Connect with us

  LATEST NEWS

  Udupi: ದೇವಸ್ಥಾನಕ್ಕೆ ಪೂಜೆಗೆ ಹೊರಟ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು..!

  Published

  on

  ಕುಂದಾಪುರದ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ.

  ಉಡುಪಿ: ಕುಂದಾಪುರದ ಕಮಲಶಿಲೆ ದೇವಸ್ಥಾನಕ್ಕೆ ಪೂಜೆಗೆಂದು ಹೊರಟ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಜು.5ರಂದು ನಡೆದಿದೆ.

  ಮೃತ ವ್ಯಕ್ತಿಯನ್ನು ಕಮಲಶಿಲೆ ತಪ್ಪಲು ನಿವಾಸಿ ಶೇಷಾದ್ರಿ ಐತಾಳ್ (75) ಎಂದು ಗುರುತಿಸಲಾಗಿದೆ.

  ಮಾಹಿತಿ ಪ್ರಕಾರ ಶೇಷಾದ್ರಿ ಐತಾಳ್ ಕಮಲ ಶಿಲೆ ದೇವಳಕ್ಕೆ ಪೂಜೆಗೆಂದು ಆಗಮಿಸಿದ್ದರು.

  ಈ ವೇಳೆ ಕಮಲಶಿಲೆ ದೇವಾಲಯದ ಪಕ್ಕದಲ್ಲಿ ಹರಿಯುವ ಕುಬ್ಜಾ ನದಿಗೆ ಇಳಿದ ಸಂದರ್ಭ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ.

  ನದಿಗೆ ಬಿದ್ದ ಜಾಗದ ಸುಮಾರು ನೂರು ಮೀಟರ್ ದೂರಲ್ಲಿ ಶವ ಪತ್ತೆಯಾಗಿದ್ದು, ಮುಳುಗು ತಜ್ಞ ಮಂಜುನಾಥ್ ನಾಯಕ್ ತಂಡದಿಂದ ಶವ ಪತ್ತೆ ಕಾರ್ಯ ನಡೆಸಿದೆ.

  ಈ ಪ್ರಕರಣ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

  DAKSHINA KANNADA

  ಅಗಲಿದ ಇಬ್ಬರು ಪತ್ರಕರ್ತರಿಗೆ ದ.ಕ. ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

  Published

  on

  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿದ್ದ ಮಂಗಳೂರಿನ ಹಿರಿಯ ಫೋಟೊ ಜರ್ನಲಿಸ್ಟ್ ಅಲ್ಫ್ರೆಡ್ ಡಿಸೋಜ ಮತ್ತು ಕ್ಯಾಮೆರಾಮ್ಯಾನ್ ಚಿಕ್ಕನರಗುಂದ ನಿವಾಸಿ ವೀರೇಶ್ ಕಡ್ಲಿಕೊಪ್ಪ ಅವರು ಇತ್ತೀಚೆಗೆ ನಿ*ಧನರಾಗಿದ್ದು, ಈ ಬಗ್ಗೆ ಶ್ರದ್ಧಾಂಜಲಿ ಸಭೆ ಇಂದು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆಯಿತು.

  ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ, ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಂಗಳೂರು ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಮತ್ತಿತರರು ನುಡಿ ನಮನ ಸಲ್ಲಿಸಿದರು. ಪತ್ರಿಕಾ ಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್‌. ಹಾಗೂ ಸಂಘದ ಇತರ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಒಳಗೊಂಡಂತೆ ಉಪಸ್ಥಿತರಿದ್ದ ಎಲ್ಲರೂ ಅಗಲಿದ ಇಬ್ಬರು ಪತ್ರಕರ್ತರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

   

  ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ ಅವರು ಮಾತನಾಡಿ, ಇಬ್ಬರು ಪತ್ರಕರ್ತರ ಅಗ*ಲಿಕೆಯಿಂದ ಜಿಲ್ಲೆಯ ಮಾಧ್ಯಮ ಲೋಕಕ್ಕೆ ಅಪಾರ ನಷ್ಟವಾಗಿದೆ. ಕ್ಯಾಮೆರಾಮ್ಯಾನ್ ವೀರೇಶ್ ತನ್ನ ಊರು ಚಿಕ್ಕ ನರಗುಂದಕ್ಕೆ ಹೋಗಿದ್ದ ವೇಳೆ ಅಲ್ಲಿ ನಿಧ*ನರಾಗಿದ್ದಾರೆ. ಅವರ ಸಾವಿನ ಬಗ್ಗೆ ಅನೇಕ ಸಂಶಯಗಳಿವೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಸರಕಾರವನ್ನು ಒತ್ತಾಯಿಸಲಾಗುವುದು. ಸ್ಪೀಕರ್ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಈ ಕುರಿತಂತೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

  ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ.ಬಿ. ಹರೀಶ್‌ ರೈ ಅವರು ಫೋಟೊ ಜರ್ನಲಿಸ್ಟ್ ಅಲ್ಫ್ರೆಡ್ ಡಿ’ಸೋಜಾ ಆಕಸ್ಮಿಕವಾಗಿ ಹೃದಯಾಘಾ*ತದಿಂದ ನಿಧ*ನರಾಗಿರುವುದನ್ನು ಉಲ್ಲೇಖಿಸಿ, ಎಲ್ಲಾ ಪತ್ರಕರ್ತರು ಆಗಿಂದಾಗ್ಗೆ ಆರೋಗ್ಯ ತಪಾಸಣೆಯನ್ನು ಮಾಡುತ್ತಿರಬೇಕು. ಕೆಲಸದ ಒತ್ತಡದ ನಡುವೆಯೂ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕೆಂದು ಸಲಹೆ ಮಾಡಿದರು.

