Connect with us

    DAKSHINA KANNADA

    ಮಂಗಳೂರು ಸಂತ ಜೋಸೆಫ್ ಇಂಜಿನಿಯರಿಂಗ್​ ಕಾಲೇಜಿಗೆ ಯುಜಿಸಿ ಸ್ವಾಯತ್ತತೆ

    Published

    on

    ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಹೊಸ ಸ್ವಾಯತ್ತ ಸ್ಥಾನಮಾನ ಸಿಕ್ಕಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿಗೆ ಮೊದಲ ಬಾರಿಗೆ ಯುಜಿಸಿಯಿಂದ ಸ್ವಾಯತ್ತತೆ ದೊರಕಿದಂತಾಗಿದೆ.

    ಈ ಬಗ್ಗೆ  ಕಾಲೇಜಿನ ಪ್ರಾಂಶುಪಾಲ ಡಾ. ರಿಯೋ ಡಿಸೋಜ ಸುದ್ದಿಗೋಷ್ಟಿ ಕರೆಯಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಯುಜಿಸಿ ತಜ್ಞರ ತಂಡವು 2020ರ ನವೆಂಬರ್‌ 28, 29ರಂದು ಕಾಲೇಜಿಗೆ ಭೇಟಿ ನೀಡಿ ಸಂಸ್ಥೆ ಕುರಿತು ಮಾಹಿತಿ ಪಡೆದುಕೊಂಡಿತ್ತು.
    ಆದರೆ ಇದೀಗ ಬೆರಳೆಣಿಕೆಯಷ್ಟು ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ನಮ್ಮ ಸಂಸ್ಥೆಯೂ ಸ್ಥಾನ ಮಾನವನ್ನು ಪಡೆದುಕೊಂಡಿರುವುದು ಕಾಲೇಜಿನ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿ, ಸ್ವಾಯತ್ತತೆಯ ಪ್ರಮಾಣಪತ್ರವನ್ನು ಪ್ರದರ್ಶಿಸಿದರು.
    ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ನಿರ್ದೇಶಕ ವಿಲ್ಪ್ರೇಡ್‌ ಪ್ರಕಾಶ ಡಿ ಸೋಜ, ಉಪನಿರ್ದೇಶಕರಾದ ರೋಹಿತ್‌ ಡಿ ಕೋಸ್ತಾ, ಆಲ್ವಿನ್‌ ರಿಚಾರ್ಡ್‌ ಡಿ ಸೋಜಾ, ರಾಕೇಶ್‌ ಲೋಬೋ, ಡಾ. ಶ್ರೀರಂಗ ಭಟ್‌ ಮೊದಲಾದವರು ಉಪಸ್ಥಿತರಿದ್ದರು.

    ಈ ಬಗ್ಗೆ ಮಾತನಾಡಿದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ರಿಯೋ ಡಿಸೋಜ, ಕರ್ನಾಟಕದ ಕೆಲವೇ ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿ ಸ್ವಾಯತ್ತತೆ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾಯತ್ತತೆ ಪಡೆದಿರುವ ಮೊದಲ ಇಂಜಿನಿಯರಿಂಗ್ ಕಾಲೇಜು ನಮ್ಮದೆಂಬುದು ಹೆಮ್ಮೆಯ ವಿಚಾರ.

    ಇದರಿಂದಾಗಿ ಉದ್ಯಮದ ಅಗತ್ಯತೆಗಳನ್ನು ಗುರುತಿಸುವ ಮೂಲಕ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲು, ಆಯ್ಕೆಯ ಚುನಾಯಿತ ಕೋರ್ಸುಗಳನ್ನು ನೀಡಲು, ವಿದೇಶಿ ವಿಶ್ವವಿದ್ಯಾನಿಲಯಗಳೊಂದಿಗೆ ಸಹಯೋಗ ನಡೆಸಲು ಮತ್ತು ವಿದ್ಯಾರ್ಥಿಗಳು ನಿರಂತರ ಮೌಲ್ಯಮಾಪನ ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

    https://youtu.be/_SvVJQQ6EqY

    DAKSHINA KANNADA

    ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಗೆ ಗೌರವ ಡಾಕ್ಟರೇಟ್ ಪ್ರದಾನ

    Published

    on

    ಮಂಗಳೂರು : ಕರಾವಳಿ ಮೂಲದ ಕನ್ನಡ ಚಲನ ಚಿತ್ರ ರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ.

    ಬೆಂಗಳೂರು ವಿವಿಯು ಈ ಗೌರವ ಡಾಕ್ಟರೇಟ್ ನೀಡಿ ಗುರುಕಿರಣ್ ಅವರನ್ನು ನೀಡಿ ಗೌರವಿಸಿದೆ. ಸೆಪ್ಟಂಬರ್ 10 ರಂದು ನಡೆದಿದ್ದ ವಿವಿ ಘಟಿಕೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

    ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಬೆಂಗಳೂರು ವಿವಿಯ ಈ ಪ್ರಶಸ್ತಿಯಿಂದ  ಗುರು ಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ.

