ಉಡುಪಿ: ರಾಜ್ಯ ಸರಕಾರದ ಸೂಚನೆ ಯಂತೆ ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸುವ ಕುರಿತ ನಿನ್ನೆ ಜಿಲ್ಲಾ ಕೋವಿಡ್ ನಿಯಂತ್ರಣ ತಜ್ಞರ ಸಮಿತಿ ಹಾಗೂ ಸಂಬಂಧಿತ ಇತರರ ಜೊತೆ ವ್ಯಾಪಕ ಚರ್ಚೆ ನಡೆದಿದ್ದು,
ಇನ್ನಷ್ಟು ಚರ್ಚೆಯ ಬಳಿಕ ಇಂದು ಬೆಳಗ್ಗೆ ಅಂತಿಮ ನಿರ್ಧಾರವನ್ನು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ಕೈಗೊಳ್ಳಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.
ಸಭೆಯ ಬಳಿಕ ತೆಗೆದುಕೊಂಡ ನಿರ್ಧಾರದ ಬಳಿಕ ಅವರನ್ನು ಪ್ರಶ್ನಿಸಿದಾಗ, ಈ ಬಗ್ಗೆ ತುಂಬಾ ಎಚ್ಚರಿಕೆಯ ಹೆಜ್ಜೆ ಇಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಹೀಗಾಗಿ ಶುಕ್ರವಾರ ಸಚಿವರು, ಶಾಸಕರೊಂದಿಗೆ ಇನ್ನಷ್ಟು ಚರ್ಚಿಸಿ ಮತ್ತೊಂದು ಸುತ್ತಿನ ಚರ್ಚೆಯ ಬಳಿಕ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಸೆ.10ರಂದು ವಾರಾಂತ್ಯ ಕರ್ಪೂ ಬಗ್ಗೆ ಮಾತ್ರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈಗ ರಾತ್ರಿ 9ರಿಂದ ಇರುವ ರಾತ್ರಿ ಕರ್ಪೂ ಹಾಗೆ ಮುಂದುವರಿಯಲಿದೆ ಎಂದು ಸದಾಶಿವ ಪ್ರಭು ತಿಳಿಸಿದರು.
ಮಂಗಳೂರು/ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಇದೀಗ ಸೆಮಿ ಫಿನಾಲೆ ವಾರ ಮುಕ್ತಾಯವಾಗುತ್ತಾ ಬಂದಿದೆ. ಇಂದು ಕಿಚ್ಚ ಸುದೀಪ್ ವಾರಾಂತ್ಯದ ಪಂಚಾಯ್ತಿ ನಡೆಸಿಕೊಡಲಿದ್ದಾರೆ. ಇದರಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಿದ್ದಾರೆ. ಇದು ನಾಮಿನೇಟ್ ಆಗಿರುವ ಸ್ಪರ್ಧಿಗಳ ಆಟವನ್ನು ನಿರ್ಧಾರ ಮಾಡಲಿದೆ.
ಇನ್ನೊಂದು ಕಡೆ ಮಧ್ಯವಾರದಲ್ಲಿ ಒಬ್ಬರನ್ನು ಎಲಿಮಿನೇಟ್ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಹಾಗೆ ಮಾಡಿಲ್ಲ. ಈಗ ವಾರಾಂತ್ಯದಲ್ಲಿ ಡಬಲ್ ಎಲಿಮಿನೇಷನ್ ನಡೆಯೋದು ಪಕ್ಕಾ ಆಗಿದೆ. ಇಂದು (ಜ.18) ಎಲಿಮಿನೇಷನ್ ನಡೆಯಲಿದ್ದು, ಒಬ್ಬರು ಹೊರ ಹೋಗುವುದು ಪಕ್ಕಾ ಎನ್ನಲಾಗಿದೆ.
