪ್ರಯೋಗಾಲಯದ ವರದಿ ತನಿಖಾಧಿಕಾರಿ ಕೈ ಸೇರಲಿದೆ.
ಪ್ರಕರಣದ ತನಿಖೆ ಆದ ಬಳಿಕ ಕೋರ್ಟಿಗೆ ಮುಂದಿನ ವರದಿ ಕೊಡುತ್ತೇವೆ.
ಸಿಐಡಿ ತನಿಖೆ ಉಡುಪಿಯಲ್ಲಿ ಮುಂದುವರಿಯಲಿದೆ.
ಮೂರು ಮೊಬೈಲ್ ಎಫ್‌ಎಸ್‌ಎಲ್ ವರದಿ ತನಿಖೆಯ ಒಂದು ಭಾಗವಾಗಿ ನಾವು ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
bangalore
SHOCKING! ಗುರುತೇ ಸಿಗದಷ್ಟು ಬದಲಾದ ‘ಹುಚ್ಚ’ ಖ್ಯಾತಿಯ ನಟಿ ರೇಖಾ …!
ಶಾಕಿಂಗ್ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್.
ಬೆಂಗಳೂರು : ಕಿಚ್ಚ ಸುದೀಪ್ ಜೊತೆ ‘ಹುಚ್ಚ’ ಚಿತ್ರದಲ್ಲಿ ನಟಿಸಿ ಮನೆ ಮಾತಾಗಿದ್ದ ನಟಿ ರೇಖಾ ವೇದವ್ಯಾಸ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ.
ಅಷ್ಟೊಂದು ಮುದ್ದು ಮುದ್ದು ಮುಖ, ಹೊಳೆಯುತ್ತಿದ್ದ ಕಣ್ಣು, ಮಿನುಗುತ್ತಿದ್ದ ಕೆನ್ನೆಯನ್ನು ಇಂದಿಗೂ ಅಭಿಮಾನಿಗಳು ನೆನೆಸಿಕೊಳ್ಳುತ್ತಾರೆ.ಆದ್ರೆ ಈಗ ಅದೇ ರೇಖಾ ಗುರುತೆ ಸಿಗದಷ್ಟರ ಮಟ್ಟಿಗೆ ಬದಲಾಗಿ ಹೋಗಿದ್ದಾರೆ.
ಸಣಕಲು ದೇಹ, ಬತ್ತಿದ ಕಣ್ಣುಗಳು, ಬಾಡಿದ ಕೆನ್ನೆಗಳು ರೇಖಾ ಅವರ ನಿಜ ಸ್ವರೂಪವನ್ನೇ ಬದಲಾಯಿಸಿ ಬಿಟ್ಟಿದೆ.
ಒಂದು ಕಾಲದಲ್ಲಿ ಬೆಳ್ಳಿ ತೆರೆಯಲ್ಲಿ ಮಿರ ಮಿರ ಮಿಂಚಿ ಮರೆಯಾಗಿರುವ ನಟಿ ರೇಖಾ ದಿಢೀರನೆ ತೆಲುಗು ಕಿರುತೆರೆ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ ಆಗಿದ್ದಾರೆ.
ತೆಲುಗಿನ ‘ಶ್ರೀದೇವಿ ಡ್ರಾಮಾ ಕಂಪನಿ’ ಕಾಮಿಡಿ ಶೋಗೆ ಅತಿಥಿಯಾಗಿ ಬಂದಿದ್ದ ರೇಖಾ ಎಲ್ಲರಿಗೂ ಶಾಕ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹುಟ್ಟಿಬೆಳೆದ ರೇಖಾ ಕನ್ನಡದ ‘ಹುಚ್ಚ’ ಚಿತ್ರದಲ್ಲಿ ಮೊದಲಿಗೆ ಆಕೆ ಬಣ್ಣ ಹಚ್ಚಿದ್ದರು.
ಅಲ್ಲಿಂದ ಮುಂದೆ ಕನ್ನಡ ಸಿನಿರಸಿಕರಿಗೆ ‘ಹುಚ್ಚ’ ನಟಿ ರೇಖಾ ಅಂತ್ಲೇ ಪರಿಚಿತರಾದರು.