    Continue Reading

    DAKSHINA KANNADA

    ಮಂಗಳೂರು : ತಾಯಿಯನ್ನು ರಕ್ಷಿಸಿದ ವಿದ್ಯಾರ್ಥಿನಿಗೆ ಜಿಲ್ಲಾಡಳಿತದಿಂದ ಸನ್ಮಾನ

    Published

    on

    ಮಂಗಳೂರು : ಆಟೋರಿಕ್ಷಾದಡಿಗೆ ಬಿದ್ದ ಅಮ್ಮನನ್ನು ರಕ್ಷಿಸಲು ಆಟೋರಿಕ್ಷಾವನ್ನೇ ಮೇಲಕ್ಕೆತ್ತಿ ಶೌರ್ಯ ಮೆರೆದ ಕಿನ್ನಿಗೋಳಿಯ ವೈಭವಿಗೆ ಇದೀಗ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಬಾಲಕಿಯ ಶೌರ್ಯವನ್ನು, ಸಕಾಲಿಕ ಪ್ರಜ್ಞೆಯನ್ನು ಕೊಂಡಾಡಿದ್ದರು.

    ಜೊತೆಗೆ ಜಿಲ್ಲಾಡಳಿತವೂ ಬಾಲಕಿಯ ಕಾರ್ಯ ಮೆಚ್ಚಿಕೊಂಡಿದೆ. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳವಾರ(ಸೆ.10) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವೈಭವಿಯನ್ನು  ಸನ್ಮಾನಿಸಿದರು.  ಪೇಟ, ಹಾರ ತೊಡಿಸಿ ಸನ್ಮಾನಿಸಿದರಲ್ಲದೆ,  ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು.

    ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿಯ ಪಾಲಕರು ಉಪಸ್ಥಿತರಿದ್ದರು.

    ಪೊಲೀಸ್ ಕಮಿಷನರ್ ಸನ್ಮಾನ :

    ಬಾಲಕಿ ವೈಭವಿಯ ಕಾರ್ಯವನ್ನು ಮೆಚ್ಚಿರುವ ಕಮಿಷನರ್ ಅನುಪಮ್ ಅಗರ್‌ವಾಲ್ ಅವರೂ ಪ್ರಶಂಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ ಕಚೇರಿ ವತಿಯಿಂದ ಕಮಿಷನರ್ ಅನುಪಮ್ ಅಗರ್‌ವಾಲ್ ಅವರು ಬಾಲಕಿಯ ಸಮಯಪ್ರಜ್ಞೆಯನ್ನು ಕೊಂಡಾಡಿದರಲ್ಲದೇ, ಆಕೆಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದ್ದಾರೆ.

    ಇದನ್ನೂ ಓದಿ : ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಅ*ಗ್ನಿ ಅವಘ*ಡ

    ಏನಿದು ಘಟನೆ?

    ಸೆಪ್ಟೆಂಬರ್ 6ರಂದು ಸಂಜೆ ಕಿನ್ನಿಗೋಳಿ ರಾಮನಗರ ಎಂಬಲ್ಲಿ ಚೇತನಾ ಯಾನೆ ಶ್ವೇತಾ ಎಂಬವರು ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾವೊಂದು ಡಿ*ಕ್ಕಿ ಹೊಡೆದಿತ್ತು. ಆಟೋರಿಕ್ಷಾ ಪಲ್ಟಿಯಾಗಿ ಚೇತನ ಅವರು ರಿಕ್ಷಾದಡಿಗೆ ಬಿದ್ದಾಗ ಅಲ್ಲೇ ಇದ್ದ 13 ವರ್ಷದ ಮಗಳು ವೈಭವಿ ಯಾರ ಸಹಾಯಕ್ಕೂ ಕಾಯದೇ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಅಮ್ಮನ ಪ್ರಾ*ಣ ಉಳಿಸಿದ್ದರು.

    Continue Reading

    DAKSHINA KANNADA

    ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಅ*ಗ್ನಿ ಅವಘ*ಡ

    Published

    on

    ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂ*ಕಿ ಕಾಣಿಸಿಕೊಂಡಿದ್ದು, ಅ*ಗ್ನಿಶಾಮಕ ದಳದವರು ಬೆಂ*ಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.

    ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

    ಇದನ್ನೂ ಓದಿ : ಛೀ! ಎಂಥ ಹೇಯ ಕೃ*ತ್ಯ; ಜೀವಂತ ಸಾಕು ನಾಯಿಯನ್ನು ಕಸ ವಿಲೇವಾರಿ ವಾಹನಕ್ಕೆ ತುಂಬಿಸಿದ ಮಾಲಕ

    ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ.

    Continue Reading

    LATEST NEWS

    Trending