‘ಬಿಗ್ ಬಾಸ್ ಕನ್ನಡ ಸೀಸನ್ 11’ ಪೂರ್ಣಗೊಳ್ಳಲು ಇನ್ನು ಒಂದು ವಾರ ಮಾತ್ರ ಬಾಕಿ ಇದೆ. ಮುಂದಿನ ವೀಕೆಂಡ್‌ನಲ್ಲಿ ಫಿನಾಲೆ ನಡೆಯಲಿದೆ. ಅಲ್ಲಿಯವರೆಗೆ ಯಾರು ಇರುತ್ತಾರೆ ಹಾಗೂ ಯಾರು ಹೋಗುತ್ತಾರೆ ಎಂದು ಊಹಿಸೋದು ಕೂಡ ಕಷ್ಟ ಎಂಬಂತಾಗಿದೆ. ಹೀಗಿರುವಾಗಲೇ ಶನಿವಾರ ಸ್ಪರ್ಧಿಗಳಿಗೆ ಒಂದು ಶಾಕಿಂಗ್ ವಿಚಾರ ಇರಲಿದೆ ಎಂದು ಹೇಳಲಾಗುತ್ತಿದೆ.
ಕೆಲವು ವರದಿಗಳ ಪ್ರಕಾರ ಇಂದು ಶೋ ಆರಂಭಕ್ಕೂ ಮೊದಲೇ ಅಥವಾ ಶೋ ಕೊನೆಯಲ್ಲಿ ಎಲಿಮಿನೇಷನ್ ನಡೆಯೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಭಾನುವಾರ ಕೂಡ ಒಂದು ಎಲಿಮಿನೇಷನ್ ನಡೆಯಲಿದೆ. ಈ ವಾರ ಒಟ್ಟಾರೆ ಇಬ್ಬರು ಅಥವಾ ಮೂವರು ಹೊರ ಹೋಗಲಿದ್ದಾರೆ.
ಸದ್ಯ ಹನುಮಂತ ಅವರು ಎಲಿಮಿನೇಷನ್‌ನಿಂದ ಬಚವ್ ಆಗಿದ್ದಾರೆ. ಮೋಕ್ಷಿತಾ ಪೈ ಅವರನ್ನು ಹನುಮಂತ ಸೇವ್ ಮಾಡಿದ್ದು, ಫಿನಾಲೆ ವಾರ ತಲುಪಿದ್ದಾರೆ. ಇನ್ನು ಡಬಲ್ ಎಲಿಮಿನೇಷನ್ ಇರುವ ಕಾರಣ ನಾಮಿನೇಟ್ ಆಗಿರುವ ಗೌತಮಿ, ರಜತ್, ಮಂಜು, ಭವ್ಯ ಹಾಗೂ ಧನರಾಜ್ ಮೊಗದಲ್ಲಿ ಆತಂಕ ಕಾಡುತ್ತಿದೆ. ನಗು ಎನ್ನುವುದು ಮಾಯವಾಗಿ ಕಣ್ಣೀರು ಬಾಕಿ ಉಳಿದಿದೆ. ಕೊನೆ ಹಂತಕ್ಕೆ ಬಂದು ಹೊರ ನಡೆದರೆ ಹೇಗೆ ಎಂದು ಯೋಚನೆಯಲ್ಲಿ ತೊಡಗಿದ್ದಾರೆ. ಹನುಮಂತು, ಮೋಕ್ಷಿತಾ ಅವರನ್ನು ಉಳಿಸಿಕೊಂಡಿದ್ದು ಧನರಾಜ್‌ಗೆ ಕೈಕೊಟ್ಟಿದ್ದಾರೆ.
ಈ ವಾರ ಯಾರಿಗೆ ಮನೆಯಿಂದ ಗೇಟ್‌ಪಾಸ್ ?
ಉಗ್ರಂ ಮಂಜು, ರಜತ್ ಮತ್ತು ಭವ್ಯಾ ಗೌಡ ಅವರ ಆಟಕ್ಕೆ ಹೋಲಿಕೆ ಮಾಡಿದರೆ ಗೌತಮಿ ಈ ವಾರ ಹೊರ ಹೋಗೋದು ಬಹುತೇಕ ಖಚಿತ. ಅಷ್ಟೇ ಅಲ್ಲದೆ, ಅವರಿಗೆ ಫ್ಯಾನ್ಸ್ ಫಾಲೋವಿಂಗ್ ಕೂಡ ತೀರಾ ಕಡಿಮೆ ಇದೆ. ಇನ್ನು ಇವರನ್ನು ಹೊರತುಪಡಿಸಿ ಧನರಾಜ್ ಅವರು ತಮ್ಮ ಆಟಕ್ಕೆ ಫುಲ್ ಸ್ಟಾಪ್ ಇಡುವ ಸಾಧ್ಯತೆ ಇದೆ.