  Continue Reading

  LATEST NEWS

  ಕಾಲೇಜು ಕ್ಯಾಂಟೀನ್‌ನಲ್ಲಿ ವಿದ್ಯಾರ್ಥಿನಿಯರ ಡಿಶುಂ..ಡಿಶುಂ..!! ವೀಡಿಯೋ ವೈರಲ್

  Published

  on

  ಅಮಿಟಿ/ಮಂಗಳೂರು: ಇಲ್ಲೊಂದು ವಿಶ್ವವಿದ್ಯಾನಿಲಯದ ಕಾಲೇಜು ವಿದ್ಯಾರ್ಥಿನಿಯರಿಬ್ಬರು ಕಾಲೇಜು ಕ್ಯಾಂಟೀನ್‌ನಲ್ಲಿ ಹೊಡೆದಾಡಿಕೊಂಡಿರುವ ವೀಡಿಯೋ ಭಾರಿ ವೈರಲ್ ಆಗುತ್ತಿದೆ. ಈ ಹಿಂದೆ ಹಾಸ್ಟೆಲ್ ಹುಡುಗಿಯರ ಎರಡು ಗುಂಪಿನ ಮಧ್ಯೆ ಚಕಾಮಕಿ ನಡೆದಿದ್ದು ಬಳಿಕ ಹೊಯಿ-ಕೈಗೆ ತಿರುಗಿತ್ತು. ಜುಟ್ಟು ಜುಟ್ಟು ಹಿಡಿದುಕೊಂಡು ಗಲಾಟೆ ಮಾಡಿದ್ದ ವೀಡಿಯೋ ಸಾಮಾಜಿಕ ಜಾಲತಾನದಲ್ಲಿ ಭಾರೀ ವೈರಲ್ ಆಗಿತ್ತು. ಇವರೆಲ್ಲಾ ಸಮಾಜಕ್ಕೆ ಏನು ಸಂದೇಶ ಕೊಡಲು ಸಾಧ್ಯ. ನಮ್ಮ ದೇಶದ ಮುಂದಿನ ಪೀಳಿಗೆ ಎತ್ತ ಸಾಗುತ್ತಿದೆ ಅನ್ನುವುದು ಪ್ರಶ್ನೆಯಾಗಿದೆ.

  ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಕಾಲೇಜು ಕ್ಯಾಂಟೀನ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮಧ್ಯೆ ಮೊದಲು ಮಾತಿಗೆ ಮಾತು ಬೆಳೆದಿದೆ. ಬಳಿಕ ಮಾತು ಅತಿರೇಕಕ್ಕೆ ತಿರುಗಿ ಹೊಯಿ ಕೈ ನಡೆಸಿದ್ದಾರೆ. ಕಾಲೇಜು ಕ್ಯಾಂಟೀನ್‌ ತುಂಬಾ ವಿದ್ಯಾರ್ಥಿಗಳಿದ್ದರೂ ಕ್ಯಾರೇ ಅನ್ನದೇ ತಮ್ಮ ಗಲಾಟೆಯನ್ನು ಮುಂದುವರಿಸಿದ್ದಾರೆ. ವಿದ್ಯಾರ್ಥಿನಿಯರ ಜಗಳ ನೋಡಿ ಒಬ್ಬಾಕೆ ಮಧ್ಯ ಪ್ರವೇಶಿಸಿ ಕಾದಾಟವನ್ನು ನಿಲ್ಲಿಸಲು ಮುಂದಾಗುತ್ತಾರೆ. ಅದರೂ ಕೇಳದ ಈ ವಿದ್ಯಾರ್ಥಿನಿಗಳು ಒಬ್ಬರ ಮೇಲೆ ಒಬ್ಬರು ಬಿದ್ದುಕೊಂಡು ಹೊಡೆದಾಡುತ್ತಾರೆ. ಪಕ್ಕದಲ್ಲಿದ್ದ ಇತರ ವಿದ್ಯಾರ್ಥಿಗಳು ಹೇ ಮೇಜು ಮುರಿದು ಹೋಯಿತು ಎಂದು ಬೊಬ್ಬೆ ಹೊಡೆಯುತ್ತಾರೆ.

  ಈ ವಿಡಿಯೋ ಹಲವು ಎಕ್ಸ್​​ ಖಾತೆಯಲ್ಲಿ ವೈರಲ್​ ಆಗಿದ್ದು, ಈ ಬಗ್ಗೆ ಕಮೆಂಟ್​​ ಮಾಡಿದ ನೆಟ್ಟಿಗರು, ಇದು ಹುಡುಗಿಯರ WWE ಎಂದು ಹೇಳಿದ್ದಾರೆ. ಪ್ರತಿಯೊಂದು ಕಾಲೇಜಿನಲ್ಲೂ ಈ ಹುಡುಗಿಯರ ಜಗಳ ಇರುತ್ತದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಈ ಯುವ ಸಮಾಜ ಎತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.

  Continue Reading

  BANTWAL

  ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

  Published

  on

  ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

  ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

  ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

  ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

  Continue Reading

  LATEST NEWS

  Trending