ಕನ್ನಡ ಜೊತೆ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲಿ ರೇಖಾ ಮಿಂಚಿದರು. ತೆಲುಗಿನಲ್ಲೂ ಆಕೆ ಹಲವು ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದಾರೆ.
ಕಾಲೇಜು ದಿನಗಳಲ್ಲೇ ಮಾಡೆಲಿಂಗ್ ಆರಂಭಿಸಿದ ಚೆಲುವೆಗೆ ಚಿತ್ರರಂಗಕ್ಕೆ ಬರುವುದು ಕಷ್ಟವಾಗಲಿಲ್ಲ.
‘ಚಿತ್ರ’, ‘ತುಂಟಾಟ’, ‘ಮೋನಲಿಸಾ’, ‘ಚೆಲ್ಲಾಟ’ ಹೀಗೆ ಹಿಟ್ ಸಿನಿಮಾಗಳಲ್ಲಿ ಮಿಂಚಿದರು.
ಬಳಿಕ ತೆಲುಗು, ತಮಿಳು ಸಿನಿಮಾಗಳತ್ತ ಮುಖ ಮಾಡಿದ್ದರು. ಗಣೇಶ್ ಜೋಡಿಯಾಗಿ ‘ಹುಡುಗಾಟ’ ಚಿತ್ರದ ಮೂಲಕ ಮತ್ತೆ ಕನ್ನಡಕ್ಕೆ ಬಂದ ರೇಖಾ ಮತ್ತೊಮ್ಮೆ ಕಮಾಲ್ ಮಾಡಿದರು.
ನಟಿ ರೇಖಾ 2014ರ ನಂತರ ಬೆಳ್ಳಿತೆರೆ ಮೇಲೆ ಕಾಣಿಸಿಕೊಂಡಿಲ್ಲ. ಅವಕಾಶಗಳು ಸಿಕ್ಕಿಲ್ವೋ ಅಥವಾ ಸಿನಿಮಾ ಮೇಲಿನ ಆಸಕ್ತಿ ಕಮ್ಮಿ ಆಯ್ತೋ ಗೊತ್ತಿಲ್ಲ.
ಆದರೆ ಇದ್ದಕ್ಕಿಂದ್ದಂತೆ ಬಿಗ್ ಸ್ಕ್ರೀನ್ನಿಂದ ಮಾಯವಾಗಿದ್ದ ರೇಖಾ ಸಿನಿಪ್ರೇಮಿಗಳಿಗೆ ಅಪರೂಪದ ತಾರೆಯಾಗಿ ಉಳಿದುಕೊಂಡು ಬಿಟ್ರು.
ಆದಷ್ಟು ಬೇಗ ಕನ್ನಡ ಮುದ್ದು ಮುಖದ ನಟಿ ರೇಖಾ ವೇದವ್ಯಾಸ್ ಗುಣ ಮುಖರಾಗಿ ಮೊದಲಿನ ಮಂದಹಾಸ ಬರಲಿ ಅನ್ನೋದೆ ಅವರ ಅಭಿಮಾನಿಗಳ ಆಸೆ.
bengaluru
ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ ಪುತ್ತಿಗೆ ಶ್ರೀಗಳ 50 ನೇ ಚಾತುರ್ಮಾಸ್ಯ ಸಂಭ್ರಮ
ಬೆಂಗಳೂರು: ಬೆಂಗಳೂರಿನ ಗೋವರ್ಧನಗಿರಿ ಕ್ಷೇತ್ರದಲ್ಲಿ 78 ದಿನಗಳ ಉಡುಪಿ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥರ 50ನೇ ಚಾತುರ್ಮಾಸ್ಯ ವೈಭವದಿಂದ ಸಮಾಪನಗೊಂಡಿತು.