ಆಟದ ವೈಖರಿ, ಮನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ರೀತಿ ಇವೆಲ್ಲವನ್ನೂ ಗಮನಿಸಿದರೆ ಧನರಾಜ್ ಉತ್ತಮವಾಗಿದ್ದಾರೆ. ಆದರೆ ಈ ವಾರದ ಟಾಸ್ಕ್ ಒಂದರಲ್ಲಿ ನಿಯಮದ ಅರಿವಿಲ್ಲದೆ, ಕನ್ನಡಿ ನೋಡಿಕೊಂಡು ಟಾಸ್ಕ್ ಕಂಪ್ಲೀಟ್ ಮಾಡಿದ್ದರು. ಈ ಒಂದು ತಪ್ಪಿನಿಂದಾಗಿ ಅವರಿಗೆ ಓಟಿಂಗ್ ವ್ಯವಸ್ಥೆಯಲ್ಲಿ ಪೆಟ್ಟು ಬೀಳುವ ಸಾಧ್ಯತೆ ಇದೆ.
ಅಲ್ಲದೆ ನಾಮಿನೇಟ್ ಆದ ಪ್ರತಿ ಸ್ಪರ್ಧಿಗಳಿಗೆ ವಾರದಲ್ಲಿ 5 ದಿನ ಓಟ್ ಮಾಡುವ ಅವಕಾಶವಿರುತ್ತದೆ. ಆದರೆ ಈ ಬಾರಿ ಧನರಾಜ್ ಅವರಿಗೆ 3 ದಿನವಷ್ಟೇ ಅದರ ಅವಕಾಶ ಸಿಗಲಿದೆ. ಹೀಗಾಗಿ ಕಡಿಮೆ ಓಟ್ ಇವರ ಪಾಲಾಗುವ ಸಾಧ್ಯತೆ ಇದೆ. ಹೀಗಾಗಿ ಈ ವಾರ ಗೌತಮಿ ಮತ್ತು ಧನರಾಜ್ ಬಿಗ್ ಬಾಸ್ ಮನೆಯಿಂದ ಹೊರ ಹೋಗುವ ಸಾಧ್ಯತೆ ಹೆಚ್ಚಿದೆ.
ಮಂಗಳೂರು/ಮೈಸೂರು : ಗೆಳತಿ ದೂರವಾದಳೆಂದು ಗೆಳೆಯನು ಸೆಲ್ಫಿ ವಿಡಿಯೋ ಮಾಡಿ ತನ್ನ ದುಃಖವನ್ನು ಹಂಚಿಕೊಂಡು ಬಳಿಕ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ.
ಮೈಸೂರು ತಾಲ್ಲೂಕು ಯಲಚೇನಹಳ್ಳಿ ಗ್ರಾಮದ ನಿವಾಸಿ ವಿನಯ್ ಆ*ತ್ಮಹ*ತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.