ಪೂಜ್ಯ ಶ್ರೀಗಳ ಚಾತುರ್ಮಾಸ್ಯ ಕಾರ್ಯದ ನಡುವೆಯೂ ಕೋಟಿ ಕೋಟಿ ಗೀತಾ ಲೇಖನ ಯಜ್ಞದ ಕುರಿತಾಗಿ ವಿಶೇಷ ಕಾರ್ಯಕ್ರಮಗಳು ಬೆಂಗಳೂರಿನ ವಿವಿಧ ಕಡೆಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದ್ದು, ಪೂಜ್ಯ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಈ ಚಾತುರ್ಮಾಸ್ಯದ ಸಮಾರೋಪ, ಸನ್ಯಾಸ ಸ್ವೀಕಾರ ಮಾಡಿದ 50 ವರ್ಷದ ಸುವರ್ಣ ಮಹೋತ್ಸವ ಸಂಭ್ರಮದಿಂದ ಜರುಗಿತು.
ವೇದಮಂತ್ರಗಳ ಘೋಷಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಭಾವೀ ಪರ್ಯಾಯ ಮಠದ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಗಳು ಆಶೀರ್ವಚನವನ್ನು ನೀಡಿದರು. ವಿದ್ವಾನ್ ಮಾಲಗಿ ರಾಮಾಚಾರ್ಯರು, ವಿದ್ವಾನ್ ಕೇಶವ ಬಾಯಿರಿ ಅವರು ಶ್ರೀಗಳನ್ನು ಮಾಲಾರ್ಪಣೆ ಮಾಡಿದರು.
ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸರಕಾರದ ಪರವಾಗಿ ಶುಭ ಹಾರೈಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುಗುಣೇಂದ್ರ ಶ್ರೀಗಳು ಅವರು ಪ್ರಸಿದ್ಧಿಯನ್ನು ಮಾಡಿದ್ದಾರೆ. ಧರ್ಮದ ಕೈಂಕರ್ಯವನ್ನು ಮಾಡಿದ್ದಾರೆ. ಇಷ್ಟೊಂದು ದೊಡ್ಡ ಮಟ್ಟದಲ್ಲಿ ಅವರು ಕಾರ್ಯಕ್ರಮ ಮಾಡಿದ್ದಾರೆ ಎಂದು ಅಭಿನಂದಿಸಿದರು.
ನಿಮಿಷದ ಬಳಿಕ ಖ್ಯಾತ ಚಲನಚಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ಮಾತನಾಡಿ, ಇದೊಂದು ಎಲ್ಲರೂ ಸಂಭ್ರಮ ಪಡಬೇಕಾದ ವಿಚಾರವಾಗಿದೆ. ನಮ್ಮ ತಾಯಿ ಉಡುಪಿಯವಾಗಿದ್ದು, ಕೃಷ್ಣ ಮಠ ತುಂಬಾ ಹತ್ತಿರ. ಕೃಷ್ಣನ ಪರವಾಗಿ ಒಂದು ಚಿತ್ರ ಮಾಡಬೇಕೆಂಬ ಆಸೆಯನ್ನು ಶ್ರೀಗಳಲ್ಲಿ ಅರಿಕೆ ಮಾಡಿದ್ದೇನೆ ಎಂದರು.
ಇದೇ ಸಂದರ್ಭ ಶ್ರೀಗಳು ಭಕ್ತರಿಂದ ವಿಶೇಷ ಪೂಜೆಯನ್ನು ನೆರವೇರಿಸಿಕೊಂಡರು.
ಎಲ್ಲಾ ಭಕ್ತರೂ ಸೇರಿ ನನ್ನನ್ನು ಹರಸಿದ್ದೀರಿ. ಶ್ರೀ ಕೃಷ್ಣನ ಪೂಜಾ ಕಾರ್ಯ ಮಾಡಲು ಸಿಕ್ಕಿರುವುದು ಪುಣ್ಯಫಲ. ಭಕ್ತರು ನನಗೆ ಅರ್ಪಣೆ ಮಾಡಿದ ಎಲ್ಲವನ್ನೂ ನಾವು ಶ್ರೀಕೃಷ್ಣನಿಗೆ ಸಮರ್ಪಣೆ ಮಾಡಿದ್ದೇವೆ.
ನೀವು ಕೊಟ್ಟ ಸುವರ್ಣ ಅಭಿಷೇಕ ಸಂಕಲ್ಪ ಮಾಡಿದ ಸುವರ್ಣ ರಥಕ್ಕೆ ಅರ್ಪಣೆ ಮಾಡುತ್ತೇವೆ ಎಂದರು. ಎಲ್ಲಾ ಸಮಿತಿಯ ಭಕ್ತರಿಗೂ ಕೃಷ್ಣ ಭಗವದ್ಗನುಗ್ರಹ ಮಾಡಲಿ ಎಂದು ಹರಸಿದರು.
ಬಳಿಕ ಶ್ರೀಗಳು ಎಲ್ಲರಿಗೂ ಫಲಮಂತ್ರಾಕ್ಷತೆ ನೀಡಿದರು. ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ ಎಸ್ ಅಹಲ್ಯ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ಭಕ್ತರಾದ ಮಂಜುನಾಥ ಹೆಗಡೆ, ಹಯಗ್ರೀವ ಆಚಾರ್ಯರು, ಸಮಿತಿ ಸದಸ್ಯ ಯು ಬಿ ವೆಂಕಟೇಶ್, ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ, ಸಿಒಒ ಕದ್ರಿ ನವನೀತ್ ಶೆಟ್ಟಿ ಸಹಿತ ಗಣ್ಯಾತಿಗಣ್ಯರು ಈ ಸಂದರ್ಭ ಉಪಸ್ಥಿತರಿದ್ದರು.
ಜನವರಿ 18ರಿಂದ ಶ್ರೀಗಳ ಪರ್ಯಾಯ ಮಹೋತ್ಸವ ಆರಂಭವಾಗಲಿದೆ.
bengaluru
ಉಡುಪಿಯ ಬೆಡಗಿ ಶರೀನಾಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ
ಉಡುಪಿ: ಪ್ರತಿಷ್ಠಿತ ಎಂಬಿ ಗ್ರೂಪ್ ಇವರು ಬೆಂಗಳೂರಿನ ಹೋಟೆಲ್ ಫೊಕ್ಸ್ ಗ್ಲೋವ್ ಇಂಟರ್ನ್ಯಾಷನಲ್ ವೈಟ್ ಫೀಲ್ಡ್ ನಲ್ಲಿ ಸೆ.24 ರಂದು ಆಯೋಜಿಸಿದ್ದ ‘ಮಿಸ್ಟರ್ & ಮಿಸ್ ಟೀನ್ ಕರ್ನಾಟಕ’ ಇದರ ಸೀಸನ್ 4 ಸೌಂದರ್ಯ ಸ್ಪರ್ಧೆಯಲ್ಲಿ ಉಡುಪಿಯ ಪೆರಂಪಳ್ಳಿಯ ಶರೀನಾ ಮತಾಯಸ್ ರವರಿಗೆ ‘ಕರ್ನಾಟಕ ನೆಕ್ಸ್ಟ್ ಟಾಪ್ ಮಾಡೆಲ್’ ಟೈಟಲ್ ಪ್ರಶಸ್ತಿ ದೊರಕಿದೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 14 ಸ್ಪರ್ಧಿಗಳಲ್ಲಿ, ಪೆರಂಪಳ್ಳಿಯ ಶರೀನಾರವರಿಗೆ ಪ್ರತಿಷ್ಠಿತ ಟೈಟಲ್ ಪ್ರಶಸ್ತಿ ದೊರಕಿದ್ದು, ಫ್ಯಾಶನ್ ಮಾಡೆಲಿಂಗ್ ನ ಪ್ರಥಮ ಹೆಜ್ಜೆಯಲ್ಲಿಯೇ ಯಶಸ್ವಿಯ ಮೈಲುಗಲ್ಲು ಇಟ್ಟಿದ್ದಾರೆ.
ಪೆರಂಪಳ್ಳಿಯ ಸುನಿಲ್ ಮತ್ತು ಅನಿತಾ ಮತಾಯಸ್ ದಂಪತಿಗಳ ಮಗಳಾಗಿರುವ ಶರೀನಾ ಮತಾಯಸ್ ಪ್ರತಿಭಾವಂತೆಯಾಗಿದ್ದು, ಪ್ರಸ್ತುತ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ.
ಪೆರಂಪಳ್ಳಿಯ ಫಾತಿಮಾ ಮಾತೆ ದೇವಾಲಯದ ಐಸಿವೈಎಂ ಯುವ ಸಂಘಟನೆಯ ಸದಸ್ಯರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.