ವಿನಯ್ ಹಾಗೂ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಸುತ್ತಾಟ ಓಡಾಟ ಜೋರಾಗಿತ್ತು. ಆದರೆ, ಹುಡುಗಿ ಕುಟುಂಬದವರು ಬೇರೆ ಹುಡುಗನ ಜೊತೆ ಮದುವೆ ಮಾಡಿಕೊಟ್ಟಿದ್ದರು. ಆದರೂ ಸಹ ಇಬ್ಬರ ಪ್ರೀತಿ, ಪ್ರಣಯ ಮುಂದುವರಿದಿತ್ತು. ಯುವತಿಯ ಮನೆಯವರು ಇವರ ಪ್ರೀತಿಯನ್ನು ಒಪ್ಪಿರಲಿಲ್ಲ. ಅಷ್ಟೇ ಅಲ್ಲದೇ, ಅವಳ ಇಚ್ಛೆಗೆ ವಿರುದ್ದವಾಗಿ ಬೇರೆ ಮದುವೆ ಮಾಡಿಸಿದ್ದರು. ಆದರೂ ಅವರಿಬ್ಬರ ಪ್ರೀತಿ ಮುಂದುವರೆದಿತ್ತು. ಯುವತಿ ಪೋಷಕರು ಈ ಪ್ರೀತಿಗೆ ಅಡ್ಡಿಯಾದರೂ. ಮಗಳು ಬೇರೆ ಹುಡುಗನ ಜೊತೆ ಮದುವೆಯಾದರೆ ಎಲ್ಲಾ ಸರಿಯಾಗುತ್ತೆ ಎಂಬುವುದು ಯುವತಿಯ ಮನೆಯವರ ಅಭಿಪ್ರಾಯವಾಗಿತ್ತು. ಆದರೆ ಆಗಿದ್ದೇ ಬೇರೆ. ಬೇರೆಯವನನ್ನು ಮದುವೆಯಾದರೂ ವಿನಯ್, ಆಕೆಯನ್ನು ಪ್ರೀತಿಸುವುದನ್ನು ಮಾತ್ರ ನಿಲ್ಲಿಸಿಲ್ಲ. ಯುವತಿ ಸಹ ತಾನು ಬೇರೆಯವನನ್ನು ಮದುವೆಯಾದರೂ ವಿನಯ್ ಜೊತೆ ಸಂಪರ್ಕ ಹೊಂದಿದ್ದಳು. ವಿನಯ್‌ನೊಂದಿಗೆ ಯುವತಿಯ ಸುತ್ತಾಟ ಮುಂದುವರೆದಿದ್ದು, ಕೆಲವು ಬಾರಿ ಮನೆ ಬಿಟ್ಟು ವಿನಯ್ ಜೊತೆ ಹೋಗಿದ್ದ ವೇಳೆ ಮನೆಯವರು ಹುಡುಕಿಕೊಂಡು ಬಂದಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
ಜನವರಿ 16 ರಂದು ಈ ವಿಚಾರವಾಗಿ ರಾಜಿ ಪಂಚಾಯತಿಯಾಗಿದ್ದು, ಅದರಿಂದ ವಿನಯ್ ಅವಮಾನಕ್ಕೊಳಗಾಗಿದ್ದ. ಕೊನೆಗೆ ಮಹಿಳೆಯೂ’ನಾನು ನನ್ನ ಪತಿ ಜೊತೆ ಹೋಗುವೆ’ ಎಂದು ಹೇಳಿದ್ದಳು. ಇದರಿಂದ ಅಸಮಧಾನಗೊಂಡ ವಿನಯ್ ಆಕೆಯನ್ನು ಸಂಪರ್ಕಿಸಲು ಸಾಕಷ್ಟು ಪ್ರಯತ್ನಿಸಿದ್ದಾನೆ. ಆದ್ರೆ ಪ್ರಯೋಜನವಾಗಿಲ್ಲ. ಇದರಿಂದ ಮನನೊಂದು ತನ್ನ ಸಹೋದರಿಯ ಮನೆಗೆ ಹೋಗಿ ನೇ*ಣಿಗೆ ಶರಣಾಗಿದ್ದಾನೆ. ಈ ಸಾ*ವಿಗೆ ಯುವತಿಯ ಮನೆಯವರೇ ಕಾರಣ ಎಂದು ವಿನಯ್ ಮನೆಯವರ ಆರೋಪ ಮಾಡಿದ್ದಾರೆ. ‘ಅವರಿಬ್ಬರು ಚೆನ್ನಾಗಿಯೇ ಇದ್ದರು, ಅವರ ಮನೆಯವರು ಅವಮಾನ ಮಾಡಿದ್ದಕ್ಕೆ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಅವರಿಗೆ ತಕ್ಕ ಶಿಕ್ಷೆ ಆಗಬೇಕು’ ಅನ್ನೋದು ವಿನಯ್ ಮನೆಯವರ ಒತ್ತಾಯ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಗೆ ವಿನಯ್ ಸಂಬಂಧಿಕರು ದೂರು ನೀಡಿದ್ದಾರೆ.
ಪ್ರೀತಿ ಪರಿಶುದ್ಧವಾಗಿತ್ತು , ಆದರೆ ಕುಟುಂಬಕ್ಕೆ ಅದೇ ಪ್ರೀತಿ ಕಳಂಕವಾಗಿ ಕಂಡಿತ್ತು. ಮನೆಯವರ ಸ್ವಾರ್ಥಕ್ಕೆ ಇಲ್ಲಿ ಒಂದು ಜೀವ ಬ*ಲಿಯಾಗಿದೆ. ಮಗಳು ಮನೆ ಮರ್ಯಾದೆ ಹೌದು ಆದರೆ ಅವಳ ಭಾವನೆಗೂ ಸ್ಪಂದಿಸುವ ಗುಣ ಮನೆಯವರಲ್ಲಿರಬೇಕು. ಅವಳ ಜೀವನ, ಅವಳ ಇಷ್ಟ, ಅವಳ ಆಯ್ಕೆಯಾಗಿರುತ್ತದೆ. ಒಂದು ವೇಳೆ ವಿನಯ್‌ನನ್ನು ಯುವತಿಯ ಮನೆಯವರು ಒಪ್ಪಿದ್ದಲ್ಲಿ ಒಂದು ಜೀವ ಬದುಕುಳಿಯುತ್ತಿತ್ತು. ಇಬ್ಬರೂ ಸುಖವಾಗಿ ಸಂಸಾರ ನಡೆಸುತ್ತಾ ಜೊತೆಯಾಗಿ ಬಾಳಬಹುದಿತ್ತು. ಆದರೆ, ಎಲ್ಲವೂ ಕೈ ಮೀರಿಯಾಗಿತ್ತು. ಏನೇ ಇರಲಿ, ಮದುವೆಯ ನಂತರವೂ ಪ್ರೀತಿಯ ಹುಚ್ಚಾಟಕ್ಕೆ ಬಿದ್ದು ವಿನಯ್ ಪ್ರಾ*ಣ ಕಳೆದುಕೊಂಡದ್ದು ಮಾತ್ರ ದುರಂತವೇ ಸರಿ.
ಮಂಗಳೂರು/ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ (ಜ.17) ರಾತ್ರಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀಯವರು ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನದಲ್ಲಿ ಮಂಥರೆ ಪಾತ್ರದಲ್ಲಿ ಅಭಿನಯಿಸಿದರು.
ಯಕ್ಷಗಾನ ರಂಗದಲ್ಲಿ ಹಾಸ್ಯಗಾರರು ನಿರ್ವಹಿಸುವ ಪಾತ್ರಗಳಲ್ಲಿ ಒಂದು ಎಂದೇ ಪರಿಗಣಿಸಲ್ಪಟ್ಟ ಮಂಥರೆಯ ವೇಷದೊಂದಿಗೆ ಮೊದಲ ಬಾರಿಗೆ ಯಕ್ಷರಂಗದಲ್ಲಿ ಉಮಾಶ್ರೀಯವರು ಪಾತ್ರ ನಿರ್ವಹಿಸಿದರು.
ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗ ನಡೆಯಿತು.
ಪೆರ್ಡೂರು ಮೇಳದ ಪ್ರಧಾನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಪದ್ಯಕ್ಕೆ ಹೆಜ್ಜೆ ಹಾಕುತ್ತಾ ತನ್ನ ಅಭಿನಯದ ಚಾಕಚಕ್ಯತೆಯನ್ನು ತೋರುತ್ತಾ ರಂಗಸ್ಥಳವೇರಿದ ನಟಿಗೆ ಕೂತುಹಲಕಾರಿಯಾಗಿ ಕಾಯುತ್ತಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಕೈಕೇಯಿ ಪಾತ್ರದಲ್ಲಿ ಖ್ಯಾತ ಸ್ತ್ರೀ ಪಾತ್ರಧಾರಿ ಯಲಗುಪ್ಪ ಸುಬ್ರಮಣ್ಯ ಹೆಗಡೆ ಉಮಾಶ್ರೀಯವರೊಂದಿಗೆ ಸಂಭಾಷಣೆಯಲ್ಲಿ ಗಮನ ಸೆಳೆದರು.
ಮಂಥರೆ ಪಾತ್ರವನ್ನು ಉಮಾಶ್ರೀ ಅವರು ತುಂಬಾನೇ ಚೆನ್ನಾಗಿ ಮಾಡಿದ್ದಾರೆ. ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿರೋ ಉಮಾಶ್ರೀ ಅವರು, ಈ ಒಂದು ಮಂಥರೆ ಪಾತ್ರದ ಮೂಲಕವೇ ಹೊನ್ನಾವರದ ಜನರ ಹೃದಯ ಗೆದ್ದಿದ್ದಾರೆ ಅಂತಲೂ ಹೇಳಬಹುದು.
ಉಮಾಶ್ರೀ ಮಂಥರೆ ಪಾತ್ರ ಮಾಡಲು ಕಾರಣ ಏನು?
ಉಮಾಶ್ರೀ ಅವರಿಗೆ ಮಂಥರೆ ಪಾತ್ರ ಹೊಸದೇ ಆಗಿದೆ. ಇಲ್ಲಿವರೆಗೂ ಈ ರೀತಿಯ ಪಾತ್ರ ಮಾಡಿದ್ದೇ ಇಲ್ಲ. ಆದರೆ, ಈ ಒಂದು ಪಾತ್ರ ಮಾಡೋಕೆ ಕಾರಣವೂ ಇದೆ. ಆ ಕಾರಣದ ಹೆಸರು ರಾಮಚಂದ್ರ ಚಿಟ್ಟಾಣಿ ಅಂತಲೇ ಹೇಳಬೇಕಾಗುತ್ತದೆ.
ಯಕ್ಷಗಾನದಲ್ಲಿ ದಿಗ್ಗಜ ಕಲಾವಿದರ ಸಾಲಿನಲ್ಲಿ ರಾಮಚಂದ್ರ ಚಿಟ್ಟಾಣಿಯವರೂ ಒಬ್ಬರು. ದಿವಂಗತ ರಾಮಚಂದ್ರ ಚಿಟ್ಟಾಣಿಯವರಿಗೆ ಉಮಾಶ್ರೀ ಯಕ್ಷಗಾನದಲ್ಲಿ ಪಾತ್ರ ಮಾಡಬೇಕೆಂದಿತ್ತಂತೆ. ಮಂಥರೆ ಪಾತ್ರ ಮಾಡುವಂತೆ ಕೇಳಿದಾಗ ಉಮಾಶ್ರೀ ನನಗೆ ಯಕ್ಷಗಾನದಲ್ಲಿ ಅನುಭವವಿಲ್ಲ. ಹೀಗಾಗಿ ಹೇಗೆ ಮಾಡಲಿ ಎಂದು ಹಿಂದೇಟು ಹಾಕಿದ್ದರಂತೆ.
ಇತ್ತೀಚೆಗೆ ಅವರ ಮಗ ಸುಬ್ರಹ್ಮಣ್ಯ ಚಿಟ್ಟಾಣಿಯವರು ಮಂಥರೆಯ ಪಾತ್ರ ಮಾಡಲು ಕೋರಿಕೊಂಡಾಗ ರಾಮಚಂದ್ರ ಚಿಟ್ಟಾಣಿಯವರ ಮೇಲಿನ ಗೌರವದಿಂದ ಪಾತ್ರ ಮಾಡಲು ಒಪ್ಪಿಕೊಂಡರಂತೆ. ಈ ಮೂಲಕ ಅವರ ಆತ್ಮಕ್ಕೆ ತೃಪ್ತಿ ಸಿಗಲಿ ಎಂದು ಪಾತ್ರ ಮಾಡಲು ಒಪ್ಪಿಕೊಂಡೆ ಎಂದಿದ್ದಾರೆ.
ನಿನ್ನೆ ರಾತ್ರಿ ನಡೆದ ಯಕ್ಷಗಾನ ಪ್ರಸಂಗದಲ್ಲಿ ಮಂಥರೆಯ ಪಾತ್ರದಲ್ಲಿ ಮಿಂಚಿದ ಉಮಾಶ್ರೀ ತಮ್ಮೊಳಗಿನ ಮತ್ತೊಂದು ಪ್ರತಿಭೆಯ ಪ್ರದರ್ಶನ ಮಾಡಿ ಸೈ ಎನಿಸಿಕೊಂಡಿದ್ದಾರೆ.